Recent News

2 days ago

ಜಮ್ಮು ಕಾಶ್ಮೀರದಲ್ಲಿ ಸೋಮವಾರದಿಂದ ಪೋಸ್ಟ್ ಪೇಯ್ಡ್ ಮೊಬೈಲ್ ಕಾರ್ಯಾರಂಭ

ಶ್ರೀನಗರ: ಜಮ್ಮು ಕಾಶ್ಮೀರದ ಸ್ಥಿತಿ ಸುಧಾರಿಸುತ್ತಿದ್ದು, ಸೋಮವಾರದಿಂದ ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ಜಮ್ಮು ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ಪೋಸ್ಟ್ ಪೇಯ್ಡ್ ಫೋನ್‍ಗಳು ಸೋಮವಾರ ಮಧ್ಯಾಹ್ನ 12ರಿಂದ ಜಮ್ಮು ಕಾಶ್ಮೀರದ ಉಳಿದ ಭಾಗಗಳಲ್ಲಿ ಕಾರ್ಯನಿರ್ವಹಿಸಲಿವೆ. ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಜಮ್ಮು ಕಾಶ್ಮೀರದ ಉಳಿದ ಪ್ರದೇಶಗಳಲ್ಲಿ ಮೊಬೈಲ್ ಫೊನ್ ಸೇವೆಗಳನ್ನು ಪುನಃ ಸ್ಥಾಪಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. Postpaid […]

1 week ago

ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ತಪ್ಪಿದ ಭಾರೀ ಅನಾಹುತ – 6 ಜನರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು 6 ಜನ ಗಂಭೀರ ಗಾಯಗೊಂಡಿದ್ದಾರೆ. ಶ್ರೀನಗರದಿಂದ 55 ಕಿ.ಮೀ. ದೂರದಲ್ಲಿರುವ ಅನಂತ್‍ನಾಗ್ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. #UPDATE Jammu...

ಅಯೋಧ್ಯೆ ಪ್ರಕರಣ ವಿಚಾರಣೆ – ಕಾಶ್ಮೀರ ಕುರಿತ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

2 weeks ago

ನವದೆಹಲಿ: ಅಯೋಧ್ಯೆ ಪ್ರಕರಣವನ್ನು ದಿನ ನಿತ್ಯ ವಿಚಾರಣೆ ನಡೆಸುತ್ತಿರುವುದರಿಂದ ಜಮ್ಮು ಕಾಶ್ಮೀರದ ಕುರಿತ ಅರ್ಜಿ ವಿಚಾರಣೆಯನ್ನು ಮಂಗಳವಾರದಿಂದ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ತಿಳಿಸಿದ್ದಾರೆ. ಅಯೋಧ್ಯೆ ಪ್ರಕರಣವನ್ನು ಪ್ರತಿ ನಿತ್ಯ ವಿಚಾರಣೆ ನಡೆಸುತ್ತಿರುವ ಕಾರಣ ನ್ಯಾಯಪೀಠಕ್ಕೆ ಸಮಯವಿಲ್ಲ. ಹೀಗಾಗಿ...

ಕಾಶ್ಮೀರದ ವಿಚಾರದಲ್ಲಿ ನೆಹರು ಮಾಡಿದ ತಪ್ಪು ಹಿಮಾಲಯಕ್ಕಿಂತ ದೊಡ್ಡದು – ಅಮಿತ್ ಶಾ

2 weeks ago

ನವದೆಹಲಿ: ಮಾಜಿ ಪ್ರಧಾನಿ ಜವಾಹರ್‍ಲಾಲ್ ನೆಹರು ವಿರುದ್ಧ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಕಾಶ್ಮೀರದ ದೀರ್ಘಕಾಲದ ಸಮಸ್ಯೆಗಳಿಗೆ ನೆಹರು ಅವರೇ ಕಾರಣ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಶ್ಮೀರವನ್ನು ಒಟ್ಟಾಗಿ ಕೊಂಡೊಯ್ಯುವ ವಿಚಾರದ...

ಯಾರನ್ನೂ ಕೆಣಕಲ್ಲ, ಕೆಣಕಿದರೆ ಬಿಡಲ್ಲ, ಕರಾವಳಿ ಭಾಗದಲ್ಲೂ ಉಗ್ರರನ್ನು ಎದುರಿಸಲು ಸಿದ್ಧ- ರಾಜನಾಥ್ ಸಿಂಗ್

2 weeks ago

ತಿರುವನಂತಪುರಂ: ಭಾರತದ ಕರಾವಳಿ ಭಾಗದಲ್ಲೂ ಉಗ್ರರ ಚಟುವಟಿಕೆಗಳು ಕಂಡುಬರುತ್ತಿದ್ದು, ದೇಶದ ಕರಾವಳಿ ಹಾಗೂ ಕಡಲ ಸುರಕ್ಷತೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ದೇಶದ ಯಾವುದೇ ಭಾಗದಲ್ಲಿ ಉಗ್ರರ ಚಟುವಟಿಕೆಗಳು ನಡೆದರೂ ಸುಮ್ಮನೆ ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಅಮೃತಾನಂದಮಯಿ...

ಸೇನೆಯ ಗುಂಡಿನ ದಾಳಿಗೆ ಎದ್ನೋ ಬಿದ್ನೋ ರೀತಿ ಓಡಿದ ಉಗ್ರರು – ವಿಡಿಯೋ ವೈರಲ್

2 weeks ago

ಶ್ರೀನಗರ: ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದಾಗ ಭಾರತೀಯ ಸೇನೆ ಗುಂಡಿನ ದಾಳಿಗೆ ಹೆದರಿ ಉಗ್ರರು ದಿಕ್ಕಾಪಾಲಾಗಿ ಓಡಿ ಹೋಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಜುಲೈ 30 ರಂದು ಕುಪ್ವಾರಾ ಸೆಕ್ಟರ್ ನಲ್ಲಿರುವ ಗಡಿನಿಯಂತ್ರಣ ರೇಖೆಯ ಬಳಿ ಮಧ್ಯಾಹ್ನ 1:32ರ ವೇಳೆಗೆ ಉಗ್ರರು...

ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ

3 weeks ago

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಕಾಶ್ಮೀರದಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯುವ ಯೋಚನೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ನಗರದ ಜಂಗಲ್ ಲಾಡ್ಜ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯಲು...

ಜಮ್ಮು ಕಾಶ್ಮೀರ ನಮಗೆ ರಾಷ್ಟ್ರೀಯತೆಯ ಪ್ರಶ್ನೆ: ಅಮಿತ್ ಶಾ

3 weeks ago

ಮುಂಬೈ: ಜಮ್ಮು ಕಾಶ್ಮೀರದ ವಿಚಾರ ಕಾಂಗ್ರೆಸ್‍ಗೆ ರಾಜಕೀಯದ ವಿಷಯವಾಗಿರಬಹುದು. ಆದರೆ ನಮಗದು ರಾಷ್ಟ್ರೀಯತೆಯ ಪ್ರಶ್ನೆ ಎಂದು ಅಮಿತ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿ ಕುರಿತ ವಿಚಾರಸಂಕಿರ್ಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...