Monday, 18th November 2019

Recent News

2 days ago

ಬಂಡೀಪುರ ರಾತ್ರಿ ಸಂಚಾರ ನಿಷೇಧ- ಸುಪ್ರೀಂಗೆ ಕೇಂದ್ರದ ಅಫಿಡೆವಿಟ್

ನವದೆಹಲಿ: ಬಂಡೀಪುರ ಹುಲಿ ರಕ್ಷಿತಾರಣ್ಯವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧ ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಕೆ ಮಾಡಿದೆ. ಕೇರಳ ಮತ್ತು ಕರ್ನಾಟಕ ನಡುವಿನ ಸಂಚಾರಕ್ಕೆ ಕೇಂದ್ರ ಸರ್ಕಾರ ಅಫಿಡೆಟಿವ್‍ನಲ್ಲಿ ಪರ್ಯಾಯ ರಸ್ತೆ ಮಾರ್ಗ ರಚನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಕರ್ನಾಟಕ ರಾಜ್ಯ ಹೆದ್ದಾರಿ 89 ಮತ್ತು 90ರ ಮೂಲಕ ಕೇರಳ ತಲುಪಬಹುದಾಗಿದ್ದು, ಎಸ್‍ಎಚ್ 89 ಮಡಿಕೇರಿ, ಗೋಣಿಕೊಪ್ಪ, ಕುಟ್ಟಾ ಮೂಲಕ ಕೇರಳ ತಲುಪಬಹುದಾಗಿದೆ. ಅಲ್ಲದೇ ಎಸ್‍ಎಚ್ 90 ಹುಣಸೂರು […]

3 days ago

ಚಿದಂಬರಂ ಪ್ರಕರಣ ಕಾಪಿ ಪೇಸ್ಟ್ ಯಾಕೆ – ಇಡಿ ವಿರುದ್ಧ ಸುಪ್ರೀಂ ಕೆಂಡಾಮಂಡಲ

ನವದೆಹಲಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎಡವಟ್ಟಿನಿಂದಾಗಿ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಇಂದು ವಿಚಾರಣೆ ಮಾಡಿದ ನ್ಯಾ. ಆರ್ ಎಫ್ ನಾರಿಮನ್ ಮತ್ತು ನ್ಯಾ. ರವೀಂದ್ರ ಭಟ್ ನೇತೃತ್ವದ ದ್ವಿ ಸದಸ್ಯ...

ಕನಕಪುರದ ಬಂಡೆಗೆ ಇಂದು ಸುಪ್ರೀಂ ಪರೀಕ್ಷೆ

3 days ago

ನವದೆಹಲಿ: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಸುಪ್ರೀಂಕೋರ್ಟ್ ನಲ್ಲಿ ಮತ್ತೊಂದು ಪರೀಕ್ಷೆ ಎದುರಿಸಲಿದ್ದಾರೆ. ಇಡಿ ಸಲ್ಲಿಸಿರುವ ಮೇಲ್ಮನವಿಯನ್ನು ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಗಳಿಕೆ...

ರಾಹುಲ್‍ಗೆ ಎಚ್ಚರಿಕೆ ನೀಡಿ ನ್ಯಾಯಾಂಗ ನಿಂದನೆ ಅರ್ಜಿ ಇತ್ಯರ್ಥಗೊಳಿಸಿದ ಸುಪ್ರೀಂ

4 days ago

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದೆ. ರಫೇಲ್ ಡೀಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳ್ಳತನ ಎಸಗಿದ್ದಾರೆ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ ಎಂದು ರಾಹುಲ್ ಗಾಂಧಿ ಪ್ರಚಾರ ಭಾಷಣದಲ್ಲಿ ಹೇಳಿದ್ದರು....

ಅಯೋಧ್ಯೆ, ಕಾಶ್ಮೀರ ವಿಷಯದಲ್ಲಿ ಮೂಗು ತೂರಿಸಿದ ಪಾಕಿಗೆ ಚಳಿ ಬಿಡಿಸಿದ ಭಾರತದ ಅಧಿಕಾರಿ

4 days ago

– ವಿಶ್ವಸಂಸ್ಥೆಯಲ್ಲಿ ಮುಜುಗರಕ್ಕೀಡಾದ ಪಾಕ್ ಪ್ಯಾರಿಸ್: ಕಾಶ್ಮೀರ ಮತ್ತು ಅಯೋಧ್ಯೆ ವಿಚಾರದಲ್ಲಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕಾರಿ ಚಳಿ ಬಿಡಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಮುಜುಗರಕ್ಕೀಡಾಗಿದೆ. ಯುನೆಸ್ಕೋ(UNESCO)ದ 40ನೇ ಸಾಮಾನ್ಯ ಸಭೆ(ಜನರಲ್ ಕಾನ್ಫರೆನ್ಸ್)ಯಲ್ಲಿ ಕಾಶ್ಮೀರ...

ರಾಮಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳು ರಾಷ್ಟ್ರ ಮಂದಿರಗಳು: ಪೇಜಾವರ ಶ್ರೀಗಳು

4 days ago

ರಾಯಚೂರು: ಮಂದಿರಗಳು ಒಂದೇ ಧರ್ಮ ಹಾಗೂ ಸಮಾಜಕ್ಕೆ ಸೀಮಿತವಾಗಿರುವುದಿಲ್ಲ. ಹೀಗಾಗಿ ರಾಮ ಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳು ಕೂಡ ರಾಷ್ಟ್ರ ಮಂದಿರಗಳು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಮಂದಿರಗಳಿಗೆ ಎಲ್ಲಾ...

ಆಧಾರವಿಲ್ಲದೆ ಊಹಿಸಿದ ಮಾತ್ರಕ್ಕೆ ತನಿಖೆಗೆ ಆದೇಶಿಸಲ್ಲ – ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್

4 days ago

– ರಫೇಲ್ ತೀರ್ಪು ಮರು ಪರಿಶೀಲನಾ ಅರ್ಜಿ ವಜಾ – ಮೋದಿ ಸರ್ಕಾರಕ್ಕೆ ಮತ್ತೆ ಸುಪ್ರೀಂನಿಂದ ಕ್ಲೀನ್ ಚಿಟ್ ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಯ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು...

ಹಿಂದೂಗಳಿಗೆ ಮಾತ್ರ ಸೀಮಿತವಲ್ಲ, ಉಳಿದ ಧರ್ಮಗಳಿಗೂ ಅನ್ವಯ – 7 ಜಡ್ಜ್‌ಗಳ ಪೀಠಕ್ಕೆ ಶಬರಿಮಲೆ ಕೇಸ್

4 days ago

ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣದ ವಿಚಾರಣೆ 7 ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಮುಖ್ಯ ನ್ಯಾ. ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮೂವರು ನ್ಯಾಯಾಧೀಶರು ಈ ವಿಚಾರದ ಬಗ್ಗೆ ವಿಸ್ತೃತ  ಚರ್ಚೆ ನಡೆಯಬೇಕು ಎಂದು ತೀರ್ಪು ನೀಡಿದರೆ ನ್ಯಾ....