Tuesday, 10th December 2019

Recent News

1 month ago

ಎರಡು ವರ್ಷ ಏನು ಮಾಡ್ತಿದ್ರಿ?: ಶಾಸಕಿ ರೂಪಕಲಾಗೆ ಸಾರ್ವಜನಿಕರಿಂದ ತರಾಟೆ

ಕೋಲಾರ: ಎರಡು ವರ್ಷ ಏನು ಮಾಡುತ್ತಿದ್ರಿ ಎಂದು ಕೆಜಿಎಫ್ ನಿವಾಸಿಗಳು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ, ಶಾಸಕಿ ರೂಪಕಲಾ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಜಿಎಫ್ ನಗರಸಭೆ ಚುನಾವಣೆ ನವೆಂಬರ್ 12ರಂದು ನಡೆಯಲಿದೆ. ಹೀಗಾಗಿ ಶಾಸಕಿ ರೂಪಕಲಾ ಅವರು ಕಾಂಗ್ರೆಸ್ ಅಭ್ಯರ್ಥಿ ಸೇಂದಿಲ್ ಪರ ಪ್ರಚಾರ ಮಾಡಲು 30ನೇ ವಾರ್ಡ್ ಗೆ ಶನಿವಾರ ಸಂಜೆ ಬಂದಿದ್ದರು. ಈ ವೇಳೆ ಸ್ಥಳೀಯರು ಶಾಸಕರನ್ನು ಸುತ್ತುವರಿದು ಪ್ರಶ್ನೆಗಳ ಸುರಿಮಳೆ ಸುರಿಸಿದರು. ಇದಕ್ಕೆ ಉತ್ತರಿಸಲು ಸಾಧ್ಯವಾಗದೆ ರೂಪಕಲಾ ಫಜೀತಿಗೆ ಸಿಲುಕಿದರು. ಎರಡು ವರ್ಷಗಳ […]

7 months ago

ನಗರಸಭೆ ಚುನಾವಣೆಗೂ ಮುನ್ನವೇ ಖಾತೆ ತೆರೆದ ಜೆಡಿಎಸ್!

ಚಿತ್ರದುರ್ಗ: ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು....