Tag: Pinarayi Vijayan

  • ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು RSS, SDPIನಿಂದ ಸಾಧ್ಯವಿಲ್ಲ: ಪಿಣರಾಯಿ ವಿಜಯನ್

    ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು RSS, SDPIನಿಂದ ಸಾಧ್ಯವಿಲ್ಲ: ಪಿಣರಾಯಿ ವಿಜಯನ್

    ತಿರುವನಂತಪುರಂ: ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು ಆರ್‌ಎಸ್‍ಎಸ್ ಮತ್ತು ಎಸ್‍ಡಿಪಿಐನಿಂದ ಸಾಧ್ಯವಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.

    rss sdpi

    ಕಣ್ಣೂರಿನಲ್ಲಿ ಸಂಭವಿಸಿದ ವಿವಿಧ ಸ್ಫೋಟಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಶಾಂತಿ ಕದಡಲು ಕಾಂಗ್ರೆಸ್, ಆರ್‌ಎಸ್‍ಎಸ್ ಮತ್ತು ಎಸ್‍ಡಿಪಿಐಯಂತಹ ಉಗ್ರಗಾಮಿ ಶಕ್ತಿಗಳು ರಹಸ್ಯವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಾವಿನಲ್ಲೂ ಒಂದಾದ ವೃದ್ಧ ದಂಪತಿ – ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಸಾವು

    Pinarayi Vijayanಈ ಶಕ್ತಿಗಳು ಕೇರಳದ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಸಾಧ್ಯವಿಲ್ಲ. ಈ ಎರಡು ಕೋಮುವಾದಿ ಶಕ್ತಿಗಳು ಮತ್ತು ನಾಯಕತ್ವವನ್ನು ಎಸ್‍ಡಿಪಿಐ ಮತ್ತು ಆರ್‌ಎಸ್‍ಎಸ್ ನೀಡಿದೆ. ಯಾವುದೇ ಕೋಮುವಾದಿ ಶಕ್ತಿಯನ್ನು ಪ್ರೋತ್ಸಾಹಿಸುವುದು ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ ಕೇರಳ ಸಿಎಂ ಭಾಗಿ – ಸ್ವಪ್ನಾ ಸುರೇಶ್ ಆರೋಪ

    ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ ಕೇರಳ ಸಿಎಂ ಭಾಗಿ – ಸ್ವಪ್ನಾ ಸುರೇಶ್ ಆರೋಪ

    ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ಎಂದು ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಆರೋಪಿಸಿದ್ದಾರೆ.

    2020ರ ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಕೊಚ್ಚಿಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌  ನ್ಯಾಯಾಲಯದ ಮುಂದೆ ಈ ರೀತಿಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಗಾಂಧೀಜಿಯನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿವೆ: ಪಿಣರಾಯಿ ವಿಜಯನ್

    Swapna suresh

    ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿಯ ಸೆಕ್ಷನ್ 164ರ ಅಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಲು ಸ್ವಪ್ನಾ ಮನಿ ಲ್ಯಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ವಿಶೇಷ ನ್ಯಾಯಾಲಯವು ಆಕೆಯ ಹೇಳಿಕೆಯನ್ನು ದಾಖಲಿಸುವ ಸಲುವಾಗಿ ಎರ್ನಾಕುಲಂ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿಯೋಜಿಸಿತು.

    PINARAI SWAPNA

    ನ್ಯಾಯಾಲಯದಲ್ಲಿ ಗೌಪ್ಯ ಹೇಳಿಕೆ ನೀಡಿದ ಬಳಿಕ ಮಾಧ್ಯಮಗಳ ಮುಂದೆ ಮಾಹಿತಿ ಬಹಿರಂಗಪಡಿಸಿದ್ದಾರೆ. ಅಕ್ರಮ ಹಣ ಸಾಗಣೆಯಲ್ಲಿ ಮುಖ್ಯಮಂತ್ರಿ, ಅವರ ಪತ್ನಿ, ಪುತ್ರಿ ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಶಿವಶಂಕರ್ ಪ್ರಮುಖ ಪಾತ್ರ ವಹಿಸಿದ್ದರು ಎಂಬುದಾಗಿ ಆಕೆ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    pinarayi vijayan

    ನಾನು ಆ ಸಂರ್ಭದಲ್ಲಿ ತಿರುವನಂತರಪುರಂನಲ್ಲಿರುವ ಯುಎಇ ಕನ್ಸುಲೇಟ್‌ನಲ್ಲಿ ಕೆಲಸ ಮಾಡುತ್ತಿದೆ. ಈ ಹಿಂದೆ ಸಿಎಂಗೆ ಕಾರ್ಯದರ್ಶಿಯಾಗಿದ್ದ ಎಂ.ಶಿವಶಂಕರ್ ಮುಖ್ಯಮಂತ್ರಿಗಳಿಗೆ ಆದಷ್ಟು ಬೇಗ ಬ್ಯಾಗ್‌ವೊಂದನ್ನು ತಲುಪಿಸಬೇಕು ಎಂದು ಹೇಳಿ, ನೇರವಾಗಿ ಲಗೇಜ್ ಕ್ಲಿಯರೆನ್ಸ್ಗೆ ಕರೆದರು. ನಂತರ ಬ್ಯಾಗನ್ನು ಕನ್ಸುಲೇಟ್‌ನಲ್ಲಿರುವ ಯಂತ್ರದಲ್ಲಿ ಸ್ಕ್ಯಾನ್ ಮಾಡಲಾಯಿತು. ಈ ವೇಳೆ ಬ್ಯಾಗ್‌ನಲ್ಲಿ ಹಣ ಇರುವುದು ನನ್ನ ಗಮನಕ್ಕೆ ಬಂದಿತು ಎಂದು ಆರೋಪಿ ಸ್ವಪ್ನಾ ಸುರೇಶ್ ಹೇಳಿದ್ದಾರೆ.

    ಇಷ್ಟೇ ಅಲ್ಲದೆ ಶಿವಶಂಕರ್ ಸೂಚನೆಯಂತೆ ಹಲವು ಬಾರಿ ಸಿಎಂ ಅವರ ಅಧಿಕೃತ ನಿವಾಸ ಕ್ಲಿಪ್‌ಹೌಸ್‌ಗೆ ಬಿರಿಯಾನಿ ಪಾತ್ರೆಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಅದರಲ್ಲಿ ಬಿರಿಯಾನಿ ಮಾತ್ರವಲ್ಲದೆ ಕೆಲ ಲೋಹದ ವಸ್ತುಗಳೂ ಇದ್ದವೆಂದು ಆಕೆ ಆರೋಪಿಸಿದ್ದಾರೆ.

  • ದೇಶದ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡಾವಲ್ಲ : ಪಿಣರಾಯಿ

    ದೇಶದ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡಾವಲ್ಲ : ಪಿಣರಾಯಿ

    ತಿರುವನಂತಪುರಂ: ಭಾರತವು ವಿವಿಧತೆಯಲ್ಲಿ ಏಕತೆಗೆ ಹೆಸರುವಾಸಿಯಾದ ದೇಶವಾಗಿದ್ದು, ಈ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡವಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದರು.

    ಕೇಂದ್ರ- ರಾಜ್ಯ ಸಂಬಂಧಗಳ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಹಿಂದಿಯನ್ನು ಹೇರುವ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ. ಭಾರತವು ವೈವಿಧ್ಯತೆಯಲ್ಲಿ ಏಕತೆಗೆ ಹೆಸರಾದ ದೇಶ. ಕಲ್ಪನೆಯೇ ವೈವಿಧ್ಯತೆಯನ್ನು ಒಪ್ಪಿಕೊಳ್ಳುವುದು. ನಮ್ಮ ಸಂವಿಧಾನವು ಭಾರತದಲ್ಲಿ ಹಲವು ಭಾಷೆಗಳಿಗೆ ಪ್ರಾಮುಖ್ಯತೆ ನೀಡಿದೆ ಎಂದು ಹೇಳಿದರು.

    Amith

    ಸುದೀರ್ಘ ಹೋರಾಟದ ನಂತರ ಭಾಷೆಯ ಆಧಾರದ ಮೇಲೆ ಹೆಚ್ಚಿನ ರಾಜ್ಯಗಳು ರಚನೆಯಾದವು. ಸಂಘ ಪರಿವಾರದ ಅಜೆಂಡಾವು ನಮ್ಮ ದೇಶದ ವೈವಿಧ್ಯತೆ ಮತ್ತು ಫೆಡರಲಿಸಂ ಅನ್ನು ಗುರುತಿಸುವುದಲ್ಲ, ಬದಲಿಗೆ ಪ್ರಾದೇಶಿಕ ಭಾಷೆಗಳನ್ನು ದುರ್ಬಲಗೊಳಿಸುವುದು ಅವರ ಕಾರ್ಯಸೂಚಿಯ ಭಾಗವಾಗಿದೆ ಎಂದು ಟೀಕಿಸಿದರು.

    Pinarayi Vijayan

    ಪ್ರತಿಯೊಂದು ಸಮಾಜದ ಸಂಸ್ಕೃತಿ ಮತ್ತು ಜೀವನಕ್ಕೆ ಭಾಷೆಗಳು ಆಧಾರವಾಗಿದೆ. ಒಂದು ಭಾಷೆಯನ್ನು ಕೊಂದರೆ ಈ ವೈವಿಧ್ಯತೆಯೇ ನಾಶವಾಗುತ್ತದೆ. ಇಂತಹ ನಡೆಗಳು ದೇಶದಲ್ಲಿ ಅಪಾಯಕಾರಿ ಸನ್ನಿವೇಶಗಳನ್ನು ಸೃಷ್ಟಿಸುತ್ತವೆ. ಹಿಂದಿಯನ್ನು ರಾಷ್ಟ್ರೀಯ ಚಳವಳಿಯ ಭಾಗವಾಗಿ ಬಳಸಲಾಗುತ್ತಿತ್ತು. ಆ ಅರ್ಥದಲ್ಲಿ ಅದನ್ನು ರಾಷ್ಟ್ರೀಯ ಮಟ್ಟದ ಭಾಷೆ ಎಂದು ಪರಿಗಣಿಸಲಾಗಿದೆ ಮತ್ತು ಅದಕ್ಕಾಗಿಯೇ ನಾವು ಕೇರಳದ ಶಾಲೆಗಳಲ್ಲಿ ತ್ರಿಭಾಷಾ ಕೋರ್ಸ್‍ಗಳನ್ನು ಜಾರಿಗೆ ತಂದಿದ್ದೇವೆ. ಹಿಂದಿಯನ್ನು ಹೇರುವುದು ಮತ್ತು ಪ್ರಾದೇಶಿಕ ಭಾಷೆಗಳನ್ನು ನಾಶಪಡಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

    amith shah

    ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಷಾ ಅವರು, ಸರ್ಕಾರವನ್ನು ನಡೆಸುವ ಮಾಧ್ಯಮವು ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ. ಹಿಂದಿಯನ್ನು ಇಂಗ್ಲಿಷ್‍ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಮತ್ತು ಸ್ಥಳೀಯ ಭಾಷೆಗಳಿಗೆ ಅಲ್ಲ ಎಂದಿದ್ದರು. ಇದನ್ನೂ ಓದಿ: 5 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ- ಭಾರತಕ್ಕೆ 3ನೇ ಅಲೆಯ ಮುನ್ಸೂಚನೆ

  • ಮಲಯಾಳಂ ಗೊತ್ತಿದ್ರೆ ಮಾತ್ರ ಸರ್ಕಾರಿ ಉದ್ಯೋಗ ಎಂದ ಸಿಎಂ – ಗಡಿಭಾಗದ ಕನ್ನಡಿಗರಲ್ಲಿ ಆತಂಕ

    ಮಲಯಾಳಂ ಗೊತ್ತಿದ್ರೆ ಮಾತ್ರ ಸರ್ಕಾರಿ ಉದ್ಯೋಗ ಎಂದ ಸಿಎಂ – ಗಡಿಭಾಗದ ಕನ್ನಡಿಗರಲ್ಲಿ ಆತಂಕ

    ತಿರುವನಂತಪುರಂ: ರಾಜಧಾನಿ ತಿರುವನಂತಪುರದಲ್ಲಿ ಸೋಮವಾರ ನಡೆದ ಮಲಯಾಳಂ ಮಿಷನ್ ಮಾತೃಭಾಷಾ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ಎಂಬ ಹೇಳಿಕೆ ಕೊಟ್ಟಿರುವುದು ಕಾಸರಗೋಡು ಹಾಗೂ ಸುತ್ತಮುತ್ತ ಇರುವ ಅಲ್ಪಸಂಖ್ಯಾತ ಕನ್ನಡಿಗರಲ್ಲಿ ಆತಂಕ ಉಂಟು ಮಾಡಿದೆ.

    Pinarayi Vijayan

    ಇದುವರೆಗೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡು ಪ್ರದೇಶದಲ್ಲಿ ಮಲಯಾಳಂ ಭಾಷೆಯಿಂದ ವಿನಾಯತಿ ಇದ್ದು ಅದು ಮುಂದುವರೆಯಬೇಕಾಗಿದೆ. ಒಂದು ವೇಳೆ ಕಾಸರಗೋಡಿನ ಕನ್ನಡಿಗರಿಗೂ ಮಲಯಾಳಂ ಭಾಷೆಯನ್ನು ಉದ್ಯೋಗದ ದೃಷ್ಟಿಯಿಂದ ಕಡ್ಡಾಯ ಮಾಡಿದರೆ ಅದು ಭಾಷಾ ಅಲ್ಪಸಂಖ್ಯಾತರಿಗೆ ಸಂವಿಧಾನಾತ್ಮಕವಾಗಿ ನೀಡಿದ ರಕ್ಷಣೆಯ ಉಲ್ಲಂಘನೆ ಆಗುತ್ತದೆ. ಇದನ್ನೂ ಓದಿ: ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್

    BASAVARJ BOMMAI 6

    ದಯವಿಟ್ಟು ಕೇರಳ ಸರ್ಕಾರ ಕಾಸರಗೋಡಿನ ಕನ್ನಡಿಗರ ಉದ್ಯೋಗಕ್ಕೆ ಬಾಧಕ ಆಗುವಂತೆ ಯಾವುದೇ ರೀತಿಯಲ್ಲಿಯೂ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸದಿರಲು ಕೇರಳ ಸರ್ಕಾರದ ಮುಖ್ಯಮಂತ್ರಿಗಳನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳ ಮೂಲಕ ಆಗ್ರಹ ಪೂರ್ವಕವಾಗಿ ಒತ್ತಾಯಿಸುತ್ತದೆ. ಒಂದು ವೇಳೆ ಕನ್ನಡಿಗರಿಗೆ ಇರುವ ಸಂವಿಧಾನಾತ್ಮಕ ರಕ್ಷಣೆಯ ಉಲ್ಲಂಘನೆ ಆದರೆ ಕಾನೂನಾತ್ಮಕ ಹೋರಾಟ ನಡೆಸಬೇಕಾಗುತ್ತದೆ ಎಂದು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಡಾ.ಸಿ.ಸೋಮಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

  • ಮಲಯಾಳಂನ ಕೊಟ್ಟಾಯಂ ಪ್ರದೀಪ್ ವಿಧಿವಶ

    ಮಲಯಾಳಂನ ಕೊಟ್ಟಾಯಂ ಪ್ರದೀಪ್ ವಿಧಿವಶ

    ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

    ಪ್ರದೀಪ್ ಅವರು ಕೊಟ್ಟಾಯಂ ಎಂಬ ತಮ್ಮ ಸ್ಥಳೀಯ ಸ್ಥಳದ ಹೆಸರನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದರು. ಜೂನಿಯರ್ ಕಲಾವಿದರಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಅವರು ರಂಗಭೂಮಿ ಮತ್ತು ದೂರದರ್ಶನ ಉದ್ಯಮದ ಭಾಗವಾಗಿದ್ದರು.

    kottayam pradeep 2

    ಪ್ರದೀಪ್ ಅವರಿಗೆ ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ಪ್ರದೀಪ್ ತಮ್ಮ ಶಾಲಾ ದಿನಗಳಿಂದಲೂ ನಟನೆಯಲ್ಲಿ ತುಂಬಾ ಆಸಕ್ತಿ ಹೊಂದಿದ್ದರು. ಅವರು ಶಾಲೆ ಮತ್ತು ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. 10 ನೇ ತರಗತಿಯಲ್ಲಿದ್ದಾಗ, ಅವರು ಎನ್‍ಎನ್ ಪಿಳ್ಳೈ ಅವರ ನಾಟಕದಲ್ಲಿ ಬಾಲ ಕಲಾವಿದರಾಗಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್

    kottayam pradeep 1

    ಪ್ರದೀಪ್ ಅವರು ನಟನೆಯಲ್ಲದೇ ಎಲ್‍ಐಸಿ ಜೀವ ವಿಮಾ ನಿಗಮದ ಎಜೆಂಟ್ ಆಗಿ ಸಹ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿದ ನಂತರವೂ ತಮ್ಮ ನಟನಾ ಪ್ರವೃತ್ತಿಯನ್ನು ಮುಂದುವರಿಸಿದ್ದರು. 90ರ ದಶಕದ ಆರಂಭದಲ್ಲಿ, ಟಿವಿ ಧಾರಾವಾಹಿಯೊಂದರಲ್ಲಿ ಸ್ಕ್ರೀನ್ ಟೆಸ್ಟ್‍ಗಾಗಿ ಅವರು ತಮ್ಮ ಮಗನ ಜೊತೆ ಹೋಗಿದ್ದರು. ಈ ವೇಳೆ ಧಾರಾವಾಹಿಯ ನಿರ್ಮಾಪಕರು ಅವರಿಗೆ ಅದೇ ಧಾರಾವಾಹಿಯಲ್ಲಿ ಪಾತ್ರವನ್ನು ನೀಡಿದ್ದರು. ಇದನ್ನೂ ಓದಿ:  ಪುನೀತ್ ಕುಟುಂಬಕ್ಕೆ ಸಾಂತ್ವಾನ ಹೇಳಿದ ಅರ್ಜುನ್ ಸರ್ಜಾ

    1999 ರಲ್ಲಿ ಅವರು ಹಿರಿಯ ಐ.ವಿ.ಶಶಿ ನಿರ್ದೇಶನದ ಚಲನಚಿತ್ರದಲ್ಲಿ ನಟಿಸುವ ಅವಕಾಶವನ್ನು ಪಡೆದರು. ನಂತರ ಅವರು 70 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

    ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರದೀಪ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ನಟಿಸಿರುವ ಸಣ್ಣ ಪಾತ್ರಗಳಿಂದಲೇ ಚಿತ್ರರಂಗದಲ್ಲಿ ತಮ್ಮದೇ ಆದ ಜಾಗವನ್ನು ಸೃಷ್ಟಿಸಿಕೊಂಡಿದ್ದರು.

    pinarayi vijayam

    ಐವಿ ಶಶಿಯವರ ಈ ನಾಡು ಇನ್ನಲೇ ವರೇ (2001) ಅವರ ಮೊದಲ ಚಿತ್ರವಾಗಿದೆ. ಅವರು ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ 70ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಅವರ ಕೆಲವು ಪಾತ್ರಗಳು ಮತ್ತು ಸಂಭಾಷಣೆಗಳು ಇಂದಿಗೂ ಜನಪ್ರಿಯವಾಗಿವೆ.

    ಗೌತಮ್ ಮೆನನ್ ಅವರ ವಿನೈತಾಂಡಿ ವರುವಾಯಾ ಮತ್ತು ಅದರ ಹಿಂದಿ, ತಮಿಳು ಮತ್ತು ತೆಲುಗು ರಿಮೇಕ್‍ಗಳ ಮೂಲಕ ಅವರು ಬೆಳಕಿಗೆ ಬಂದಿದ್ದರು. 2 ನೇ ಏಷ್ಯಾನೆಟ್ ಕಾಮಿಡಿ ಅವಾಡ್ರ್ಸ್ 2016 ರಲ್ಲಿ ವಿವಿಧ ಪಾತ್ರಗಳಿಗಾಗಿ ಪ್ರದೀಪ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮುಂಬರುವ ಮೋಹನ್ ಲಾಲ್ ಅಭಿನಯದ ಚಿತ್ರ ‘ಆರಟ್ಟು’ ಅವರ ಕೊನೆಯ ಸಿನಿಮಾವಾಗಿದೆ.

    ಗುರುವಾರದಂದು ಪ್ರದೀಪ್ ಅವರ ಅಂತ್ಯಕ್ರಿಯೆ ನಡೆಯಲಿದೆ, ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಕೇರಳ ಸಿಎಂ ಕಾರ್ಯಕ್ರಮದಲ್ಲಿ ಹಿಜಬ್‌ ಧರಿಸಿ ಪ್ರಾರ್ಥನಾ ಗೀತೆ ಹಾಡಿದ ವಿದ್ಯಾರ್ಥಿನಿಯರು

    ಕೇರಳ ಸಿಎಂ ಕಾರ್ಯಕ್ರಮದಲ್ಲಿ ಹಿಜಬ್‌ ಧರಿಸಿ ಪ್ರಾರ್ಥನಾ ಗೀತೆ ಹಾಡಿದ ವಿದ್ಯಾರ್ಥಿನಿಯರು

    ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಅವರಿದ್ದ ಕಾರ್ಯಕ್ರಮವೊಂದರಲ್ಲಿ ಹಿಜಬ್‌ಧಾರಿ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

    ಹಿಜಬ್‌ ಧರಿಸಿ ವೇದಿಕೆ ಮೇಲೆ ಪ್ರಾರ್ಥನಾ ಗೀತೆ ಹಾಡುತ್ತಿರುವ ವಿದ್ಯಾರ್ಥಿನಿಯ ಫೋಟೋವನ್ನು ಕೇರಳ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಶೇರ್‌ ಮಾಡಿದ್ದಾರೆ. ಫೋಟೋ ಜೊತೆಗೆ ʼಕೇರಳ, ನಮ್ಮ ಹೆಮ್ಮೆʼ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು

    SHIVAMOGGA COLLEGE KEASRI HIJAB 2

    ತಿರುವನಂತಪುರಂನಲ್ಲಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಅವರು ಪಾಲ್ಗೊಂಡಿದ್ದರು. ಅವರೊಟ್ಟಿಗೆ ಮೂವರು ಸಚಿವರು ಸಹ ಉಪಸ್ಥಿತರಿದ್ದರು.

    ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾರ್ಕ್ಸಿಸ್ಟ್‌) ಕೂಡ ಫೋಟೋವನ್ನು ಶೇರ್‌ ಮಾಡಿದ್ದು, ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಅವರು 53 ಹೊಸ ಹೈಟೆಕ್‌ ಶಾಲಾ ಕಟ್ಟಡಗಳನ್ನು ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿನಿಯರು ಜಾತ್ಯತೀತ ಆಶಯದ ಸ್ವಾಗತ ಗೀತೆಯನ್ನು ಹಾಡಿದ್ದಾರೆ. ಇದು ಪ್ರೀತಿಯ ಮನೆ. ವಿದ್ಯಾರ್ಥಿನಿಯರು ಶಾಲಾ ಸಮವಸ್ತ್ರದೊಂದಿಗೆ ಶಿರಸ್ತ್ರಾಣ (ಹಿಜಬ್‌) ಧರಿಸಿ ಹಾಡಿದ್ದಾರೆ. ಇದು ಸಾರ್ವಜನಿಕ ಸುವ್ಯವಸ್ಥೆಗೆ ಸಮಸ್ಯೆಯಲ್ಲ. ಶಿಕ್ಷಣ ಮೂಲಭೂತ ಹಕ್ಕು ಎಂದು ಬರೆದುಕೊಂಡಿದೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ

    pinarayi vijayam

    ಕರ್ನಾಟಕದಲ್ಲಿ ತಲೆದೋರಿರುವ ಹಿಜಬ್‌ ವಿವಾದವನ್ನು ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಅವರು ಖಂಡಿಸಿದ್ದರು. ಇದು ನಮ್ಮ ದೇಶಕ್ಕೆ ಕೋಮುವಾದ ಎಷ್ಟು ಅಪಾಯಕಾರಿ ಎಂಬುದನ್ನು ತೋರಿಸುತ್ತದೆ. ಶಿಕ್ಷಣ ಸಂಸ್ಥೆಗಳು ಜಾತ್ಯತೀತತೆಯನ್ನು ಪೋಷಿಸುವ ತಾಣಗಳಾಗಬೇಕು. ಬದಲಾಗಿ ಚಿಕ್ಕ ಮಕ್ಕಳಲ್ಲಿ ಕೋಮು ವಿಷವನ್ನು ಬಿತ್ತುವ ಪ್ರಯತ್ನಗಳು ನಡೆಯುತ್ತಿವೆ ಎಂದು ಟೀಕಿಸಿದ್ದರು.

  • ಉತ್ತರಪ್ರದೇಶ ಕೇರಳವಾದರೆ ಧರ್ಮದ ಹೆಸರಲ್ಲಿ ಹತ್ಯೆ ನಡೆಯಲ್ಲ: ಯೋಗಿ ಆದಿತ್ಯನಾಥ್‍ಗೆ ಪಿಣರಾಯಿ ತಿರುಗೇಟು

    ಉತ್ತರಪ್ರದೇಶ ಕೇರಳವಾದರೆ ಧರ್ಮದ ಹೆಸರಲ್ಲಿ ಹತ್ಯೆ ನಡೆಯಲ್ಲ: ಯೋಗಿ ಆದಿತ್ಯನಾಥ್‍ಗೆ ಪಿಣರಾಯಿ ತಿರುಗೇಟು

    ನವದೆಹಲಿ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು ಎಂದು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಇತರೆ ಪಕ್ಷದ ಮುಖಂಡರು ಟೀಕಿಸಿದ್ದಾರೆ.

    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಯಪಡುವಂತೆ ಉತ್ತರಪ್ರದೇಶವು ಕೇರಳವಾಗಿ ಬದಲಾದರೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವಾಗಿ ಬದಲಾಗುತ್ತದೆ. ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಉತ್ತಮ ಜೀವನಮಟ್ಟ ದೊರೆಯುತ್ತಿದೆ ಎಂದು ತೀರುಗೇಟು ನೀಡಿದರು.

    ಈ ಕುರಿತು ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಉತ್ತರಪ್ರದೇಶವು ಕಾಶ್ಮೀರ, ಬಂಗಾಳ ಅಥವಾ ಕೇರಳವಾಗಿ ಬದಲಾಗುತ್ತದೆ ಎಂದು ಮತದಾರರಿಗೆ ಯೋಗಿ ಆದಿತ್ಯನಾಥ್ ಹೇಳುತ್ತಾರೆ. ಇದನ್ನೂ ಓದಿ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು: ಯೋಗಿ ಆದಿತ್ಯನಾಥ್

    ಇದಕ್ಕೆ ಉತ್ತರಪ್ರದೇಶದ ಜನರು ಅದೃಷ್ಟವಂತರಾಗಿರಬೇಕು. ಕಾಶ್ಮೀರದ ಸೌಂದರ್ಯ, ಬಂಗಾಳದ ಸಂಸ್ಕೃತಿ ಮತ್ತು ಕೇರಳದ ಶಿಕ್ಷಣವು ಈ ಸ್ಥಳಕ್ಕೆ ದೊರೆತರೆ ಅನೇಕ ಅದ್ಭುತಗಳನ್ನು ಮಾಡುತ್ತದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

  • ಗಾಂಧೀಜಿಯನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿವೆ: ಪಿಣರಾಯಿ ವಿಜಯನ್

    ಗಾಂಧೀಜಿಯನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿವೆ: ಪಿಣರಾಯಿ ವಿಜಯನ್

    ತಿರುವನಂತಪುರ: ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಇಂದಿಗೂ ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು.

    ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಾಪುವನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿದ್ದಾರೆ. ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ. ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಸಾರೋಣ ಎಂದು ಹೇಳಿದರು.

    ಗಾಂಧೀಜಿ ಅವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಟ್ವೀಟ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಂಪೂರ್ಣವಾಗಿ ನೋವು ಹೇಳಿಕೊಳ್ಳೋ ಸ್ಥಿತಿಯಲ್ಲಿಲ್ಲ, ಅದರೊಂದಿಗೆ ಬದುಕ್ತಿದ್ದೇವೆ: ಅಪ್ಪು ನೆನೆದ ಶಿವಣ್ಣ

    Pinarayi Vijayan

    ಇಂದು ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ. ಧೇಶಾದ್ಯಂತ ಅವರನ್ನು ಸ್ಮರಿಸುತ್ತಿದ್ದಾರೆ. ಜೊತೆಗೆ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

  • ಕೇರಳ ಕಾನೂನುಬಾಹಿರ ರಾಜ್ಯವಾಗಿ ಬದಲಾವಣೆ: ಜೆಪಿ ನಡ್ಡಾ

    ಕೇರಳ ಕಾನೂನುಬಾಹಿರ ರಾಜ್ಯವಾಗಿ ಬದಲಾವಣೆ: ಜೆಪಿ ನಡ್ಡಾ

    ನವದೆಹಲಿ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕಾನೂನು ಬಾಹಿರ ಕೆಲಸವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಿಡಿ ಕಾರಿದ್ದಾರೆ.

    kerala 2

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ನಾಯಕ ರಂಜಿತ್ ಶ್ರೀನಿವಾಸ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು. ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಡೆದ ಎಸ್‌ಡಿಪಿಐ ಹಾಗೂ ಬಿಜೆಪಿ ನಾಯಕರ ಹತ್ಯೆಗಳು ಇಡೀ ರಾಜ್ಯವನ್ನೆ ಬೆಚ್ಚಿ ಬಿಳಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಲಪ್ಪುಳದಲ್ಲಿ SDPI ನಾಯಕ, ಬಿಜೆಪಿ ಮುಖಂಡನ ಹತ್ಯೆ – ಸೆಕ್ಷನ್ 144 ಜಾರಿ

    JP Nadda

    ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಬರ್ಬರವಾಗಿ ಹತ್ಯೆಗೈದಿರುವುದು ಖಂಡನೀಯ. ಇಂತಹ ಹೇಡಿತನದ ಕೃತ್ಯಗಳನ್ನು ಬಿಜೆಪಿ ಸಹಿಸಲು ಸಾಧ್ಯವಿಲ್ಲ. ಸಿಎಂ ಅವರ ನೇತೃತ್ವದಲ್ಲಿ ಕೇರಳ ಕಾನೂನುಬಾಹಿರ ರಾಜ್ಯವಾಗಿ ಬದಲಾಗುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಹತ್ಯೆಯನ್ನು ಖಂಡಿಸಿದ ಅವರು ಸರ್ಕಾರ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸಲು ಒತ್ತಾಯಿಸಿದರು.

  • ಅಲಪ್ಪುಳದಲ್ಲಿ SDPI ನಾಯಕ, ಬಿಜೆಪಿ ಮುಖಂಡನ ಹತ್ಯೆ – ಸೆಕ್ಷನ್ 144 ಜಾರಿ

    ಅಲಪ್ಪುಳದಲ್ಲಿ SDPI ನಾಯಕ, ಬಿಜೆಪಿ ಮುಖಂಡನ ಹತ್ಯೆ – ಸೆಕ್ಷನ್ 144 ಜಾರಿ

    ತಿರುವನಂತಪುರಂ: ಬಿಜೆಪಿ ಮುಖಂಡ ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ನಾಯಕರ ಹತ್ಯೆ ಪ್ರಕರಣದ ಹಿನ್ನೆಲೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

    ಭಾನುವಾರ ಬೆಳಗ್ಗೆ ಬಿಜೆಪಿಯ ಮೋರ್ಚಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಮನೆಗೆ ನುಗ್ಗಿದ ಗ್ಯಾಂಗ್ ಅವರ ಕತ್ತು ಸೀಳಿ ಕೊಂದಿದ್ದಾರೆ.

    Kerala

    ಶನಿವಾರ ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್‍ವೊಂದು ದಾಳಿ ನಡೆಸಿತ್ತು. ಇದಾದ ಒಂದು ದಿನದ ನಂತರ ಭಾನುವಾರ ಬೆಳಗ್ಗೆ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: SDPI ನಾಯಕನ ಹತ್ಯೆ ನಂತ್ರ ಬಿಜೆಪಿ ಮುಖಂಡನ ಕತ್ತು ಸೀಳಿ ಕೊಂದ್ರು

    ಕೆ.ಎಸ್. ಶಾನ್ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‍ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಅವರಿಗೆ 40ಕ್ಕೂ ಹೆಚ್ಚು ಗಾಯಗಳಾಗಿತ್ತು. ಹೀಗಾಗಿ ಅವರನ್ನು ಕೊಚ್ಚಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

    ಈ ಘಟನೆ ಕುರಿತಂತೆ ಎಸ್‍ಡಿಪಿಐ ಅಧ್ಯಕ್ಷ ಎಂ.ಕೆ.ಫೈಝಿ ಅವರು, ಕೆ.ಎಸ್.ಶಾನ್ ರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಸದಸ್ಯರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ:  ಓವೈಸಿ

    Pinarayi Vijayan

    ಇದೀಗ ಈ ಭೀಕರ ಹತ್ಯೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಂಡಿಸಿದ್ದಾರೆ. ದಾಳಿಯ ಹಿಂದಿರುವವರ ವಿರುದ್ಧ ಪೊಲೀಸರು ಕಠಿಣ ಕ್ರಮಕೈಗೊಳ್ಳಲಿದ್ದಾರೆ. ಇಂತಹ ಸಂಕುಚಿತ ಮತ್ತು ಅಮಾನವೀಯ ಕೃತ್ಯಗಳು ರಾಜ್ಯಕ್ಕೆ ಹಾನಿಕಾರಕವಾಗಿದೆ. ಕೊಲೆ ಮಾಡುವವರ ಗುಂಪುನ್ನು ಮತ್ತು ದ್ವೇಷ ತುಂಬಿಸಿಕೊಂಡಿರುವವರನ್ನು ಪ್ರತ್ಯೇಕಿಸಿ ನಾಗರಿಕ ಸಮಾಜದಿಂದ ದೂರ ಇಡಬೇಕು ಎಂದು ಕಿಡಿಕಾರಿದ್ದಾರೆ.