Tuesday, 23rd July 2019

1 year ago

ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ 407 ಟೆಂಪೊಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನವರಂಗ್ ಸಿಗ್ನಲ್ ಬಳಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೊ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಬಸ್ ಮಲ್ಲೇಶ್ವರಂನಿಂದ ವಿಜಯನಗರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಕಾರಣ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.