Recent News

5 days ago

ಎಲ್‍ಒಸಿ ಬಳಿ ಪಾಕ್ ದಾಳಿ – ಇಬ್ಬರು ಸಾವು, ಆರು ಮಂದಿಗೆ ಗಾಯ

ಶ್ರೀನಗರ: ಎಲ್‍ಒಸಿ(ಗಡಿ ನಿಯಂತ್ರಣ ರೇಖೆ) ಬಳಿ ಪಾಕಿಸ್ತಾನ ಸೈನಿಕರು ಮಾಡಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಂಡಿ ಚೆಚಿಯನ್ ಪ್ರದೇಶದ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಇದಕ್ಕೆ ಭಾರತೀಯ ಸೇನೆ ಸೂಕ್ತವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇಂದು ಮಧ್ಯಾಹ್ನ 2:30ರ ಸುಮಾರಿಗೆ ಭಾರತದ ನಾಗರೀಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ […]

7 days ago

ಉಗ್ರ ಅಡಗುದಾಣಗಳ ಮೇಲೆ ದಾಳಿ- ಅಪಾರ ಪ್ರಮಾಣದ ಮದ್ದು, ಗುಂಡುಗಳು ವಶಕ್ಕೆ

ಶ್ರೀನಗರ: ಉಗ್ರರ ಅಡಗುದಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಮದ್ದು, ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಜಮ್ಮು ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ಹಾಗೂ ಸಿಆರ್‌ಪಿಎಫ್ ಜಂಟಿ ದಾಳಿ ನಡೆಸಿದ್ದು, ಶಸ್ತ್ರಾಸ್ತ್ರಗಳ ಜೊತೆಗೆ ಸ್ಯಾಟಲೈಟ್ ಫೋನುಗಳು ಹಾಗೂ ಇತರೆ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರ ಕಾಶ್ಮೀರದ ರಾಡಿಯಾಬಾದ್‍ನ ಸೋಪುರ್...

ಅನಂತ್‍ನಾಗ್‍ನಲ್ಲಿ ಗುಂಡಿನ ಚಕಮಕಿ- ಮೂವರು ಉಗ್ರರು ಹತ

2 months ago

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್‍ನ ಹೊರವಲಯದಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಮೂವರು ಉಗ್ರರು ಹತರಾಗಿದ್ದಾರೆ. ಅನಂತ್‍ನಾಗ್ ಜಿಲ್ಲೆಯ ಹೊರವಲಯದ ಬಿಜ್‍ಬೆಹರಾದಲ್ಲಿ ನಡೆದ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಯೋಧನಿಗೆ ಸಣ್ಣ ಪುಟ್ಟ ಕಾಯಗಳಾಗಿದ್ದು, ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಕಮಾಂಡರ್ ನಾಸಿರ್...

ಇಂದಿನಿಂದ ಪ್ರವಾಸಿಗರಿಗೆ ಜಮ್ಮು ಕಾಶ್ಮೀರ ಮುಕ್ತ

2 months ago

-2 ತಿಂಗಳ ಬಳಿಕ ನಿಷೇಧ ತೆರವು ನವದೆಹಲಿ: ಇಂದಿನಿಂದ ಪ್ರವಾಸಿಗರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಬಹುದು. ಎರಡು ತಿಂಗಳ ಬಳಿಕ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ಗುರುವಾರ ತೆರವುಗೊಳಿಸಲಾಗಿದೆ. 370ನೇ ವಿಧಿಯನ್ನು ರದ್ದು ಪಡಿಸಿದ ಬಳಿಕ ಭದ್ರತಾ ದೃಷ್ಟಿಯಿಂದ ಕಣಿವೆ ರಾಜ್ಯದಲ್ಲಿದ್ದ ಪ್ರವಾಸಿಗರನ್ನು...

ಪಾಕ್ ಉಗ್ರರು ದಾಳಿ ನಡೆಸುವ ಸಂಭವವಿದೆ ಎಚ್ಚರದಿಂದಿರಿ – ಭಾರತಕ್ಕೆ ಅಮೆರಿಕ ಎಚ್ಚರಿಕೆ

2 months ago

ವಾಷಿಂಗ್ಟನ್: ಪಾಕಿಸ್ತಾನದ ಭಯೋತ್ಪಾದಕ ಗುಂಪುಗಳು ಭಾರತದ ಮೇಲೆ ದಾಳಿ ನಡೆಸುವ ಸಂಭವವಿದ್ದು, ಈ ಕುರಿತು ಎಚ್ಚರಿಕೆಯಿಂದಿರಿ ಎಂದು ಅಮೆರಿಕ ಸೂಚಿಸಿದೆ. ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದಾಗಿನಿಂದ ಭಯೋತ್ಪಾದಕ ಗುಂಪುಗಳು ಚುರುಕಾಗಿವೆ. ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿವೆ...

ಸಂವಿಧಾನ ಪೀಠದಲ್ಲಿ ಕಾಶ್ಮೀರ ಅರ್ಜಿ ವಿಚಾರಣೆ – ಕೇಂದ್ರಕ್ಕೆ ನೋಟಿಸ್

3 months ago

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲ ಅರ್ಜಿಗಳ ವಿಚಾರಣೆ 5 ಮಂದಿ ನ್ಯಾಯಾಧೀಶರ ಸಂವಿಧಾನಿಕ ಪೀಠದಲ್ಲಿ ನಡೆಯಲಿದೆ. ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ....

ಬಾಯಿಗೆ ಬಂದಂತೆ ಪೋಸ್ಟ್ ಹಾಕಬೇಡಿ – ಪಾಕಿಸ್ತಾನ ಅಧ್ಯಕ್ಷರಿಗೆ ಟ್ವಿಟ್ಟರ್ ನೋಟಿಸ್

3 months ago

ಇಸ್ಲಾಮಾಬಾದ್: ಬಾಯಿಗೆ ಬಂದಂತೆ ಪೋಸ್ಟ್ ಹಾಕಬೇಡಿ, ಯೋಚಿಸಿ ಪೋಸ್ಟ್ ಹಾಕಿ ಎಂದು ಜಮ್ಮು ಕಾಶ್ಮೀರದ ಕುರಿತು ಪೋಸ್ಟ್ ಮಾಡಿದ್ದ ಪಾಕಿಸ್ತಾನದ ಅಧ್ಯಕ್ಷ ಆರೀಫ್ ಆಲ್ವಿ ಅವರಿಗೆ ಟ್ವಿಟ್ಟರ್ ಕಂಪನಿ ನೋಟಿಸ್ ನೀಡಿದೆ. ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ, ಪಾಕಿಸ್ತಾನದ...

ಕಾಶ್ಮೀರಕ್ಕಾಗಿ ಏನು ಬೇಕಾದ್ರೂ ಮಾಡಲು ಸಿದ್ಧ – ಬಾಲ ಬಿಚ್ಚಿದ ಪಾಕ್

3 months ago

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನ ಮಂತ್ರಿ ಇಂದು ತಮ್ಮ ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ಕಾಶ್ಮೀರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧವಿದೆ ಎಂದು ತಮ್ಮ ಮೊಂಡುತನವನ್ನ ಪ್ರದರ್ಶಿಸಿದ್ದಾರೆ. ಆರ್‍ಎಸ್‍ಎಸ್ ವಿಚಾರಧಾರೆಗಳಿಂದಾಗಿ ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ಭಾರತ ಹಿಂದೇಟು ಹಾಕುತ್ತಿದೆ. ಭಾರತವನ್ನು ಹಿಂದೂಗಳ ರಾಷ್ಟ್ರವನ್ನಾಗಿ...