Sunday, 18th August 2019

Recent News

1 year ago

ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

ತಿರುವನಂತಪುರಂ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. 31 ವರ್ಷದ ಲಿನಿ ಅವರು ಕೇರಳದ್ಯಾಂತ ಹೆಚ್ಚಿನ ಮಂದಿಯನ್ನು ಬಲಿ ಪಡೆಯುತ್ತಿರುವ ನಿಪಾ ವೈರಸ್ ಸೋಂಕು ತಗಲಿದ್ದ ರೋಗಿಗೆ ಚಿಕಿತ್ಸೆ ನೀಡುವ ವೇಳೆ ವೈರಸ್ ಹರಡಿ ಸಾವನ್ನಪ್ಪಿದ್ದರು. ವೈರಸ್ ಸೋಂಕು ತಗಲಿದ ವೇಳೆ ತನ್ನ ಕುಟುಂಬವನ್ನು ನೋಡಲು ಸಾಧ್ಯವಾಗದ ಲಿನಿ ತಮ್ಮ ಪತಿಗೆ […]

1 year ago

ಹೆದರಬೇಡಿ, ಮನೆಯವರೊಂದಿಗೆ ಕಾಲ ಕಳೆಯರಿ, ನಿಮಗಾಗಿ ಬದುಕುವುದೇ ನನ್ನ ಬದುಕು: ಬಿಎಸ್‍ವೈ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಕಾರಣದಲ್ಲಿ ಏರಿಳಿತದಿಂದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರಲಿಲ್ಲ. ಆದ್ರೆ ಇಂದು ರಾಜೀನಾಮೆ ಬಳಿಕ ಕಾರ್ಯಕರ್ತರನ್ನು ಹುರಿದುಂಬಿಸುವದಕ್ಕಾಗಿ ದೀರ್ಘ ಪತ್ರವೊಂದನ್ನು ಬರೆದಿದ್ದಾರೆ. ಎಲ್ಲ ಕಾರ್ಯಕರ್ತರು ಹೆದರಬೇಡಿ, ಸದ್ಯಕ್ಕೆ ಎಲ್ಲರೂ ತಾಳ್ಮೆಯಿಂದಿರಿ, ಮನೆಯವರೊಂದಿಗೆ ಕೆಲವು ದಿನಗಳನ್ನು ಸಂತೋಷದಿಂದ ಕಳೆಯಿರಿ. ಮತ್ತೆ ನಾನು ನಿಮ್ಮೊಂದಿಗೆ ಬೆರೆಯುತ್ತೇನೆ. ನಿಮಗಾಗಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

1 year ago

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಉಲ್ಲೇಖಿಸಿ ಐಪಿಎಸ್ ಅಧಿಕಾರಿಗಳ ಸಂಘ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳನ್ನ ಕೀಳು ಮಟ್ಟದಲ್ಲಿ ನೋಡುತ್ತಿದೆ. ಹಲವು ಪ್ರಕರಣಗಳ ತನಿಖೆ ವೇಳೆ ರಾಜಕಾರಣಿಗಳು ಹಸ್ತಕ್ಷೇಪ...

SSLC ಪಾಸ್ ಮಾಡು, ಗಂಡನಿಗೆ ಬುದ್ಧಿಕೊಡು, ಪ್ರೇಮಿಯ ಜೀವನ ಹಾಳು ಮಾಡು – ಸವದತ್ತಿ ಯಲ್ಲಮ್ಮನಿಗೆ ಪತ್ರ

1 year ago

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. ಇಲ್ಲಿಗೆ ನಿತ್ಯ ಲಕ್ಷಾಂತರ ಜನ ಭಕ್ತರು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಇಂತಹ ಶಕ್ತಿ ಪೀಠಕ್ಕೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ವಿವಿಧ ಹರಕೆಯನ್ನು ಹೋರುತ್ತಾರೆ. ಸವದತ್ತಿ ಯಲ್ಲಮ್ಮ...

ಐಟಿಯ 108 ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ: ಚಿಂದಿಯಾದ ಪತ್ರದಲ್ಲಿ ಏನಿತ್ತು?

2 years ago

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ 108 ಪ್ರಶ್ನೆಗಳಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಜಾಣತನದಿಂದ ಉತ್ತರ ನೀಡಿದ್ದಾರೆ. ಒಟ್ಟು 102 ಕೊಟಿ ರೂ. ಆಸ್ತಿ ಘೋಷಣೆ ಮಾಡಿರುವ ಡಿಕೆ ಶಿವಕುಮಾರ್, ಮನೆ ಅಥವಾ ಬ್ಯಾಂಕ್‍ಗಳಲ್ಲಿ ಯಾವುದೇ ಲಾಕರ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ...

ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

2 years ago

ಮಂಡ್ಯ: ನನ್ನ ಜಮೀನನ್ನು ವಶಪಡಿಸಿಕೊಂಡು ಸಾಲವನ್ನು ತೀರಿಸಿ ಎಂದು ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೋಳಾರೆ ಗ್ರಾಮದಲ್ಲಿ ನಡೆದಿದೆ....

ಮೋದಿ, ಯುಪಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೇಪ್ ಸಂತ್ರಸ್ತೆ!

2 years ago

ಲಕ್ನೋ: ರೇಪ್ ಸಂತ್ರಸ್ತೆಯೊಬ್ಬರು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಉನ್ನತ ಅಧಿಕಾರಿಗಳ ಪರಿಚಯವಿರುವುದರಿಂದ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ....

ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ಬ್ರೇಕ್

2 years ago

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 7 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಯಾವುದೇ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ಜನವರಿ 17 ರಂದು...