Wednesday, 13th November 2019

Recent News

6 months ago

ದೇವರಲ್ಲಿ ನಾನು ಏನನ್ನೂ ಬೇಡಿಲ್ಲ – ಧ್ಯಾನದ ಬಳಿಕ ಮೋದಿ ಮಾತು

ಡೆಹ್ರಾಡೂನ್: ನಾನು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದಾಗ ಹಾಗೂ ಧ್ಯಾನದ ವೇಳೆ ದೇವರಲ್ಲಿ ಏನನ್ನೂ ಬೇಡಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೇದಾರನಾಥ ಗುಹೆಯಲ್ಲಿ 20 ಗಂಟೆ ಧ್ಯಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮತಗಿಟ್ಟಿಸಲು ಗುಹೆಯೊಳಗೆ ಧ್ಯಾನ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಶಾಂತಿ, ಪ್ರಾರ್ಥನೆ ಹಾಗೂ ಧ್ಯಾನ ಮಾಡುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಈ ಸಂದರ್ಭದಲ್ಲಿ ನಾನು ದೇವರಲ್ಲಿ ಏನನ್ನೂ ಬೇಡಿಕೊಂಡಿಲ್ಲ ಎಂದು ಹೇಳುವ ಮೂಲಕ ತನ್ನ ಮೇಲೆ […]

7 months ago

ಫಸ್ಟ್ ಟೈಂ ಕಾಂಗ್ರೆಸ್ಸಿಗಿಂತ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಕಾಂಗ್ರೆಸ್ಸಿಗಿಂತ ಅತಿ ಹೆಚ್ಚು ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ ಇಲ್ಲಿಯವರೆಗೆ 437 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರೆ ಕಾಂಗ್ರೆಸ್ 425 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. 2014ರಲ್ಲಿ ಮೋದಿ ಅಧಿಕಾರಕ್ಕೆ ಏರಿದ ಬಳಿಕ ಬಿಜೆಪಿ ತನ್ನ ಮತಗಳಿಕೆಯನ್ನು ವೃದ್ಧಿಸಿದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ....

ಸುಮಲತಾಗೆ `ಕೈ’ ಕೊಟ್ಟ ಕಾಂಗ್ರೆಸ್ – ಇತ್ತ ಪ್ರಚಾರಕ್ಕಾಗಿ ನಟಿ ಫೋಟೋಶೂಟ್

8 months ago

ಮಂಡ್ಯ: ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ಸಿನಿಂದ ಟಿಕೆಟ್ ಸಿಗದಿದ್ದರೂ, ಅವರು ಚುನಾವಣಾ ಕೆಲಸಗಳಿಗೆ ಹಾಗೂ ಪ್ರಚಾರಕ್ಕೆ ಫೋಟೋಗಳನ್ನು ಬಳಸಲು ಫೋಟೋಶೂಟ್ ನಡೆಸಿದ್ದಾರೆ. ಚುನಾವಣಾ ಅಖಾಡಕ್ಕಿಳಿಯಲು ಸುಮಲತಾ ಅವರು ಭರ್ಜರಿ ತಯಾರಿ ನಡೆಸಿದ್ದಾರೆ. ಕಟೌಟ್ ಮತ್ತು ವೇದಿಕೆಗಳಲ್ಲಿ ಹೇಗೆ ರಾಜಕಾರಣಿಗಳ...

6 ತಿಂಗಳು ಮಾತ್ರ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಪ್ರಜ್ವಲಿಸೋದಾ?

12 months ago

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಭರ್ಜರಿ ಸರ್ಜರಿಯಾಗುವ ಸಾಧ್ಯತೆಯಿದ್ದು, ಸಂಘ, ಪಕ್ಷ ನಿಷ್ಠರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎನ್ನುವ ಸಲಹೆಯನ್ನು ಆರ್‌ಎಸ್‌ಎಸ್  ನಾಯಕರು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ನೀಡಿದ್ದಾರೆ. ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ನಡೆದ ಆರ್‌ಎಸ್‌ಎಸ್ ಬೈಠಕ್ ನಲ್ಲಿ ನಾಯಕರು ಅಮಿತ್ ಶಾ...

ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲ್ಯಾನ್‌ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ

12 months ago

ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ರಾಮಮಂದಿರ ನಿರ್ಮಾಣದ ಬಗ್ಗೆ ಕೇಂದ್ರ ಸರಕಾರ ಸುಗ್ರೀವಾಜ್ಞೆ ತರಬೇಕೆಂದು...