Thursday, 23rd May 2019

3 months ago

ಕಳೇಬರ ಪತ್ತೆ – ರಾಮನಗರಕ್ಕೂ ಮಂಗನ ಕಾಯಿಲೆ ಎಂಟ್ರಿ?

ರಾಮನಗರ: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ರಾಮನಗರಕ್ಕೂ ಕಾಲಿಟ್ಟಿರುವ ಸಂಶಯ ಮೂಡಿದೆ. ರಾಮನಗರ ಹೊರವಲಯದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಮಂಗದ ದೇಹ ಪತ್ತೆಯಾಗಿದ್ದು, ಮಂಗನ ಕಾಯಿಲೆ ಶಂಕೆ ಹಿನ್ನೆಲೆಯಲ್ಲಿ ಮೃತ ಮಂಗದ ಮರಣೋತ್ತರ ಪರೀಕ್ಷೆ ನಡೆಸಿ ದೇಹದ ಕೆಲ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ರಾಮನಗರ ಹೊರವಲಯದ ಕಾಮತ್ ಹೋಟೆಲ್ ಬಳಿ ಮಂಗ ಮೃತಪಟ್ಟಿದ್ದು, ಸುಮಾರು 5 ವರ್ಷದ ಹೆಣ್ಣು ಮಂಗ ಸಾವನ್ನಪ್ಪಿದೆ. ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮಂಗ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ […]