Sunday, 17th November 2019

Recent News

3 months ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಉತ್ತರ ಕರ್ನಾಟಕ ತತ್ತರ- ಭೀಮಾತೀರದಲ್ಲಿ ನೀರಿಗಾಗಿ ಹಾಹಾಕಾರ

ರಾಯಚೂರು/ಬಾಗಲಕೋಟೆ/ಕಲಬುರಗಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಅದರಲ್ಲೂ ಕೃಷ್ಣಾ ನದಿ ಪಾತ್ರದ ಜಿಲ್ಲೆಗಳು ಅಕ್ಷರಶಃ ಜಲಾವೃತಗೊಂಡು, ಲಕ್ಷಾಂತರ ಜನರು ಸಂತ್ರಸ್ತರಾಗಿದ್ದಾರೆ. ಅಲ್ಲದೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾರಾಯಣಪುರ ಜಲಾಶಯದಿಂದ ದಿನದಿಂದ ದಿನಕ್ಕೆ ಹೆಚ್ಚು ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ. ಇದರಿಂದ ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜೊತೆಗೆ ಲಿಂಗಸುಗೂರು ತಾಲೂಕಿನಲ್ಲಿ ಹಲವಾರು ಜಮೀನುಗಳಿಗೆ ನೀರು ನುಗ್ಗಿದ್ದು, ಈ ಭಾಗದ […]

4 months ago

ಜಮೀನಿನಲ್ಲಿ ರಾಜಾರೋಷವಾಗಿ ಓಡಾಡಿದ ಬೃಹತ್ ಮೊಸಳೆ ನೋಡಿ ಹೌಹಾರಿದ ಜನ

ರಾಯಚೂರು: ಜಿಲ್ಲೆಯ ಕೆಲ ಗ್ರಾಮಗಳ ಜನರ ಪಾಡು ಮಳೆಬಂದರೂ ಕಷ್ಟ, ಬರದಿದ್ದರೆ ನಷ್ಟ ಎನ್ನುವಂತಾಗಿದೆ. ಹಿಂದೆ ಮಳೆಯಿಲ್ಲದೆ ಆಹಾರ ಅರಸಿ ಜಮೀನುಗಳಿಗೆ ನುಗ್ಗುತ್ತಿದ್ದ ಮೊಸಳೆಗಳು ಈಗ ಮಳೆ ಬಂದು ನದಿಯಲ್ಲಿ ನೀರು ಹೆಚ್ಚಾದ ಕಾರಣಕ್ಕೆ ಹೊಲಗಳಿಗೆ ನುಗ್ಗುತ್ತಿರುವುದು ರೈತನಿಗೆ ತಲೆನೋವಾಗಿದೆ. ರಾಯಚೂರಿನ ಲಿಂಗಸುಗೂರಿನ ಬೋಗಾಪುರದ ಕೆರೆಯು ಮಳೆಗೆ ತುಂಬಿರುವ ಕಾರಣಕ್ಕೆ ಅದರಲ್ಲಿದ್ದ ಮೊಸಳೆಯೊಂದು ಜಮೀನೊಂದಕ್ಕೆ ನುಗ್ಗಿ,...

ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಕೊಚ್ಚಿಹೋಯ್ತು ರಸ್ತೆ

4 months ago

ರಾಯಚೂರು: ಬಿಸಿಲುನಾಡು ರಾಯಚೂರಿನಲ್ಲಿ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಬಳಿಯ ಸೇತುವೆ ಬಳಿಯ ರಸ್ತೆ ಕೊಚ್ಚಿಹೋಗಿದೆ. ಗಡ್ಡಿ ಹಳ್ಳ ಅಥವಾ ಸಿಂಗಸಿ ಹಳ್ಳ ಎಂದು ಕರೆಯುವ ಸಂತೆಕಲ್ಲೂರು ಬಳಿಯ ಹಳ್ಳಕ್ಕೆ ಅಡ್ಡಲಾಗಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಆದರೆ...

ಆರೋಪಿಯ ಕಿರುಕುಳಕ್ಕೆ ಬೇಸತ್ತು ಮಧು ಪತ್ತಾರ್ ಆತ್ಮಹತ್ಯೆ – ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

4 months ago

ರಾಯಚೂರು: ಭಾರೀ ಸಂಚಲನ ಮೂಡಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣದಲ್ಲಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಿ ಸುದರ್ಶನ್ ಯಾದವ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪಿ ಯುವತಿಗೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದಾನೆ ಎಂದು...

ಕೊಡಗಿನಲ್ಲಿ 22ರವರೆಗೆ ಭಾರೀ ಮಳೆ ಸಾಧ್ಯತೆ- ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ

4 months ago

ಕೊಡಗು/ ರಾಯಚೂರು: ಜಿಲ್ಲೆಯಲ್ಲಿ ಗುರುವಾರದಿಂದ ಜುಲೈ 22ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಜಿಲ್ಲೆಯಾದ್ಯಂತ 5 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸದ್ಯ ರಾಜ್ಯದ ಬಹುತೇಕ ಕಡೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೊಡಗಿನಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಆದ್ರೆ ಜುಲೈ...

ಜಲಧಾರೆ ಯೋಜನೆಗೆ ರಾಯಚೂರು, ಮಂಡ್ಯ, ಕೋಲಾರವನ್ನು ಸೇರಿಸಲಾಗಿದೆ- ಕೃಷ್ಣ ಬೈರೇಗೌಡ

4 months ago

– ಕುಡಿಯುವ ನೀರಿನ ಅನುದಾನ ಹೆಚ್ಚಿಸಲು ಒತ್ತಾಯ ರಾಯಚೂರು: ಜಲಧಾರೆ ಯೋಜನೆಗೆ ರಾಯಚೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಯನ್ನು ಸೇರಿಸಲಾಗಿದೆ. ನದಿ ಮೂಲದ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಹೀಗಾಗಿ 1300 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ...

ಮಳೆಗಾಗಿ ಬಿಸಿಲನಾಡಿನಲ್ಲಿ ಮಣ್ಣೆತ್ತುಗಳ ಪೂಜೆ

5 months ago

ರಾಯಚೂರು: ಮಣ್ಣೆತ್ತಿನ ಅಮವಾಸ್ಯೆಯನ್ನ ಬಿಸಿಲನಗರಿ ರಾಯಚೂರಿನಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಆರಂಭದಲ್ಲಿ ಅಮವಾಸ್ಯೆ ಬಂದಿರುವುದು ಹಾಗೂ ಗ್ರಹಣ ಇರುವುದರಿಂದ ಈ ಬಾರಿ ಮಣ್ಣೆತ್ತಿನ ಅಮವಾಸ್ಯೆ ವಿಶೇಷವಾಗಿದೆ. ಸಾರ್ವಜನಿಕರು, ರೈತರು ಮಣ್ಣೆತ್ತುಗಳನ್ನ ಕೊಂಡು ಮನೆ, ಜಮೀನುಗಳಲ್ಲಿ ಇಟ್ಟು ಪೂಜೆ ಮಾಡುತ್ತಾರೆ. ಅಲ್ಲದೆ ಈ...

ಸ್ನೇಹಿತನನ್ನೆ ಕೊಲೆಗೈದಿದ್ದ ವಿಚಾರಣಾಧೀನ ಕೈದಿ ಸಾವು

5 months ago

ರಾಯಚೂರು: ಸ್ನೇಹಿತನನ್ನೇ ಕೊಲೆಗೈದ ಆರೋಪ ಹೊತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕೊಲೆ ಪ್ರಕರಣದ ಆರೋಪಿ ಶಫಿವುದ್ದೀನ್( 30) ಮೃತ ಕೈದಿ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೆ ಕೊಲೆ ಮಾಡಿದ ಆರೋಪದಲ್ಲಿ ಶಫಿವುದ್ದೀನ್ ಜೈಲು ಪಾಲಾಗಿದ್ದನು. ಭಾನುವಾರ ಬೆಳಗ್ಗೆ ಎಸಿಡಿಟಿ...