Tuesday, 19th March 2019

7 days ago

ನಿಖಿಲ್‍ಗೆ ಟಿಕೆಟ್ ಸಿಕ್ಕಿ, ಚುನಾವಣೆಯಲ್ಲಿ ಗೆಲುವು ಸಿಗಲಿ- ಅನಿತಾ ಹರಕೆ

ಮಂಡ್ಯ: ಲೋಕಸಭಾ ಚುನಾವಣೆಗೆ ಜೆಡಿಎಸ್ ನಿಂದ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಇಂದು ಕೂಡ ಒಂದೂ ಕಾಲು ರೂ. ಹರಕೆಯ ಪೂಜೆಯನ್ನು ಮುಂದುವರಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅನಿತಾ ಪೂಜೆ ಸಲ್ಲಿಸಲಿದ್ದಾರೆ. ನಿಖಿಲ್‍ಗೆ ಜೆಡಿಎಸ್ ಟಿಕೆಟ್ ಸಿಕ್ಕಿ, ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ. ಇದನ್ನೂ ಓದಿ: ಮಗನ ಒಳಿತಿಗಾಗಿ ಒಂದು ಕಾಲು ರೂಪಾಯಿ ಹರಕೆ ಹೊತ್ತ ಅನಿತಾ […]

2 weeks ago

ಪುಲ್ವಾಮಾದಲ್ಲಿ ಮುಸ್ಲಿಂರಿಂದ ಶಿವನ ದೇಗುಲ ಜೀರ್ಣೋದ್ಧಾರ!

ಪುಲ್ವಾಮಾ: ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದ ಪುಲ್ವಾಮಾ ಸಮೀಪದ ಬರೇಲಿಯಲ್ಲಿ, ಸುಮಾರು 80 ವರ್ಷ ಹಳೆಯ ಶಿವ ದೇಗುಲವೊಂದನ್ನು ನವೀಕರಿಸಲು ಮುಸ್ಲಿಂರು ಹಿಂದೂಗಳ ಜೊತೆ ಕೈ ಜೋಡಿಸಿದ್ದಾರೆ. ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರ ಹುತಾತ್ಮರಾಗಿದ್ದರು. ಆಗಿನಿಂದ ಪುಲ್ವಾಮಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥತಿ ನಿರ್ಮಾಣವಾಗಿದೆ....

ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

3 weeks ago

ಕಾರವಾರ: ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ...

ಭಿಕ್ಷೆ ಬೇಡಿ ಕೂಡಿಟ್ಟಿದ್ದ 6.61 ಲಕ್ಷ ಹಣವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ್ರು!

4 weeks ago

ಜೈಪುರ: ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ಅಜ್ಮೇರ್‍ದಲ್ಲಿ ಬದುಕಿದ್ದಾಗ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ ಅಜ್ಜಿಯೊಬ್ಬರ ಹಣವೂ ಈಗ ಯೋಧರ ಕುಟುಂಬಕ್ಕೆ ಸಹಾಯವಾಗಿದೆ. ಭಿಕ್ಷುಕಿ ನಂದಿನಿ ಶರ್ಮಾ ಸಂಪಾದನೆ...

ಹಂಪಿ ನಂತ್ರ ಅಂಜನಾದ್ರಿ ಬೆಟ್ಟಕ್ಕೆ ಯದುವೀರ್ ಒಡೆಯರ್ ಭೇಟಿ

1 month ago

ಕೊಪ್ಪಳ: ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್ ಅವರು ಇಂದು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ಪೌರಾಣಿಕ ಹಾಗೂ ಐತಿಹಾಸಿಕ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು ಅವರು...

ಏಕಾಏಕಿ ಬನಶಂಕರಿ ದೇಗುಲದ ಬಳಿ ಇದ್ದ ಬೀದಿ ವ್ಯಾಪಾರಿಗಳ ಎತ್ತಂಗಡಿ!

1 month ago

ಬೆಂಗಳೂರು: ಬನಶಂಕರಿ ದೇವಾಲಯ ನಗರದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿದ್ದು, ಆದರೆ ಈಗ ದೇಗುಲದ ಮುಂದೆ ಅನೇಕ ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಏಕಾಏಕಿ ಪೊಲೀಸರು ಎತ್ತಂಗಡಿ ಮಾಡಿದ್ದಾರೆ. ಪೊಲೀಸರು ಏಕಾಏಕಿ ಎತ್ತಂಗಡಿ ಮಾಡಿದ್ದಕ್ಕೆ ರೊಚ್ಚಿಗೆದ್ದ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ....

ವಿರೋಧಿಗಳ ನಾಶಕ್ಕೆ ಭಕ್ತರ ಬೇಡಿಕೆ – ಯಲಗೂರು ದೇಗುಲದ ಹುಂಡಿಯಲ್ಲಿತ್ತು ವಿಚಿತ್ರ ಪತ್ರ

1 month ago

ವಿಜಯಪುರ: ದೇವರ ಹುಂಡಿಯಲ್ಲಿ ಹಣದ ಬದಲು ವಿರೋಧಿಗಳ ನಾಶಕ್ಕೆ ಭಕ್ತರು ಬೇಡಿಕೆ ಪತ್ರ ಹಾಕಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರಿನಲ್ಲಿ ನಡೆದಿದೆ. ಶ್ರೀಕ್ಷೇತ್ರ ಯಲಗೂರ ದೇವಸ್ಥಾನದ ಕಾಣಿಕೆ ಹುಂಡಿಗಳಲ್ಲಿ ಚಿತ್ರವಿಚಿತ್ರ ಬೇಡಿಕೆಗಳನ್ನು ಬರೆದು ಭಕ್ತರು ಹಾಕಿದ್ದಾರೆ. ಹುಂಡಿ...

ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದ ಶ್ರೀರಾಮುಲು

1 month ago

ಮಂಗಳೂರು: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಬಿ. ಶ್ರೀರಾಮುಲು ಭೇಟಿ ನೀಡಿದ್ದರು. ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಅವರು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಹಾಗೂ ಮಹಾಭಿಷೇಕ ಸೇವೆ ನೆರವೇರಿಸಿದರು. ಅಲ್ಲದೇ ಮಧ್ಯಾಹ್ನದ...