Saturday, 18th August 2018

Recent News

1 day ago

ಪ್ರವಾಹದಿಂದಾಗಿ 2 ದಿನ ಶೃಂಗೇರಿ ಶೌಚಾಲಯದಲ್ಲಿದ್ದ ವ್ಯಕ್ತಿಯ ರಕ್ಷಣೆ

ಚಿಕ್ಕಮಗಳೂರು: ಶೃಂಗೇರಿಯಲ್ಲಿ ತುಂಗಾ ನದಿಯ ಪ್ರವಾಹಕ್ಕೆ ಸಿಲುಕಿ 2 ದಿನ ಶೌಚಾಲಯದಲ್ಲೇ ಪ್ರಾಣ ಉಳಿಸಿಕೊಂಡಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ರಕ್ಷಣಾತಂಡ ಯಶಸ್ವಿಯಾಗಿದೆ. ವಿನೋದ್ ಮಂಡ್ಲೆ ರಕ್ಷಣೆಯಾದ ವ್ಯಕ್ತಿ. ವಿನೋದ್ ಮೂಲತಃ ಬಿಹಾರ್ ಮೂಲದವರಾಗಿದ್ದು, ಶೃಂಗೇರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ  ಬುಧವಾರ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ತುಂಗಾನದಿಯ ಪ್ರವಾಹದಲ್ಲಿ ಸಿಕ್ಕಿಕೊಂಡ ವಿನೋದ್ ಜೀವ ಉಳಿಸಿಕೊಳ್ಳಲು ಗಾಂಧಿ ಮೈದಾನದಲ್ಲಿರುವ ಶೌಚಾಲಯದಲ್ಲೇ ಆಶ್ರಯ ಪಡೆದುಕೊಂಡಿದ್ದಾರೆ. ಪ್ರವಾಹದ ಪ್ರಮಾಣ ಕಡಿಮೆಯಾಗದೇ ಕಳೆದ ಎರಡೂ ದಿನಗಳಿಂದಲೂ ಶೌಚಾಲಯದಲ್ಲೇ ಸಿಲುಕಿಕೊಂಡಿದ್ದರು. ಶೌಚಾಲಯದಲ್ಲಿ ವ್ಯಕ್ತಿ […]

1 day ago

ತಡೆಗೋಡೆ ಸಮೇತ ಕುಸಿದು ಬಿದ್ದ ರಸ್ತೆ: ಮಡಿಕೇರಿ-ಕೇರಳ ಸಂಪರ್ಕ ಕಟ್

ಮಡಿಕೇರಿ: ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಕೊಡಗು ಅಂತಾರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 89 ಯನ್ನು ಬಂದ್ ಮಾಡಲಾಗಿದೆ. ವಿರಾಜಪೇಟೆ ತಾಲೂಕಿನ ಗೊಣಿಕೊಪ್ಪ, ಶ್ರಿಮಂಗಲ ಕ್ಯಾಲಿಕಟ್ ಸಂಪರ್ಕ ಕಲ್ಪಿಸುವ ರಸ್ತೆಯ ಪೊಕಳತೊಡು ಎಂಬಲ್ಲಿ ತಡೆಗೋಡೆ ಸಮೇತ ರಸ್ತೆ ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಇದೀಗ ಸ್ಥಳೀಯ ನಿವಾಸಿಗಳಲ್ಲಿನ...

ರಕ್ಷಣೆಗಾಗಿ ಗೋಗರೆಯುತ್ತಿರುವ 200ಕ್ಕೂ ಅಧಿಕ ಮಂದಿ ಸಂತ್ರಸ್ತರು

2 days ago

ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಬದಿಗೆರೆ ಗ್ರಾಮಸ್ಥರು ಅಪಾಯದಲ್ಲಿ ಸಿಲುಕಿದ್ದಾರೆ. ಬದಿಗೆರೆ ಗ್ರಾಮಕ್ಕೆ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಗುಡ್ಡವನ್ನೇರಿ ಕುಳಿತಿದ್ದಾರೆ. ಆದರೆ ಮಳೆ ಹೆಚ್ಚುತ್ತಿರುವುದರಿಂದ ಗುಡ್ಡವೂ ಸಹ ಕುಸಿಯುವ ಭೀತಿ ಎದುರಾಗಿದೆ....

ಕೇರಳ ನಿರಾಶ್ರಿತರಿಗೆ ಹೊದಿಕೆ ಕೊಟ್ಟು ಹೀರೋ ಆದ ಮಧ್ಯಪ್ರದೇಶದ ಬಡವ್ಯಾಪಾರಿ

4 days ago

ತಿರುವನಂತಪುರಂ: ಕಂಡು ಕೇಳರಿಯದ ಮಳೆಗೆ ದೇವರನಾಡು ಕೇರಳ ತತ್ತರಿಸಿ ಹೋಗಿದ್ದು, ತನ್ನ ಪ್ರಾಣದ ಹಂಗು ತೊರೆದು ಪುಟ್ಟ ಕಂದಮ್ಮನನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ರಕ್ಷಿಸಿ ಸುದ್ದಿಯಾದ ಬೆನ್ನಲ್ಲೇ ಇದೀಗ ಬಡ ವ್ಯಾಪಾರಿಯೊಬ್ಬರು ಮಾನವೀಯತೆ ಮೆರೆದು ಹೀರೋ ಆಗಿದ್ದಾರೆ. ಹೌದು. ಮಧ್ಯಪ್ರದೇಶ ಮೂಲದ ಬಡ...

ಅಲೆಗಳ ಹೊಡೆತಕ್ಕೆ ಸಿಲುಕಿ ಮಾರ್ಗಮಧ್ಯಯೇ ಕೆಟ್ಟು ನಿಂತ ದೋಣಿಗಳು: ಮೂವರ ರಕ್ಷಣೆ!

4 days ago

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ. ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ...

ಅರಬ್ಬಿ ಸಮುದ್ರದ ಹೊಡೆತಕ್ಕೆ ಸಿಲುಕಿ ಮುಳುಗಿದ 2 ದೋಣಿಗಳು: 16 ಮಂದಿಯ ರಕ್ಷಣೆ- ವಿಡಿಯೋ ವೈರಲ್

6 days ago

ಉಡುಪಿ: ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ಎರಡು ದೋಣಿಗಳು ಸಮುದ್ರ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕ್ಕಿ ಮುಳುಗಿ ಹೋಗಿದ್ದು, ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ...

ಅಂಬುತೀರ್ಥದಲ್ಲಿ ಸೆಲ್ಫಿ ಕ್ಲಿಕ್ಕಿಸೋ ವೇಳೆ ಬಿದ್ದಿದ್ದ ಟೆಕ್ಕಿಯ ಮೃತದೇಹ ನದಿಯಲ್ಲಿ ತೇಲಿ ಬಂತು!

1 week ago

ಚಿಕ್ಕಮಗಳೂರು: ಕಳಸ ಸಮೀಪದ ಅಂಬುತೀರ್ಥದಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲುಜಾರಿ ಬಿದ್ದಿದ್ದ ಯುವಕನ ಮೃತದೇಹವು 15 ದಿನಗಳ ನಂತರ ಜಿಲ್ಲೆಯ ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಜುಲೈ 26 ರಂದು ಮಂಗಳೂರಿನ ಟೆಕ್ಕಿ ಕಿರಣ್ ಕೋಟ್ಯಾನ್ ಕಳಸ ಸಮೀಪದ ಅಂಬುತೀರ್ಥದಲ್ಲಿ...

ಜಾನುವಾರು ಸಾಗಿಸುತ್ತಿದ್ದ ಐವರ ಬಂಧನ

2 weeks ago

ಬೆಂಗಳೂರು: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಐವರನ್ನು ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳು ಅಕ್ರಮವಾಗಿ ಆನೇಕಲ್ ನ ಚಂದಾಪುರ ಸಂತೆಯಿಂದ ತಮಿಳುನಾಡಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಪಡೆದ ಕೌ ಕ್ಯಾನ್ ಪೌಂಡೇಶನ್ ಸಂಸ್ಥೆಯ ರಮಣ್ ಎಂಬವರ ನೇತೃತ್ವದ...