Monday, 22nd October 2018

Recent News

2 weeks ago

ಬಸ್ ಡಿಕ್ಕಿಯಿಂದ ಸೊಂಟ ಮುರಿದಿದ್ದ ದಸರಾ ಆನೆ ಸಾವು

ಮಡಿಕೇರಿ: ಖಾಸಗಿ ಬಸ್ ಡಿಕ್ಕಿಯಿಂದ ಸೊಂಟ ಮುರಿತಕ್ಕೊಳಗಾಗಿದ್ದ ದಸರಾ ಆನೆ ಮೃತಪಟ್ಟಿದೆ. ಈ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಗರಹೋಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಸಂಭವಿಸಿತ್ತು. ನಲವತ್ತೈದು ವರ್ಷ ಪ್ರಾಯದ ಸಾಕಾನೆಯಾದ ರಂಗನನ್ನು ಎಂದಿನಂತೆ ರಾತ್ರಿ ತಿರಾಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣನ್ನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಸಾಕಾನೆ ಗುದ್ದಿದೆ. ಪರಿಣಾಮ ಆನೆಯ ಸೊಂಟ ಮುರಿದು ಸ್ಥಳದಲ್ಲೇ ಕುಸಿದು ಬಿದ್ದಿತ್ತು. ರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ವಿಷಯ […]

2 weeks ago

ಖಾಸಗಿ ಬಸ್ ಡಿಕ್ಕಿ- ದಸರಾ ಆನೆಯ ಸೊಂಟ ಮುರಿತ!

ಮಡಿಕೇರಿ: ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ದಸರಾಗೆ ತೆರಳಬೇಕಿದ್ದ ಸಾಕಾನೆಯೊಂದು ಸೊಂಟ ಮುರಿದಿದೆ. ಮತ್ತಿಗೋಡು ಆನೆ ಶಿಬಿರದ 45 ವರ್ಷ ವಯಸ್ಸಿನ ರಂಗ ಎನ್ನುವ ಸಾಕಾನೆಯ ಸೊಂಟ ಮುರಿದಿದೆ. ಮಾವುತರು ಎಂದಿನಂತೆ ಭಾನುವಾರ ರಾತ್ರಿ ರಂಗನನ್ನು ತಿರುಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣೂರಿನಿಂದ...

ಗಣೇಶ ಹಬ್ಬಕ್ಕೆ ಟಿಕೆಟ್ ದರ ಏರಿಸಲ್ಲ: ಸಾರಿಗೆ ಸಚಿವ ಡಿಸಿ ತಮ್ಮಣ್ಣ

2 months ago

ಬೆಂಗಳೂರು: ಗಣೇಶ ಹಬ್ಬಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಖಾಸಗಿಯವರು ಹೆಚ್ಚಳ ಮಾಡುವ ಹಿನ್ನೆಲೆಯಲ್ಲಿ ನಮ್ಮ ಅಧಿಕಾರಿಗಳಿಗೆ ಹೆಚ್ಚು ಬಸ್ ಸೇವೆ ಒದಗಿಸಿ...

ಕಾರವಾರ, ಹಾಸನ, ಮಲೆನಾಡಿನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತ!

2 months ago

ಕಾರವಾರ: ಹಾಸನ, ಕಾರವಾರ, ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮೇಲೆ ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಈ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಬಳಿ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ...

ಸಾರಿಗೆ ಸಚಿವರೇ, ಡೋರ್ ಇಲ್ಲದ ಬಸ್ ಗಳಿಗೆ ಇನ್ನೆಷ್ಟು ಬಲಿ ಬೇಕು?

4 months ago

ಮೈಸೂರು: ಹಳ್ಳಿಗಳ ಮಾರ್ಗದಲ್ಲಿ ತೆರಳುವ ಖಾಸಗಿ ಬಸ್ ಗಳಲ್ಲಿ ಡೋರ್ ಇಲ್ಲದ ಕಾರಣ ಬಸ್ ನಿಂದ ಪ್ರಯಾಣಿಕರು ಕೆಳಗೆ ಬಿದ್ದು ಸಾಯುವ ಸರಣಿ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಮುಂದುವರಿದಿದೆ. ಚಲಿಸುತ್ತಿದ್ದ ಖಾಸಗಿ ಬಸ್ ನಿಂದ ಬಿದ್ದು ತಂದೆ ಮೃತಪಟ್ಟು, ಮಗನಿಗೆ ಗಂಭೀರ...

ಖಾಸಗಿ ಬಸ್‍ಗಳ ಮುಖಾಮುಖಿ ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು!

4 months ago

ಕೋಲಾರ: ಖಾಸಗಿ ಬಸ್‍ಗಳು ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನರಸಾಪುರ ಗ್ರಾಮದ ಬಳಿ ನಡೆದಿದೆ. ನರಸಾಪುರ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಖಾಸಗಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ...

ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್- 17 ಮಂದಿ ದುರ್ಮರಣ

4 months ago

ಲಕ್ನೋ: ಖಾಸಗಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಉತ್ತರಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಇನ್ನು ಘಟನೆಗೆ...

ಮದ್ಯ ಸೇವಿಸಿ ಖಾಸಗಿ ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ತರಾಟೆ

5 months ago

ತುಮಕೂರು: ಖಾಸಗಿ ಬಸ್ ಅಪಘಾತವಾಗಿ 7 ಮಂದಿ ಜಿಲ್ಲೆಯಲ್ಲಿ ಸಾವನ್ನಪ್ಪಿದರೆ, ಇನ್ನೊಂದೆಡೆ ಸಂಭವಿಸಬಹುದಾಗಿದ್ದ ಅಪಘಾತವನ್ನು ಪ್ರಯಾಣಿಕರ ಸಮಯಪ್ರಜ್ಞೆ ತಪ್ಪಿಸಿದೆ. ಮದ್ಯ ಸೇವಿಸಿ ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದ ಚಾಲಕನನ್ನ ತಡೆದು ಪ್ರಯಾಣಿಕರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ಘಟನೆ...