Recent News

1 week ago

ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳ ಮುಂದೆ ಬಿಇಓ ಬಾಡೂಟ- ಅಮಾನತು

ಭುವನೇಶ್ವರ: ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳ ಮುಂದೆಯೇ ಚಿಕನ್ ಕರ್ರಿ ತಿಂದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಒಡಿಶಾದ ಸುಂದರ್‍ಘಢ ಜಿಲ್ಲೆಯಲ್ಲಿ ನಡೆದಿದ್ದು, ಮಧ್ಯಾಹ್ನದ ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳು ಕೇವಲ ಅನ್ನ-ಸಾಂಬರ್ ಊಟ ಮಾಡುತ್ತಿದ್ದರೆ, ಈ ಅಧಿಕಾರಿ ಚಿಕನ್ ಕರ್ರಿ ಸವಿಯುತ್ತಿದ್ದ. ಹೊರಗಿನಿಂದ ಚಿಕನ್ ತರಿಸಿ ಶಾಲಾ ಮಕ್ಕಳೊಂದಿಗೆ ತಿಂದಿದ್ದಕ್ಕೆ ಸುಂದರ್‍ಘಢ ಜಿಲ್ಲೆಯ ಜಿಲ್ಲಾಧಿಕಾರಿ ನಿಖಿಲ್ ಪವನ್ ಕಲ್ಯಾಣ್ ಅವರು ಬಿಇಒ ಬಿನಾಯ್ ಪ್ರಕಾಶ್ ಸೋಯ್ ಅವರನ್ನು ಅಮಾನತುಗೊಳಿಸಿದ್ದಾರೆ. ಮಕ್ಕಳೊಂದಿಗೆ ಚಿಕನ್ ತಿನ್ನುವ ವಿಡಿಯೋ […]

2 weeks ago

ಮಾರ್ಗಮಧ್ಯೆ ಅಂಬುಲೆನ್ಸ್ ಡೀಸೆಲ್ ಖಾಲಿ- ನರಳಿ ಪ್ರಾಣಬಿಟ್ಟ ಗರ್ಭಿಣಿ

ಭುವನೇಶ್ವರ: ಗರ್ಭಿಣಿಯನ್ನ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಡೀಸೆಲ್ ಖಾಲಿಯಾಗಿ ಮಾರ್ಗಮಧ್ಯದಲ್ಲಿಯೇ ವಾಹನ ನಿಂತುಕೊಂಡಿದೆ. ಪರಿಣಾಮ ಆಸ್ಪತ್ರೆಗೆ ತೆರಳುವ ಮೊದಲೇ ಗರ್ಭಿಣಿ ನರಳಿ ಪ್ರಾಣಬಿಟ್ಟ ಘಟನೆ ಒಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ತುಳಸಿ(23) ಅವರನ್ನು ಮೊದಲು ಬಂಗಿರಿಪೋಸಿಯ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ದಾಖಲಿಸಲಾಗಿತ್ತು. ಆದರೆ ಅವರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣಕ್ಕೆ...

ಮೇಕೆ ಸಾವಿನಿಂದ 2.68 ಕೋಟಿ ರೂ. ನಷ್ಟ

3 weeks ago

ಭುವನೇಶ್ವರ: ಮೇಕೆಯೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದಕ್ಕೆ ಮಹಾನದಿ ಕೋಲ್‍ಫೀಲ್ಡ್ಸ್ ಲಿ.(ಎಂಸಿಎಲ್)ಗೆ 2.68 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಕಂಪನಿ ತಿಳಿಸಿದೆ. ಓಡಿಶಾದಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಮೇಕೆಯೊಂದು ಸಾವನ್ನಪ್ಪಿದ ನಂತರ ಸ್ಥಳೀಯರು ನಡೆಸಿದ ಪ್ರತಿಭಟನೆಯಿಂದಾಗಿ 2.68 ಕೋಟಿ ರೂ. ನಷ್ಟ...

ಎಲ್ಲೆಂದರಲ್ಲಿ ಭಿಕ್ಷೆ ಬೇಡದೆ ಇತರರಿಗೆ ಮಾದರಿಯಾದ ತೃತೀಯ ಲಿಂಗಿ

3 weeks ago

ಭುವನೇಶ್ವರ್: ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ...

6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

1 month ago

ಭುವನೇಶ್ವರ: 6 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಆರೋಪಿಗೆ ಒಡಿಶಾ ವಿಶೇಷ ಪೋಸ್ಕೋ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಕಳೆದ ವರ್ಷ ಅಪರಾಧಿ ಮುಸ್ತಾಕ್ ಒಡಿಶಾದ ಸಲಿಪುರ ಗ್ರಾಮದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ...

ಹೊಸ ನಿಯಮಕ್ಕೂ ಮುಂಚೆಯೇ 6.53 ಲಕ್ಷ ದಂಡ ಕಟ್ಟಿದ್ದ ಟ್ರಕ್ ಮಾಲೀಕ

1 month ago

ಭುವನೇಶ್ವರ: ಟ್ರಕ್ ಮಾಲೀಕನೊಬ್ಬ ಹೊಸ ಮೋಟಾರು ವಾಹನಗಳ ಕಾಯ್ದೆ ಬರುವ ಮೊದಲೇ 6.53 ಲಕ್ಷ ದಂಡ ಕಟ್ಟಿರುವ ಘಟನೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ನಾಗಾಲ್ಯಾಂಡ್ ನೋಂದಾಯಿತ ಟ್ರಕ್ಕೊಂದು ಏಳು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 6.53 ಲಕ್ಷ ದಂಡವನ್ನು ಮಾಲೀಕ ಕಟ್ಟಿದ್ದಾರೆ....

ಸಂಚಾರ ನಿಯಮ ಉಲ್ಲಂಘಿಸಿ 86,500 ರೂ. ದಂಡ ತೆತ್ತ ಲಾರಿ ಚಾಲಕ

1 month ago

ಭುವನೇಶ್ವರ: ಲಾರಿ ಚಾಲಕನೊಬ್ಬ ಸಂಚಾರ ನಿಯಮ ಉಲ್ಲಂಘಿಸಿ ಬರೋಬ್ಬರಿ 86,500 ರೂ. ದಂಡ ಪಾವತಿಸಿದ ಪ್ರಸಂಗ ಒಡಿಶಾದ ಸಂಬಲ್‍ಪುರ್ ಜಿಲ್ಲೆಯಲ್ಲಿ ನಡೆದಿದೆ. ಲಾರಿ ಜಾಲಕ ಅಶೋಕ್ ಜಾದವ್ ಅವರಿಗೆ ಸಂಚಾರ ಪೊಲೀಸರು ಸೆಪ್ಟೆಂಬರ್ 3ರಂದು ದಂಡ ವಿಧಿಸಿದ್ದರು. ಆದರೆ ಶನಿವಾರ ಸಂಜೆಯಿಂದ...

ಗಣೇಶ ಪೂಜೆ ವೇಳೆ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಕಿರುಕುಳ

2 months ago

ಭುವನೇಶ್ವರ: ಶಾಲೆಯಲ್ಲಿ ಗಣೇಶ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಶಾಲೆಯ ಮುಖ್ಯ ಶಿಕ್ಷಕ ಕಿರುಕುಳ ನೀಡಿರುವ ಘಟನೆ ಓಡಿಶಾದಲ್ಲಿ ನಡೆದಿದೆ. ಪರಾರಿಯಾಗಿರುವ ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ...