Recent News

10 months ago

ಒಂದು ದಿನ ಮೆಟ್ರೋ ಸಂಚಾರ ಸ್ಥಗಿತ!

ಬೆಂಗಳೂರು: ಟ್ರಿನಿಟಿ ನಿಲ್ದಾಣದ ಬಳಿಯಿರುವ ಕಂಬದಲ್ಲಿನ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಒಂದು ದಿನ ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ತಬ್ಧವಾಗುವ ಸಾಧ್ಯತೆಯಿದೆ. ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮೆಟ್ರೋ ನಿಗಮ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಅಜಯ್ ಸೇಠ್ ಅವರು, ಗುಣಮಟ್ಟದ ಕೊರತೆಯಿಂದ ಅಥವಾ ಎಂಜಿನಿಯರ್ ತಪ್ಪಿನಿಂದ ಕಂಬದಲ್ಲಿ ಬಿರುಕು ಕಾಣಿಸಿಕೊಂಡಿಲ್ಲ. ಹನಿಕೂಮ್ ಕಾಂಕ್ರೀಟ್ (ಮಿಶ್ರಣ)ದಿಂದಾಗಿ ಹೀಗೆ ಆಗುವುದು ಸಾಮಾನ್ಯ. ಹೀಗಾಗಿ ಬೈಯಪ್ಪನಹಳ್ಳಿ ಹಾಗೂ ನಾಯಂಡಹಳ್ಳಿ ಮಾರ್ಗದಲ್ಲಿ ಸ್ವಲ್ಪ ಈ ಸಮಸ್ಯೆ ಕಾಣಿಸಿಕೊಂಡಿದೆ. ಅದನ್ನು ಒಪ್ಪಿಕೊಳ್ಳುತ್ತೇವೆ […]

10 months ago

ಮೂರು ದಿನದ ಹಿಂದೆಯೇ ನನ್ನ ಗಮನಕ್ಕೆ ಬಂದಿದೆ: ಸಿಎಂ ಎಚ್‍ಡಿಕೆ

ಬೆಂಗಳೂರು: ಮೆಟ್ರೋ ಮಾರ್ಗದ ಒಂದು ಕಂಬದಲ್ಲಿ ಬಿರುಕು ಮೂಡಿದ ಬಗ್ಗೆ ನನಗೆ ಮೂರು ದಿನಗಳ ಹಿಂದೆಯೇ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಜ್ಞರ ಜೊತೆಗೆ ಮಾತುಕತೆ ನಡೆಸಿ...