Wednesday, 19th June 2019

3 weeks ago

ಸಕ್ಕರೆ ನಾಡಲ್ಲಿಂದು ‘ಸ್ವಾಭಿಮಾನಿ’ಗಳ ವಿಜಯೋತ್ಸವ-ಸುಮಲತಾಗೆ ಜೋಡೆತ್ತುಗಳ ಸಾಥ್

ಮಂಡ್ಯ: ಸಕ್ಕರೆನಾಡು ಮಂಡ್ಯದ ಜನತೆ ಸುಮಲತಾ ಅಂಬರೀಶ್ ಅವರನ್ನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಅದರ ಫಲವಾಗಿ ಸುಮಲತಾ ಮತ್ತು ಬೆಂಬಲಿಗರು ಇಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸುವ ಮೂಲಕ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಸಕ್ಕರೆನಾಡು ಮಂಡ್ಯದ ಜನ ಸ್ವಾಭಿಮಾನಿಗಳು. ಅವರು ಮುಗ್ಧರೇ ಹೊರತು ಮೂರ್ಖರಲ್ಲ ಅಂತಾ ಹೇಳಿಕೊಂಡು ಸುಮಲತಾ ಚುನಾವಣೆಯಲ್ಲಿ ಮತ ಕೇಳಿದ್ದರು. ಹಾಗೆ ಮಂಡ್ಯ ಮತದಾರರು ಸೆರಗೊಡ್ಡಿ ಮತ ಕೇಳಿದ ಸೊಸೆ ಸುಮಲತಾರ ಕೈ ಬಿಡಲಿಲ್ಲ. ಬರೋಬ್ಬರಿ ಒಂದು ಕಾಲು ಲಕ್ಷ ಮತಗಳ ಅಂತರದಲ್ಲಿ […]

3 weeks ago

ವಿದೇಶ ಪ್ರವಾಸದಿಂದ ಬಂದ ಡಿಕೆಶಿಯಿಂದ ಮಾರ್ಮಿಕ ಮಾತು

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನ ವಿದೇಶ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್ ಸಚಿವ ಡಿ.ಕೆ.ಶಿವಕುಮಾರ್ ಇಂದು ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಮುಂದೆ ಕೆಲ ಮಾರ್ಮಿಕ ಮಾತು ಹೇಳಿ ಹೊರಟಿದ್ದಾರೆ. ವಿದೇಶ ಪ್ರವಾಸ ಮುಗಿಸಿ ಕುಟುಂಬದೊಂದಿಗೆ ರಾತ್ರಿ 12 ಗಂಟೆಗೆ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಮಾರ್ಮಿಕವಾಗಿ ಉತ್ತರಿಸಿದ ಸಚಿವರು,...

ಚುನಾವಣೆ ಸೋಲಿಗೆ ಶನಿದೋಷ ಕಾರಣ – 50 ಲಕ್ಷದ ನೀಲಮಣಿ ಹರಳು ಧರಿಸಿದ ಅಸ್ನೋಟಿಕರ್

3 weeks ago

ಕಾರವಾರ: ನಾನು ಚುನಾವಣೆಯಲ್ಲಿ ಸೋಲಲು ಶನಿದೋಷ ಕಾರಣ. ಈ ದೋಷವನ್ನು ಪರಿಹಾರ ಮಾಡಿಕೊಳ್ಳಲು 50 ಲಕ್ಷ ರೂ. ಮೌಲ್ಯದ ನೀಲಮಣಿ ಹರಳನ್ನು ತರಿಸಿದ್ದೇನೆ ಎಂದು ಉತ್ತರ ಕನ್ನಡ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...

ಜೋಡೆತ್ತು, ಬಿಜೆಪಿ ಬಲದಿಂದ ಸುಮಲತಾ ಅಂಬರೀಶ್ ಗೆದ್ದಾಯ್ತು, ಮುಂದೇನು?

3 weeks ago

ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪ್ರಚಂಡ ಬಹುಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಮುಂದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುದರ ಬಗ್ಗೆ ಜನರಲ್ಲಿ ಕುತೂಹಲ ಮೂಡಿಸಿದೆ. ಸದ್ಯಕ್ಕೆ ಬಿಜೆಪಿ ಸೇರ್ಪಡೆಯ ಬಗ್ಗೆ ಚಿಂತಿಸಿಲ್ಲ. ಮುಂದಿನ ದಿನಗಳಲ್ಲಿ ಮಂಡ್ಯ ಜನತೆಯೊಂದಿಗೆ...

ಪಕ್ಷದ ಪರ್ಫಾರಮೆನ್ಸ್ ಕಡಿಮೆ ಆಗಿದ್ದಕ್ಕೆ ರಾಹುಲ್ ಗಾಂಧಿ ಬೇಸರವಾಗಿದ್ದರೆ – ಜಿ. ಪರಮೇಶ್ವರ್

4 weeks ago

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ್ಫಾರಮೆನ್ಸ್ ಕಡಿಮೆ ಆಗಿದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸ್ವಾಭಾವಿಕವಾಗಿ ಬೇಸರವಾಗಿದೆ ಎಂದು ಉಪಮಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸೀಟ್ ಕಡಿಮೆ ಆಗಿದೆ ಎಂದು...

ವಿನಯ್ ಕುಲಕರ್ಣಿ ಸೋಲಿಗೆ ಗುಂಡೂರಾವ್, ದೇಶಪಾಂಡೆ ಕಾರಣ: ಬೆಂಬಲಿಗರ ಆರೋಪ

4 weeks ago

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸೋಲಿಗೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಮುಖಂಡ ಆರ್.ವಿ ದೇಶಪಾಂಡೆ ಕಾರಣ ಎಂದು ಮಾಜಿ ಸಚಿವರ ಬೆಂಬಲಿಗರು ಆರೋಪಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...

ವಿಶ್ವವೇ ಭಾರತದತ್ತ ಅಚ್ಚರಿಯಿಂದ ನೋಡುವಂತೆ ಮಾಡೋಣ – ಮೋದಿ

4 weeks ago

– ದೇಶದ ಜನತೆ ಫಕೀರನ ಜೋಳಿಗೆ ತುಂಬಿದ್ರು – ಭಾರತವನ್ನು ಸಮೃದ್ಧ ರಾಷ್ಟ್ರವನ್ನಾಗಿ ನಿರ್ಮಿಸೋಣ ನವದೆಹಲಿ: ಮೊದಲ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಕ್ಷೇತ್ರಗಳನ್ನು ಗೆದ್ದಿತ್ತು. ಇಂದು ಅದೇ ಬಿಜೆಪಿ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ...

ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ ಸೋಲು ಗೆಲುವಿನ ನಿರೀಕ್ಷೆ ಕಾವು- ರಾಯಚೂರಿನಲ್ಲಿ ಕೌಂಟಿಂಗ್ ಮಾತ್ರ ಕೂಲ್ ಕೂಲ್

4 weeks ago

ರಾಯಚೂರು: ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿಯ ಬಿರು ಬೇಸಿಗೆ ಹಿನ್ನೆಲೆ ಮತ ಎಣಿಕೆ ಕೊಠಡಿಗಳಲ್ಲಿ ವಿಶೇಷವಾಗಿ 40 ಕ್ಕೂ ಹೆಚ್ಚು ಏರ್ ಕೂಲರ್ ಹಾಗು ಎಸಿ ವ್ಯವಸ್ಥೆ ಮಾಡಲಾಗಿದೆ....