6 months ago

ಕೊಡಗಿನಲ್ಲಿ ಮಳೆ – ಮದೆನಾಡು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿತ

ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮತ್ತೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಸ್ತೆಗೆ ಮಣ್ಣು ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಕಷ್ಟವಾಗುತ್ತಿದೆ. ಮದೆನಾಡು ಬಳಿ ರಾತ್ರಿ 12 ಗಂಟೆಗೆ ಮೇಲೆ ಗುಡ್ಡ ಕುಸಿದಿದೆ. ಕಳೆದ ಬಾರಿ ಮದೆನಾಡು ಗ್ರಾಮದಲ್ಲಿ ಕುಸಿದಿದ್ದ ಗುಡ್ಡವೇ ಮತ್ತೆ ಕುಸಿದಿದೆ. ಆದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಗುಡ್ಡ ಕುಸಿದ ತೀವ್ರತೆಗೆ ವಿದ್ಯುತ್ ಕಂಬ ಬಾಗಿದೆ. ಅಲ್ಲದೆ ರಸ್ತೆಯ ಅರ್ಧ ಭಾಗ ಮಣ್ಣಿನಿಂದ ಆವೃತ ಹಿನ್ನೆಲೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಬೀಡು […]

6 months ago

ಕೊಡಗಿನಲ್ಲಿ 22ರವರೆಗೆ ಭಾರೀ ಮಳೆ ಸಾಧ್ಯತೆ- ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ

ಕೊಡಗು/ ರಾಯಚೂರು: ಜಿಲ್ಲೆಯಲ್ಲಿ ಗುರುವಾರದಿಂದ ಜುಲೈ 22ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಜಿಲ್ಲೆಯಾದ್ಯಂತ 5 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸದ್ಯ ರಾಜ್ಯದ ಬಹುತೇಕ ಕಡೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೊಡಗಿನಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಆದ್ರೆ ಜುಲೈ 22ರವರೆಗೆ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ...