Sunday, 20th January 2019

1 day ago

ಕಾಫಿ ಕುಡಿದು ತಾಯಿ, ಮಗಳು ಸಾವು – ಮೊಮ್ಮಕ್ಕಳು ಪ್ರಾಣಾಪಾಯದಿಂದ ಪಾರು

ಚಿಕ್ಕಬಳ್ಳಾಪುರ: ಚಾಮರಾಜನಗರ ಜಿಲ್ಲೆಯ ವಿಷ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕಾಫಿ ಕುಡಿದು ಅಸ್ವಸ್ಥಗೊಂಡಿದ್ದ ತಾಯಿ ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬತ್ತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಕಲಮ್ಮ(80) ಮತ್ತು ನರಸಮ್ಮ(60) ಮೃತ ತಾಯಿ ಮಗಳು. ಇನ್ನೂ ಕಾಫಿ ಕುಡಿದಿದ್ದ ಮೃತ ನರಸಮ್ಮನ ಮೊಮ್ಮಕ್ಕಳಾದ ಅರ್ಜುನ್ (7) ಮತ್ತು ಆರತಿ(4) ಅಪಾಯದಿಂದ ಪಾರಾಗಿದ್ದಾರೆ. ಚಿಂತಾಮಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮಗಳು ಮೃತಪಟ್ಟಿದ್ದಾರೆ. ಮೃತ ಕುಟುಂಬದವರು ಸ್ವಗ್ರಾಮದ ಅಂಗಡಿಯೊಂದರಲ್ಲಿ ಕಾಫಿಪುಡಿ ಖರೀದಿಸಿದ್ದರು. […]

4 days ago

ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು....

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ

2 weeks ago

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಧಾನಸೌಧದ ಮುಂದೆ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್  ಮತ್ತೆ ಜಿಲ್ಲೆಯ ಹೊಸದುರ್ಗದಲ್ಲಿ ಭಾರೀ ಹೈಡ್ರಾಮ ಮಾಡಿದ್ದಾರೆ. ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು...

ಮಂಗನ ಕಾಯಿಲೆಗೆ 7 ಬಲಿ – ಏನಿದು ಮಂಗನ ಕಾಯಿಲೆ-ಹೇಗೆ ಬರುತ್ತೆ..?

2 weeks ago

ಶಿವಮೊಗ್ಗ: ಮಲೆನಾಡಿನ ಜಿಲ್ಲೆಗಳನ್ನು ಬೇಸಿಗೆಯಲ್ಲಿ ಕಾಡುವ ಕ್ಯಾಸನೂರು ಫಾರೆಸ್ಟ್ ಡೀಸಿಸ್ ಈ ವರ್ಷ ಮುಂಚಿತವಾಗಿ ಕಾಣಿಸಿಕೊಂಡು ಏಳು ಜನರನ್ನು ಬಲಿ ತೆಗೆದುಕೊಂಡಿದೆ. ಮಂಗನ ಜ್ವರ ಎಂದು ಕರೆಯಲಾಗುವ ಈ ಮಹಾಮಾರಿಗೆ ಮಲೆನಾಡಿನ ಜನ ತತ್ತರಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ,...

ಒಂದೇ ಕೊಠಡಿಯಲ್ಲಿ ವೈದ್ಯಾಧಿಕಾರಿಗಳಿಬ್ಬರ ಪೈಪೋಟಿ – ಸಿಬ್ಬಂದಿಗೆ ಗೊಂದಲ, ರೋಗಿಗಳು ಪರದಾಟ

2 weeks ago

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹುದ್ದೆಗೆ ಇಬ್ಬರು ವೈದ್ಯರುಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಒಂದೇ ಕೊಠಡಿಯಲ್ಲಿ ಇಬ್ಬರು ತಾವೇ ವೈದ್ಯಾಧಿಕಾರಿ ಎಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಿಬ್ಬಂದಿಗೆ ಗೊಂದಲವನ್ನುಂಟು ಮಾಡಿದೆ. ಡಾ.ಶಶಿಕಲಾ...

ಬೆಂಗ್ಳೂರಿನ ಬಾಲ ಮಂದಿರದ ಊಟದಲ್ಲಿ ಹಲ್ಲಿ – 103 ವಿದ್ಯಾರ್ಥಿಗಳು ಅಸ್ವಸ್ಥ

3 weeks ago

ಬೆಂಗಳೂರು: ನಗರದ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಿದ್ವಾಯಿ ಆಸ್ಪತ್ರೆ ಬಳಿ ಇರುವ ಬಾಲಮಂದಿರದಲ್ಲಿ ಭಾನುವಾರ ರಾತ್ರಿ ಊಟ ಮಾಡಿದ್ದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಊಟ ಮಾಡಿದ್ದಾರೆ....

ನಡೆದಾಡುವ ದೇವರ ಶ್ವಾಸಕೋಶದಲ್ಲಿ ಸೋಂಕು ಪತ್ತೆ – ಶ್ರೀಗಳ ಆಪ್ತ ವೈದ್ಯರು ಸ್ಪಷ್ಟನೆ

3 weeks ago

ತುಮಕೂರು: ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಳೆದ ಐದಾರು ದಿನದಿಂದ ಶ್ವಾಸಕೋಶದಲ್ಲಿ ಕಫ ಕಾಣಿಸಿಕೊಂಡಿದ್ದರ ಪರಿಣಾಮ ಇಂದು ಸೋಂಕು ಪತ್ತೆಯಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ವೈದ್ಯರು, ಶನಿವಾರ...

ಕಾಫಿ ತೋಟಕ್ಕೆ ಬಂದು ರಾತ್ರಿ ವಿಷ ಕುಡಿದ ಪ್ರೇಮಿಗಳು – ಯುವಕ ಸಾವು, ಯುವತಿ ಗಂಭೀರ

3 weeks ago

ಸಾಂದರ್ಭಿಕ ಚಿತ್ರ ಚಿಕ್ಕಮಗಳೂರು: ಪ್ರೇಮಿಗಳಿಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಯುವಕ ಸಾವನ್ನಪ್ಪಿ ಯುವತಿ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆಯ ತಾಲೂಕಿನ ಎಸಗಲ್ ಗ್ರಾಮದ ತೋಟವೊಂದರಲ್ಲಿ ನಡೆದಿದೆ. ಕೀರ್ತಿ (22) ವಿಷ ಕುಡಿದು ಮೃತಪಟ್ಟ ಯುವಕನಾಗಿದ್ದು, ಯುವತಿ ಸಹನಾ...