Wednesday, 18th July 2018

Recent News

1 day ago

ಸಿದ್ದರಾಮಯ್ಯಗೆ ‘ಕಾಂಗ್ರೆಸ್ ಹೈಕಮಾಂಡ್ ಭಾಗ್ಯ’

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್‍ನಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಉನ್ನತ ಸ್ಥಾನಗಳ ‘ಭಾಗ್ಯ’ ಸಿಗುತ್ತಿವೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಹೊಣೆಯ ಬೆನ್ನಲ್ಲೇ ಈಗ ಎಐಸಿಸಿ ಕಾರ್ಯಕಾರಿ ಸಮಿತಿಯಲ್ಲಿ ಅವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ 23 ಜನರ ಕಾರ್ಯಕಾರಿ ಸಮಿತಿ ರಚನೆಯಾಗಿದ್ದು, ಇದರಲ್ಲಿ ಕರ್ನಾಟಕದ ಸಿದ್ದರಾಮಯ್ಯ ಹಾಗೂ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಬದಲಿಗೆ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿದ್ದು, ವಿಶೇಷ […]

1 week ago

ಒಬ್ಬ ಚಾಯ್‍ವಾಲಾ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿಕೊಂಡು ಬಂದಿದೆ: ಮಲ್ಲಿಕಾರ್ಜುನ್ ಖರ್ಗೆ

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್‍ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಉಸ್ತುವಾರಿಯನ್ನು ವಹಿಸಿಕೊಂಡಿರುವ...

ಅಹಿಂದ ಮಂತ್ರ ಜಪಿಸಲು ಮುಂದಾದ ಸಿದ್ದುಗೆ ಶಾಕ್ ಟ್ರೀಟ್‍ಮೆಂಟ್ ಕೊಡಲು `ಕೈ’ಕಮಾಂಡ್ ತಂತ್ರ

3 weeks ago

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ನಾನು ಹೇಳಿದ ಮಾತೇ ನಡೆಯಬೇಕು ಅಂತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಐದು ವರ್ಷ ಇರತ್ತೋ ಇಲ್ಲವೋ ಹೇಳೋಕೆ ಆಗಲ್ಲ ಎಂಬ ವಿವಾದಾತ್ಮಕ ಹೇಳಿಕೆಯನ್ನು...

ರಾಹುಲ್ ನೀಡಿದ ಪರೀಕ್ಷೆಯಲ್ಲಿ ಪಾಸ್ ಆಗ್ತೀನಿ: ಮಲ್ಲಿಕಾರ್ಜುನ ಖರ್ಗೆ

3 weeks ago

ನವದೆಹಲಿ: ಮಹಾರಾಷ್ಟ್ರ ಉಸ್ತುವಾರಿಯಾಗಿ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಜವಾಬ್ದಾರಿ ವಹಿಸಿದ್ದಾರೆ....

ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಮತ್ತೊಂದು ಜವಾಬ್ದಾರಿ!

4 weeks ago

ಬೆಂಗಳೂರು: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಂದು ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೆರೆಯ ರಾಜ್ಯ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ....

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ

4 weeks ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಪರ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬ್ಯಾಟ್ ಬೀಸಿದ್ದಾರೆ. ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಹೈಕಮಾಂಡ್ ನಿರ್ಧಾರ ಗೊತ್ತಾಗುತ್ತಿದ್ದಂತೆ ಮಲ್ಲಿಕಾರ್ಜುನ...