Saturday, 16th November 2019

1 month ago

ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ

ಮಂಗಳೂರು: ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್(70) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಎಜೆ ಆಸ್ಪತ್ರೆಯಲ್ಲಿ ನಿಧನರಾದರು. 1949ರ ಡಿಸೆಂಬರ್ 11ರಂದು ಜನಿಸಿದ ಗೋಪಾಲನಾಥ್ ಅವರು ಸ್ಯಾಕ್ಸೋಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು. ಕದ್ರಿ ಗೋಪಾಲನಾಥ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇಂದು ಬೆಳಗ್ಗಿನ ಜಾವ 4 ಗಂಟೆಗೆ ಗೋಪಾಲನಾಥ್ ಎಜೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು. ಮೂಲತಃ ಮಂಗಳೂರಿನವರಾಗಿರುವ ಗೋಪಾಲನಾಥ್ […]