Recent News

1 week ago

ಸೋಮವಾರ ಡಿಕೆಶಿ ಭವಿಷ್ಯ ನಿರ್ಧಾರ – ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಬೇನಾಮಿ ಆಸ್ತಿ ಗಳಿಕೆ ಆರೋಪ ಹೊತ್ತು ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಶಾಸಕ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ. ಸೋಮವಾರ ಬೆಳಗ್ಗೆ ದೆಹಲಿ ಹೈಕೋರ್ಟ್ ನ ನ್ಯಾ.ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿಂದೆ ವಿಚಾರಣೆ ನಡೆಸಿದ್ದ ಪೀಠ ದಸರಾ ಹಬ್ಬದ ಹಿನ್ನೆಲೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ […]

1 week ago

ಐಎಂಎ ಪ್ರಕರಣ: ಓರ್ವ ಆರೋಪಿಗೆ ಜಾಮೀನು, ಮೂವರ ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಓರ್ವ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಮೂವರ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದೆ. ಐಎಂಎ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಾಲ್ವರು ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ್ ಫಣೀಂದ್ರ ಅವರಿದ್ದ ಏಕಸದಸ್ಯ ಪೀಠವು, ಆರೋಪಿಗಳಾದ ನಿಜಾಮುದ್ದೀನ್, ಅಫ್ಸರ್ ಪಾಶಾ, ಮೊಹಮ್ಮದ್...

ವಿಷ ಪ್ರಸಾದ ಕೇಸ್- ಹೈಕೋರ್ಟಿನಲ್ಲೂ ಇಮ್ಮಡಿ ಸ್ವಾಮೀಜಿ ಜಾಮೀನು ಅರ್ಜಿ ವಜಾ

4 weeks ago

ಚಾಮರಾಜನಗರ: 17 ಮಂದಿ ಸಾವಿಗೀಡಾಗಿ, 112 ಮಂದಿ ಭಕ್ತರು ತೀವ್ರ ಅಸ್ವಸ್ಥಗೊಂಡಿದ್ದ ಸುಳ್ವಾಡಿ ವಿಷಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇಮ್ಮಡಿ ಮಹದೇವಸ್ವಾಮೀಜಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನಲ್ಲಿ...

ಅಗತ್ಯವಿದ್ದಲ್ಲಿ ನಾನು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತೇನೆ – ಸುಪ್ರೀಂ ಮುಖ್ಯ ನ್ಯಾಯಮೂರ್ತಿ

1 month ago

ನವದೆಹಲಿ: ಅಗತ್ಯವಿದ್ದಲ್ಲಿ ಜಮ್ಮು ಕಾಶ್ಮೀರಕ್ಕೆ ಖುದ್ದು ಭೇಟಿ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಓಡಾಡುವುದು ಕಷ್ಟಕರವಾಗಿದೆ ಎಂದು ಕಾಶ್ಮೀರ ಟೈಮ್ಸ್ ಸಂಪಾದಕಿ ಅನುರಾಧಾ...

ತಲೆ ಮೇಲೆ ಬ್ಯಾನರ್ ಬಿದ್ದು 23 ವರ್ಷದ ಟೆಕ್ಕಿ ಸಾವು

1 month ago

ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಟೆಕ್ಕಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ. ಶುಭಾಶ್ರೀ(23) ಮೃತಪಟ್ಟ ಯುವತಿ. ಶುಭಾಶ್ರೀ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಕ್ರಮವಾಗಿ ಹಾಕಲಾಗಿದ್ದ ಎಐಎಡಿಎಂಕೆಯ ಬ್ಯಾನರ್ ಆಕೆಯ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಶುಭಾಶ್ರೀ...

ಲೇಟ್‍ನೈಟ್ ಪಬ್‍ಗಳ ಮೇಲೆ ಖಾಕಿ ನಿಗಾ

1 month ago

ಬೆಂಗಳೂರು: ಇತ್ತೀಚಿಗಷ್ಟೇ ಪಬ್‍ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಹೈಕೋರ್ಟ್ ಚಾಟಿ ಬೀಸಿತ್ತು. ಇದಾದ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಲೇಟ್‍ನೈಟ್ ಪಬ್‍ಗಳನ್ನು ಕ್ಲೋಸ್ ಮಾಡಿಸಿ ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗೆ ಇಂದಿರಾನಗರದಲ್ಲಿ ಸ್ಥಳೀಯರಿಗೆ ಪಬ್‍ಗಳಿಂದ ಶಬ್ದ ಮಾಲಿನ್ಯ ಆಗುತ್ತಿದೆ ಎಂದು ಸ್ಥಳೀಯರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು....

ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

1 month ago

ಹಾಸನ: ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಸೆಪ್ಟಂಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ...

ಡಿಕೆಶಿ ಅರ್ಜಿ ವಜಾ – ಇಡಿ ವಿಚಾರಣೆಗೆ ಗ್ರೀನ್ ಸಿಗ್ನಲ್

2 months ago

ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ ಹಾಜರಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ. ಇಡಿ ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಸಲ್ಲಿಸಿದ್ದ...