Wednesday, 22nd January 2020

3 years ago

ನೀರಿಗೆ ಹಾರಿದ ವ್ಯಕ್ತಿಯನ್ನು ನೋಡಲು ಜನ ಸೇರಿದ್ದ ವೇಳೆ ಸೇತುವೆ ಕುಸಿತ: ಇಬ್ಬರ ದುರ್ಮರಣ

ಪಣಜಿ: ದಕ್ಷಿಣ ಗೋವಾದ ಸಾನ್ವೋರ್‍ಡೆಮ್ ಹಾಗೂ ಕೊರ್ಕೊರೆಮ್ ಗ್ರಾಮದ ಮಧ್ಯೆ ನಿರ್ಮಿಸಲಾದ ಪೋರ್ಚುಗೀಸ್ ಕಾಲದ ಕಬ್ಬಿಣದ ಸೇತುವೆ ಕುಸಿದು ಮಹಾ ದುರಂತವೊಂದು ಗುರುವಾರ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ. ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ನೋಡಲು ಜನ ಸೇರಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಸಂಭವಿಸಿದ ಮಾಹಿತಿ ತಿಳಿದ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯಲ್ಲಿ 50 ಮಂದಿ ನದಿಪಾಲಾದವರ 20 ಮಂದಿ ಈಜಿ ದಡ ಸೇರಿದ್ದರೆ, […]