Friday, 22nd November 2019

Recent News

3 weeks ago

CRPF ಯೋಧರನ್ನು ಗುರಿಯಾಗಿಸಿ ಪುಲ್ವಾಮಾದಲ್ಲಿ ಮತ್ತೆ ಉಗ್ರರ ದಾಳಿ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಪುಲ್ವಾಮಾದ ಡ್ರಾಬ್‍ಗ್ರಮ್ ಪ್ರದೆಶದಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದ ವೇಳೆ ಉಗ್ರರರು ದಾಳಿ ನಡೆಸಿದ್ದಾರೆ. ಪರೀಕ್ಷೆಗೆ ತೊಂದರೆಯಾಗದಂತೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. #UPDATE: Additional forces have been deployed at the spot. A search operation has been launched. #JammuAndKashmir https://t.co/dRm6b5neW2 — ANI (@ANI) October 29, 2019 […]

5 months ago

ಜೈಶ್ ಸಂಘಟನೆಯ ಬಾಂಬ್ ತಯಾರಕ 19ರ ಯುವಕನಿಗಾಗಿ ಶೋಧ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಕಳೆದ ವಾರ ಐಇಡಿ ಸ್ಫೋಟಿಸಲಾಗಿತ್ತು. ಜೈಶ್-ಎ-ಮೊಹಮ್ಮದ್ ಸಂಘಟನೆಯ 19ರ ಯುವಕ ಮುನ್ನಾ ಲಾಹೋರಿ ಎಂಬಾತನೇ ಐಇಡಿ ಬಾಂಬ್ ತಯಾರಿಸಿದ್ದು, ಇದೀಗ ಆತನ ಬಂಧನಕ್ಕಾಗಿ ಭದ್ರತಾ ಪಡೆ ಮತ್ತು ಪೊಲೀಸರು ಮುಂದಾಗಿದ್ದಾರೆ. ಜೂನ್ 17ರಂದು ನಡೆದ ಸ್ಫೋಟದಲ್ಲಿ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ಕೆಲವರು ಗಾಯಗೊಂಡಿದ್ದರು. ಸ್ಫೋಟ ತಯಾರಿಕೆಯ ತಜ್ಞನಾಗಿರುವ...

ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ!

6 months ago

ಪುಲ್ವಾಮಾ: ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ...

ಉಗ್ರನ ಜೇಬಿನಲ್ಲಿ ಮ್ಯಾಪ್ – ಮೇ 23 ರಂದು ಭಾರೀ ದಾಳಿಗೆ ಸ್ಕೆಚ್!

6 months ago

ಶ್ರೀನಗರ: ಕಳೆದ ಗುರುವಾರ ಶೋಪಿಯಾನ್‍ನಲ್ಲಿ ಯೋಧರ ಗುಂಡಿನ ದಾಳಿಗೆ ಹತನಾದ ಉಗ್ರನ ಜೇಬಿನಲ್ಲಿ ಸಿಕ್ಕ ಮ್ಯಾಪ್ ಒಂದು ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ನಡೆಯಬೇಕಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ. ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನವನ್ನೇ ಗುರಿಯಾಗಿಸಿಕೊಂಡು...

ಪುಲ್ವಾಮಾದಲ್ಲಿ ಮೋದಿಯಿಂದಲೇ 40 ಜನ ಯೋಧರ ಹತ್ಯೆ – ಕಾಂಗ್ರೆಸ್ ಮುಖಂಡ

7 months ago

ಮುಂಬೈ: ಪುಲ್ವಾಮಾ ದಾಳಿಯ ಕುರಿತು ಮತ್ತೊಬ್ಬ ಕಾಂಗ್ರೆಸ್ ಮುಖಂಡ ವಿವಾದಾತ್ಮಕ ಹೇಳಿಕೆ ನೀಡಿ ನಾಲಿಗೆ ಹರಿಬಿಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 40 ಜನ ಯೋಧರನ್ನು ಕೊಲೆ ಮಾಡಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಶಿಕ್ಷಣ ಸಚಿವ, ಕಾಂಗ್ರೆಸ್ ಮುಖಂಡ...

ಸಿಆರ್‌ಪಿಎಫ್ ನಂತ್ರ ಬಿಎಸ್‍ಎಫ್ ಯೋಧರ ಕುಟುಂಬಕ್ಕೆ ಗಾನಕೋಗಿಲೆಯಿಂದ 11 ಲಕ್ಷ ರೂ. ದಾನ

7 months ago

ಮುಂಬೈ: ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು 1 ಕೋಟಿ ರೂ. ನೀಡಲು ಮುಂದಾಗಿದ್ದರು. ಈಗ ಬಿಎಸ್‍ಎಫ್ ಕುಟುಂಬಕ್ಕೆ 11 ಲಕ್ಷ ರೂ. ದಾನ...

ನಾವು ಮಾಡಿದ್ದ ಕೆಲಸಕ್ಕೆ ಕೂಲಿ ಕೊಡಿ: ಮಾಜಿ ಸಿಎಂ

7 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ರಾಮನವಮಿ ಶುಭಾಶಯ ತಿಳಿಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನ್ನ ಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ಪಶುಭಾಗ್ಯ ಕೊಟ್ಟಿದ್ದೇನೆ. ನುಡಿದಂತೆ ನಡೆದಿದ್ದೇನೆ. ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಮತದಾರರಲ್ಲಿ ಮತ...

ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

8 months ago

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ. ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿಯ ಸಾಧನೆ ಎನ್ನುವ ರೀತಿಯಲ್ಲಿ ಬಿಂಬಿಸಿ ಮತ ಯಾಚನೆ ಆರೋಪದ ಅಡಿ ದೂರು ದಾಖಲಾಗಿದೆ. ವಕೀಲರಾದ ಬಿ.ಸಂಜಯ್ ಯಾದವ್...