Friday, 22nd November 2019

Recent News

6 days ago

ನಿಮ್ಮನ್ನು ಕೊಂದು ಸೇಡು ತೀರಿಸಿಕೊಳ್ಳುತ್ತೇವೆ – ಕೇರಳ ಸಿಎಂಗೆ ಮಾವೋವಾದಿಗಳಿಂದ ಪತ್ರ

ತಿರುವನಂತಪುರಂ: ತಮ್ಮ ಗುಂಪಿನ ಕೆಲ ನಕ್ಸಲರನ್ನು ಕೊಂದಿದ್ದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್‍ಗೆ ಮಾವೋವಾದಿಗಳು ಜೀವ ಬೆದರಿಕೆ ಪತ್ರ ರವಾನಿಸಿದ್ದಾರೆ. ಕೆಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಗಾಲಿ ಕಾಡುಗಳಲ್ಲಿ ಮಾವೋವಾದಿಗಳು ಮತ್ತು ಕೇರಳ ವಿಶೇಷ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದರು. ಈ ಸಾವಿನ ಪ್ರತೀಕಾರವನ್ನು ತೀರಿಸಿಕೊಳ್ಳಲು ಮುಖ್ಯಮಂತ್ರಿ ಅವರನ್ನು ಕೊಲ್ಲುತ್ತೇವೆ ಎಂದು ಪತ್ರ ಬರೆಯಲಾಗಿದೆ. ಈ ಪತ್ರವನ್ನು ಕೇರಳದ ವಡಕಾರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ಹತ್ಯೆಗೀಡಾದ ಮಾವೋವಾದಿಗಳಿಗೆ […]

2 weeks ago

ಪ್ರತಿ ಐಪಿಎಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸಿ: ಪಂಜಾಬ್ ಮಾಲೀಕ ಮನವಿ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಪ್ರತಿ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸುವಂತೆ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಬಿಸಿಸಿಐಗೆ ಪತ್ರ ಬರೆದಿರುವ ವಾಡಿಯಾ, ಐಪಿಎಲ್ ಟೂರ್ನಿಯ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಿದಕ್ಕೆ ಬಿಸಿಸಿಐ ನಡೆಯನ್ನು ಶ್ಲಾಘಿಸಿದ್ದಾರೆ. ಈ ವೇಳೆ 2020 ರ...

ಯಾರೋ ಬಾಲಕಿ ಮೂಲಕ ಪತ್ರ ಓದಿಸಿ, ವಿಡಿಯೋ ಮಾಡಿದ್ದಾರೆ: ಕಾರಜೋಳ

1 month ago

ಬೆಂಗಳೂರು: ಯಾರೋ ಬಾಲಕಿ ಮೂಲಕ ಪತ್ರ ಓದಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಅಲ್ಲಿ ಯಾವುದೇ ರೀತಿಯ ಪ್ರವಾಹ ಉಂಟಾಗಿಲ್ಲ. ರಸ್ತೆಯಲ್ಲಿ ನೀರು ನಿಂತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ತ ಬಾಲಕಿ ಪತ್ರ ಓದುವ ಮೂಲಕ ಪರಿಹಾರಕ್ಕೆ ಮನವಿ ಮಾಡಿದ ಕುರಿತು...

ಪ್ರವಾಹ ನೀರಲ್ಲಿ ನಿಂತು ಪತ್ರ ಓದಿ ಕಾರಜೋಳರ ವಿರುದ್ಧ ಬಾಲಕಿಯ ಆಕ್ರೋಶ

1 month ago

– ಒಂದು ರಸ್ತೆಯನ್ನು ಮಾಡದ ನೀವೆಂಥ ಜನಪ್ರತಿನಿಧಿಗಳು? – ಭಾರೀ ಚರ್ಚೆಗೆ ಗ್ರಾಸವಾಯ್ತು ವಿಡಿಯೋ ಬಾಗಲಕೋಟೆ: ಪ್ರವಾಹದ ನೀರಲ್ಲಿ ನಿಂತು ಪತ್ರದ ಮೂಲಕ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಬಾಲಕಿಯೊಬ್ಬಳು ಸವಾಲು ಹಾಕಿದ್ದಾಳೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಬೆಳಗಲಿಯ...

ಬಿಗ್ ಬಾಸ್ ನಿಷೇಧಿಸುವಂತೆ ಬಿಜೆಪಿ ಶಾಸಕನಿಂದ ಕೇಂದ್ರ ಸಚಿವರಿಗೆ ಪತ್ರ

1 month ago

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುತ್ತಿರುವ ಹಿಂದಿಯ ಬಿಗ್ ಬಾಸ್‍ನ 13ನೇ ಆವೃತ್ತಿಯ ಪ್ರಸಾರಕ್ಕೆ ತಡೆ ನೀಡಬೇಕೆಂದು ಬಿಜೆಪಿಯ ಗಾಜಿಯಾಬಾದ್ ಶಾಸಕ ನಂದ ಕಿಶೋರ್ ಗುಜ್ಜಾರ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ...

ಆಡಳಿತಾತ್ಮಕ ದೃಷ್ಟಿಯಿಂದ ಪ್ರತ್ಯೇಕ ಜಿಲ್ಲೆಗೆ ಪತ್ರ – ಪರಮೇಶ್ವರ್ ಸ್ಪಷ್ಟನೆ

2 months ago

ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಪ್ರತ್ಯೇಕ ಮಧುಗಿರಿ ಜಿಲ್ಲೆ ಮಾಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು ಆಡಳಿತಾತ್ಮಕ ದೃಷ್ಟಿಯಿಂದ ಮಧುಗಿರಿಯನ್ನ ತುಮಕೂರು ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ ಮಾಡಿ ಅಂತ ಪತ್ರ ಬರೆದಿದ್ದೇನೆ....

ಅರುಣ್ ಜೇಟ್ಲಿ ಪಿಂಚಣಿ ಹಣ ಬಡ ನೌಕರರಿಗೆ – ಪತ್ನಿಯಿಂದ ಮಹತ್ವದ ನಿರ್ಧಾರ

2 months ago

ನವದೆಹಲಿ: ಮಾಜಿ ಹಣಕಾಸು ಸಚಿವರಾದ ದಿವಂಗತ ಅರುಣ್ ಜೇಟ್ಲಿ ಅವರಿಗೆ ಬರುವ ಪಿಂಚಣಿ ಹಣವನ್ನು ಬಡ ನೌಕರರಿಗೆ ನೀಡಿ ಎಂದು ಅವರ ಪತ್ನಿ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಪತ್ರ ಬರೆದಿರುವ ಅರುಣ್ ಜೇಟ್ಲಿ ಅವರ...

ಕ್ಷಮಿಸು ಅಮ್ಮ, ನಾನು ಲವ್ ಮಾಡಿಲ್ಲ ಎಂದು ನೇಣಿಗೆ ಶರಣಾದ ಯುವಕ

2 months ago

ಲಕ್ನೋ: ಕ್ಷಮಿಸು ಅಮ್ಮ, ನಾನು ಹೋಗುತ್ತಿದ್ದೇನೆ. ನಾನು ಯಾವುದೇ ಯುವತಿಯನ್ನು ಲವ್ ಮಾಡಿಲ್ಲ ಎಂದು ಯುವಕನೊಬ್ಬ ಡೆತ್ ನೋಟ್ ಬರೆದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋದ ಜನಕಿಪುರಂನಲ್ಲಿ ಈ ಘಟನೆ ನಡೆದಿದ್ದು, ಭಾನು ಪ್ರತಾಪ್ ಸಿಂಗ್(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ....