Tuesday, 22nd October 2019

1 week ago

ಎಲ್ಲಾ ಯೋಜನೆಗಳನ್ನ ತಂದ್ರೂ ನಮ್ಮನ್ನ ಕೈ ಬಿಟ್ಟುಬಿಟ್ರಲ್ಲ: ಬೇಸರ ವ್ಯಕ್ತಪಡಿಸಿದ ಸಿದ್ದರಾಮಯ್ಯ

– ಸಂವಿಧಾನ ಬದಲಾವಣೆಗೆ ಕೈ ಹಾಕಿದ್ರೆ ರಕ್ತ ಪಾತವಾಗುತ್ತೆ ದಾವಣಗೆರೆ: ನಮ್ಮ ಸರ್ಕಾರವು ಜನರ ಪರ ಯೋಜನೆಗಳನ್ನು ತಂದಿತ್ತು. ಆದರೂ ನಮ್ಮನ್ನ ಕೈ ಬಿಟ್ಟುಬಿಟ್ಟರಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಜನರ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಹರಿಹರದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದೆ. ಅದಕ್ಕಿಂತ ಮೊದಲು ಅನ್ನಭಾಗ್ಯ ಯೋಜನೆ ತೆಗೆದುಕೊಂಡು ಬಂದೆ. ಯಾರೂ ಹಸಿವಿನಿಂದ ಇರಬಾರದು ಎನ್ನುವುದು ನಮ್ಮ ಆಸೆ. ಇದು ಮಹಾತ್ಮ ಗಾಂಧಿಜೀಯವರ […]

2 weeks ago

ಪ್ರಧಾನಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸ್ತಾರೆ- ವಿ.ಎಸ್.ಉಗ್ರಪ್ಪ

ಬಳ್ಳಾರಿ: ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸುತ್ತಾರೆ. ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಇದೆ, ಹಿಟ್ಲರ್ ಪ್ರವೃತ್ತಿ ಮೋದಿಯವರಲ್ಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಮೋದಿಯವರ ಮುಂದೆ ಸ್ವಾಭಿಮಾನ ಕಳೆದುಕೊಂಡಿದ್ದಾರೆ. ಪ್ರಧಾನಿ ಭೇಟಿಗೆ ಬಿಎಸ್‍ವೈ ಅಪಾಯಿಂಟ್‍ಮೆಂಟ್ ಕೇಳಿದಾಗ...

ಖಾಲಿ ಹೊಡೀತಿದೆ ಇಂದಿರಾ ಕ್ಯಾಂಟೀನ್- ದಿನದಿಂದ ದಿನಕ್ಕೆ ಗ್ರಾಹಕರ ಸಂಖ್ಯೆಯಲ್ಲಿ ಇಳಿಕೆ

1 month ago

ತುಮಕೂರು: ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಬಡವರಿಗೆ ನೀಡಬೇಕೆಂಬ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದರು. ಮೊದಮೊದಲು ಚೆನ್ನಾಗಿ ನಡೆಯುತ್ತಿದ್ದ ಇಂದಿರಾ ಕ್ಯಾಂಟೀನ್‍ಗಳು ಇದೀಗ ಹಳ್ಳ ಹಿಡಿಯುವ ಸ್ಥಿತಿಗೆ ಬಂದಿದೆ. ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯರ...

ಇಂದಿರಾ ಕ್ಯಾಂಟೀನ್ ನಡೆಸಲು ದುಡ್ಡಿಲ್ಲ, ಮುಚ್ಚುವ ಹಂತ ತಲುಪಿವೆ – ಬಿಬಿಎಂಪಿ ಆಯುಕ್ತ

2 months ago

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಡೆಸಲು ದುಡ್ಡಿಲ್ಲ, ಮುಚ್ಚುವ ಹಂತ ತಲುಪಿವೆ ಎಂದು ಸ್ವತಃ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಇಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ಉತ್ತರಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 173 ಇಂದಿರಾ ಕ್ಯಾಂಟೀನ್,...

ಹಗರಣ, ಅಕ್ರಮದ ಹೆಸರಲ್ಲಿ ಜನಪ್ರಿಯ ಕಾರ್ಯಕ್ರಮ ಸ್ಥಗಿತಗೊಳಿಸುವ ಹುನ್ನಾರ – ದಿನೇಶ್ ಗುಂಡೂರಾವ್

2 months ago

– ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಬೆಂಗಳೂರು: ಹಗರಣ, ಅಕ್ರಮದ ಹೆಸರಿನಲ್ಲಿ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಾರೆ. ಇದೀಗ ಅದನ್ನೇ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ...

ಇಂದಿರಾ ಕ್ಯಾಂಟೀನ್ ಸಬ್ಸಿಡಿ ದುರುಪಯೋಗ – ತನಿಖೆಗೆ ಆದೇಶಿಸಿದ ಸಿಎಂ

2 months ago

ಬೆಂಗಳೂರು: ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ‘ಪಬ್ಲಿಕ್ ಟಿವಿ’ ವಿಶೇಷ ವರದಿ ಮಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ತನಿಖೆ...

ಇಂದಿರಾ ಕ್ಯಾಂಟೀನ್ ಅವ್ಯವಹಾರ- ಸಿಬಿಐ ತನಿಖೆಗೆ ಸಿಎಂ ಚಿಂತನೆ

2 months ago

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ತಡ ಬಿಬಿಎಂಪಿ ಬಜೆಟ್, ವೈಟ್ ಟ್ಯಾಪಿಂಗ್ ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳ ತನಿಖೆಗೆ ಒಪ್ಪಿಸಲಾಗಿದೆ. ಈಗ ಇಂದಿರಾ ಕ್ಯಾಂಟೀನ್ ಸರದಿ ಎಂಬ ಮಾತು ಹರಿದಾಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಗರಣ ಆರೋಪವಿರುವ ಎಲ್ಲ...

ಜನಪ್ರಿಯ ಯೋಜನೆಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ: ಬಿಎಸ್‍ವೈ

2 months ago

ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿದ್ದ ಯೋಜನೆಗಳಿಗೆ ಬಿ.ಎಸ್.ಯಡಿಯೂರಪ್ಪ ಬ್ರೇಕ್ ಹಾಕಲಿದ್ದಾರೆ. ಈ ಮೂಲಕ ಅನೇಕ ಯೋಜನೆಗಳು ರದ್ದು ಆಗಲಿವೆ ಎಂಬ ಮಾತು...