1 year ago
ವಿಜಯಪುರ: ಬಸವ ಎಕ್ಸ್ ಪ್ರೆಸ್ ರೈಲಿನಲ್ಲಿ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದು ರೈಲ್ವೇ ಪೇದೆಯೊಬ್ಬರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಶ್ರೀಶಾಂತ ರಾಠೋಡ್ ಬಂಧಿತ ಆರೋಪಿ. ವಿಜಯಪುರ ತಾಲೂಕಿನ ಅತಾಲಟ್ಟಿ ಗ್ರಾಮದ ನಿವಾಸಿ ಬಾಳಕ್ಕ ಮನಗೂಳಿ ಸರ ಕಳೆದುಕೊಂಡಿದ್ದ ಮಹಿಳೆ. ಬಸವನಬಾಗೇವಾಡಿ ತಾಲೂಕಿನ ಆಲಮಟ್ಟಿ ರೈಲ್ವೇ ನಿಲ್ದಾಣ ಸಮೀಪದಲ್ಲಿ ಘಟನೆ ನಡೆದಿದೆ. ಶುಕ್ರವಾರ ಸಂಜೆ ಬಾಳಕ್ಕ ಅವರು ಬಸವ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಗಲಕೋಟೆಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದರು. ಚಲಿಸುತ್ತಿರುವ ರೈಲಿನಲ್ಲಿಯೇ ಶ್ರೀಕಾಂತ, ಬಾಳಕ್ಕ […]