Tuesday, 20th August 2019

2 months ago

ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ ಆಚರಣೆ ಮಾಡಿ ಡಿ-ಬಾಸ್ ಗೆ ಜೈಕಾರ ಹಾಕಿದರು. ದರ್ಶನ್ ಅಭಿನಯದ ಯಜಮಾನ ಚಿತ್ರ ರಾಜ್ಯದಲ್ಲಿ ಯಶಸ್ವಿ ಪ್ರದರ್ಶನವಾಗಿದ್ದು, ಹತ್ತಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದೆ. ಕನ್ನಡ ಚಿತ್ರ ನೂರು ದಿನ ಪೂರೈಸುವುದೇ ಕಷ್ಟವಾಗಿದ್ದು, ಅಂತಹದರಲ್ಲಿ ಯಜಮಾನ 100 ದಿನ […]

4 months ago

2 ವರ್ಷಗಳಿಂದ ಮುಚ್ಚಿದ್ದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಓಪನ್

ಬೆಂಗಳೂರು: ನಟ ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗದ ಮರೆಲಾಗದ ಮಾಣಿಕ್ಯ. ಶಂಕರ್ ನಾಗ್ ಹೆಸರೇ ಅದೆಷ್ಟೋ ಜನರಿಗೆ ಸ್ಪೂರ್ತಿ. ಎರಡು ವರ್ಷಗಳಿಂದ ಮುಚ್ಚಿದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಆಟ ಆರಂಭಿಸಿದ್ದು, ಶಂಕ್ರಣ್ಣನ ಅಭಿಮಾನಿಗಳು ಪುಲ್ ಖುಷ್ ಆಗಿದ್ದಾರೆ. 1907ರಲ್ಲಿ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಬಿಬಿಎಂಪಿ ಕಟ್ಟಡದಲ್ಲಿ ಶಂಕರ್ ನಾಗ್ ಹೆಸರಲ್ಲಿ...

ಗಾಂಜಾದ ಮತ್ತಿನಲ್ಲಿ ಚಾಲನೆ- ಚಿತ್ರಮಂದಿರದೊಳಗೆ ನುಗ್ಗಿದ ಕಾರು!

12 months ago

ಕೋಲಾರ: ಗಾಂಜಾ ಹೊಡೆದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅತೀ ವೇಗವಾಗಿ ಚಲಾಯಿಸಿದ ಪರಿಣಾಮ ಕಾರು ಚಿತ್ರಮಂದಿರದೊಳಗೆ ನುಗ್ಗಿ ಬಾರಿ ಅನಾಹುತವೊಂದು ತಪ್ಪಿರುವ ಘಟನೆ ಕೋಲಾರ ನಗರದಲ್ಲಿಂದು ನಡೆದಿದೆ. ಕೋಲಾರ ನಗರದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ಗಾಂಜಾ ಹೊಡೆದ ಮತ್ತಿನಲ್ಲಿ ಚಾಲಕ...

ಚಾಮರಾಜನಗರ, ದಾವಣಗೆರೆ ಜಿಲ್ಲೆಯಾದ್ಯಂತ ‘ಕಾಳಾ’ ರದ್ದು!

1 year ago

ಚಾಮರಾಜನಗರ/ದಾವಣಗೆರೆ: ತಮಿಳುನಾಡಿಗೆ ಹೊಂದಿಕೊಂಡಂತೆ ಇರುವ ಗಡಿನಾಡು ಚಾಮರಾಜನಗರ ಜಿಲ್ಲೆಯಾದ್ಯಂತ ರಜಿನಿಕಾಂತ್ ಅಭಿನಯದ ಕಾಳಾ ಚಿತ್ರ ಬಿಡುಗಡೆಯಾಗಿಲ್ಲ. ಜಿಲ್ಲೆಯ ಕೊಳ್ಳೇಗಾಲ, ಗುಂಡ್ಲುಪೇಟೆ, ಚಾಮರಾಜನಗರ ಸೇರಿದಂತೆ ತಾಲೂಕಿನ ಯಾವುದೇ ಚಿತ್ರ ಮಂದಿರಗಳಲ್ಲಿ ಕಾಳಾ ಚಿತ್ರ ಬಿಡುಗಡೆಯಾಗಿಲ್ಲ. ಅಷ್ಟೇ ಅಲ್ಲದೇ ಜಿಲ್ಲೆಯ ಯಾವುದೇ ಚಿತ್ರಮಂದಿರಗಳಲ್ಲಿ ಬೇರೆ...

ಸಿನಿಮಾ ಥಿಯೇಟರ್ ಗೇಟ್ ಹಾರಿದ ನಟ ಸೂರ್ಯ

2 years ago

ಹೈದರಾಬಾದ್: ಕಾಲಿವುಡ್ ಸೂಪರ್ ಸ್ಟಾರ್ ಸೂರ್ಯ ತಮ್ಮ ‘ಗ್ಯಾಂಗ್’ ಚಿತ್ರದ ಪ್ರಮೋಷನ್ ವೇಳೆ ಅಭಿಮಾನಿಗಳಿಂದ ತಪ್ಪಿಸಿಕೊಳ್ಳಲು ಥಿಯೇಟರ್ ಗೇಟ್ ಹಾರಿದ್ದಾರೆ. ಕಳೆದ ವಾರ ಬಿಡುಗಡೆಯಾಗಿರುವ ಸೂರ್ಯ ಅವರ `ಗ್ಯಾಂಗ್’ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು. ತಮಿಳು, ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿ...

ಚಿಕ್ಕಬಳ್ಳಾಪುರಕ್ಕೆ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಭೇಟಿ

2 years ago

ಚಿಕ್ಕಬಳ್ಳಾಪುರ: ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರುಳಿ ಸೋಮವಾರ ತಮ್ಮ ಹೊಚ್ಚ ಹೊಸ ಮಫ್ತಿ ಸಿನಿಮಾದ ಪ್ರಮೋಷನ್ ಗಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದರು. ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಶ್ರೀಮುರುಳಿ ಹಾಗೂ ನಟ ಶಿವರಾಜ್ ಕುಮಾರ್ ಅಭಿನಯದ ಮಫ್ತಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು,...

ಥಿಯೇಟರ್ ನಲ್ಲಿ ಸಿನಿಮಾ ನೋಡುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ CRPF ಯೋಧ

2 years ago

ಶಿವಮೊಗ್ಗ: ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಣೆ ಮಾಡುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಸಿಆರ್ ಪಿಎಫ್ ಯೋಧನಿಗೆ ಪ್ರೇಕ್ಷಕರು ಧರ್ಮದೇಟು ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರವಿ ಬಿ. ಎಂಬಾತನೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಯೋಧ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ...

ಥಿಯೇಟರ್ ನಲ್ಲಿ ರಾಷ್ಟ್ರಗೀತೆ ವೇಳೆ ಎದ್ದು ನಿಲ್ಲದ 3 ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ!

2 years ago

ಹೈದರಾಬಾದ್: ಥಿಯೇಟರ್ ನಲ್ಲಿ ಸಿನಿಮಾಗೂ ಮುಂಚೆ ಪ್ರಸಾರ ಮಾಡಲಾದ ರಾಷ್ಟ್ರಗೀತೆಯ ಸಂದರ್ಭದಲ್ಲಿ ಎದ್ದು ನಿಲ್ಲದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ರಾಜೇಂದ್ರ ನಗರ ಪೊಲೀಸರು ಬಂಧಿಸಿದ್ದಾರೆ. ಜಮ್ಮು-ಕಾಶ್ಮೀರದ ಬಾರಮುಲ್ಲಾ ನಿವಾಸಿಗಳಾದ ಜಮೀಲ್ ಗುಲ್, ಓಮರ್ ಫೈಜ್ ಲುನೀ ಮತ್ತು ಮುದಾಸಿರ್ ಶಬ್ಬೀರ್ ಬಂಧಿತ...