Wednesday, 20th November 2019

Recent News

1 week ago

ಶೀಘ್ರದಲ್ಲೇ ಇನ್ನೂ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆ – ಸಿ.ಟಿ.ರವಿ

ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೊಸ ಬಾಂಬ್ ಸಿಡಿಸಿದ್ದು, ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಅಚ್ಚರಿಯ ಮಾಹಿತಿ ಹೊರ ಹಾಕಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪೂರ್ವದಲ್ಲಿ ಹಾಗೂ ಚುನಾವಣಾ ನಂತರ ಮತ್ತಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ. ಈಗಾಗಲೇ ಕೈ ಶಾಸಕರು ಬಿಜೆಪಿಯೊಂದಿಗೆ ಬರುವ ಅಶಯ ಹೊರಹಾಕಿದ್ದಾರೆ. ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಜನ ಬರಲಿದ್ದಾರೆ ಎಂದು ಮುಂದಿನ […]

2 weeks ago

ಬುಧವಾರ ಅನರ್ಹ ಶಾಸಕರ ಭವಿಷ್ಯ ನಿರ್ಧಾರ

ನವದೆಹಲಿ: ಸುಪ್ರೀಂಕೋರ್ಟ್ ಬುಧವಾರ (ನವೆಂಬರ್ 13) ಬೆಳಗ್ಗೆ 10.30ಕ್ಕೆ ಅನರ್ಹ ಶಾಸಕರ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಧೀಶ ಎನ್.ವಿ.ರಮಣ ಪೀಠ ಪ್ರಕರಣದ ವಾದವನ್ನು ಆಲಿಸಿ ತೀರ್ಪನ್ನು ಕಾಯ್ದರಿಸಿತ್ತು. ಈ ನಡುವೆ ಕಾಂಗ್ರೆಸ್ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹುಬ್ಬಳ್ಳಿಯ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಬೇಕೆಂದು ಮನವಿ ಮಾಡಿಕೊಂಡಿತ್ತು. ಕಾಂಗ್ರೆಸ್...

ಸಚಿವ ಸ್ಥಾನ ವಂಚಿತ ಶಾಸಕರಿಗೆ ರಾಜಕೀಯ, ಸಂಸದೀಯ ಕಾರ್ಯದರ್ಶಿ ಹುದ್ದೆ ಕೊಡಲು ಸಿಎಂ ನಿರ್ಧಾರ

3 months ago

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಂಸದೀಯ ಕಾರ್ಯದರ್ಶಿ ಸ್ಥಾನಗಳನ್ನು ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಾಗಿದ್ದಾರೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ರಾಮಪ್ಪ ಲಮಾಣಿ, ಎಸ್.ಅಂಗಾರ, ಎಂ.ಪಿ.ಕುಮಾರಸ್ವಾಮಿ, ರಾಮದಾಸ್, ಪೂರ್ಣಿಮಾ ಶ್ರೀನಿವಾಸ್, ರೂಪಾಲಿ ನಾಯಕ್, ಸತೀಶ್ ರೆಡ್ಡಿ,...

ತುರ್ತು ಅರ್ಜಿ ವಿಚಾರಣೆ ಸಾಧ್ಯವಿಲ್ಲ: ಅನರ್ಹ ಶಾಸಕರಿಗೆ ಸುಪ್ರೀಂ ಶಾಕ್

3 months ago

ನವದೆಹಲಿ: ತುರ್ತು ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಪಡಿಸುವಂತೆ ಇಂದು ಅನರ್ಹ ಶಾಸಕರು ನ್ಯಾ. ಎನ್.ವಿ.ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ...

ಪ್ರಮಾಣವಚನದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

3 months ago

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರದ 17 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಬಿಜೆಪಿಯಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಅತೃಪ್ತ ಶಾಸಕರು ಗೈರಾಗಿದ್ದಾರೆ. ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ತಿಪ್ಪಾರೆಡ್ಡಿ,...

ಲಿಂಗಾಯತರ ಪಟ್ಟಿಗೆ ‘ಶಾ’ ಕತ್ತರಿ! – ಬಿಎಸ್‍ವೈ ಆಪ್ತರಿಗೆ ಬಿಗ್ ಶಾಕ್

3 months ago

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬೆನ್ನಲ್ಲೇ ಉದ್ದವಿದ್ದ ಲಿಂಗಾಯತರ ಪಟ್ಟಿಗೆ ಕತ್ತರಿ ಹಾಕಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಚಿವ ಸಂಪುಟ ಪಟ್ಟಿಯಲ್ಲಿದ್ದ ಐದು ಲಿಂಗಾಯತ ನಾಯಕರಿಗೆ ಮಾತ್ರ...

1 ಸ್ಥಾನ ಗೆಲ್ಲದಿದ್ರೂ ಬಿಜೆಪಿ ಈಗ ಸಿಕ್ಕಿಂನಲ್ಲಿ ಅಧಿಕೃತ ವಿರೋಧ ಪಕ್ಷ

3 months ago

ನವದೆಹಲಿ: ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳದ ಬಳಿಕ ಈಗ ಸಿಕ್ಕಿಂನಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಸಿಕ್ಕಿಂ ಪ್ರಜಾಸತ್ತಾತ್ಮಕ ಒಕ್ಕೂಟ(ಎಸ್‍ಡಿಎಫ್)ನ 10 ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಎಸ್‍ಡಿಎಫ್ ನಾಯಕ ಹಾಗೂ ಸಿಕ್ಕಿಂ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್...

ದೆಹಲಿಯ ಆಪ್‌ನ ಇಬ್ಬರು ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

3 months ago

ನವದೆಹಲಿ: ಕರ್ನಾಟಕದ ಸ್ಪೀಕರ್ ಹಾದಿಯನ್ನೇ ದೆಹಲಿ ಸ್ಪೀಕರ್ ಸಹ ತುಳಿದಿದ್ದು, ಎಎಪಿ ತೊರೆದು ಬಿಜೆಪಿ ಸೇರಿದ್ದ ಇಬ್ಬರು ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ. ದೆಹಲಿ ವಿಧಾನಸಭೆಯ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಗುರುವಾರ ಈ ಆದೇಶ ಹೊರಡಿಸಿದ್ದು, ಎಎಪಿ ತೊರೆದು ಬಿಜೆಪಿ...