Saturday, 17th August 2019

4 months ago

ಗೋಕರ್ಣಕ್ಕೆ ಅನಿಲ್ ಕುಂಬ್ಳೆ ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಭೇಟಿ ನೀಡಿ ಪೂಜಾ ಕಾರ್ಯ ನೆರವೇರಿಸಿದರು. ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ವೇ.ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ದೇವಸ್ಥಾನದ ಆಡಳಿತಾಧಿಕಾರಿ ಶ್ರೀ ಜಿಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

4 months ago

ಸ್ನಾನಕ್ಕಾಗಿ ಹೊಳೆಯಲ್ಲಿ ಇಳಿದಿದ್ದ ಇಬ್ಬರು ಸಾವು

ಕಾರವಾರ: ಸ್ನಾನಕ್ಕಾಗಿ ಹೊಳೆಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಓಣಿಕೇರಿ ಗ್ರಾಮದ ಸಮೀಪದಲ್ಲಿರುವ ಬಿಳಚಿಕಟ್ಟು ಬಳಿ ಕೆಂಗ್ರೆಹೊಳೆಯಲ್ಲಿ ಗುರುವಾರ ನಡೆದಿದೆ. ಬೈಂದೂರು ಮೂಲದ ದಿನೇಶ್ (35) ಹಾಗೂ ಶಿರಸಿ ಮೂಲಕ ವಿನಾಯಕ್ (20) ಮೃತ ದುರ್ದೈವಿಗಳು. ಶಾಲ್ಮಲಾ ನದಿ ಪಾತ್ರದ ಕೆಂಗ್ರೆಹೊಳೆಯಲ್ಲಿ ದುರ್ಘಟನೆ ನಡೆದಿದೆ. ಶಿರಸಿಯ...

ಭಾಷಣದ ವೇಳೆ ಮೋದಿ ಘೋಷ – ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್

1 year ago

ಹೊನ್ನವಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣ ಗಣನೆ ಆರಂಭವಾಗುತ್ತಿದಂತೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ದಿನವೇ ಮುಜುಗರ ಅನುಭವಿಸಿದ್ದಾರೆ. ಪ್ರಚಾರಕ್ಕಾಗಿ ಇಂದು ಹೊನ್ನಾವರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಗರದ...

ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ ಕರೆ- ಪೊಲೀಸರಿಗೆ ದೂರು

1 year ago

ಕಾರವಾರ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರಿಗೆ ಇಂಟರ್ ನೆಟ್ ಮೂಲಕ ಕೊಲೆ ಬೆದರಿಕೆ ಕರೆ ಬಂದಿದೆ. ಸಚಿವರ ಮೊಬೈಲ್ ನಂಬರ್ ಹಾಗೂ ಲ್ಯಾಂಡ್ ಲೈನ್ ನಂಬರಿಗೆ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ. ಇಂದು ಬೆಳಗಿನ...

ಹಳಿಯಾಳ ಪಿಎಸ್‍ಐ ಪತ್ನಿ ಆತ್ಮಹತ್ಯೆಗೆ ಶರಣು

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಿಎಸ್‍ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಿಎಸ್‍ಐ ಮಲ್ಲಪ್ಪ ಎಸ್ ಹೂಗಾರ ಅವರ ಪತ್ನಿ ವಿಜಯಲಕ್ಷ್ಮಿ ಹೂಗಾರ(28) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಪಾಳಿ ಮುಗಿಸಿ ಬೆಳಗ್ಗೆ ಪಿಎಸ್‍ಐ ಮನೆಗೆ ವಾಪಾಸ್ಸಾದಾಗ ಈ ಪ್ರಕರಣ...

ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

2 years ago

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹೊತ್ತಿ ಉರಿದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹೊನ್ನಾವರದ ಪರೇಶ್ ಮೇಸ್ತಾ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಿದೆ. ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ಪರೇಶ್ ಕುಟುಂಬದ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿರೋದಾಗಿ ತಿಳಿಸಿದ್ದಾರೆ. ಬಿಜೆಪಿಯವರ...

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

2 years ago

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ...

ಹಾಲು ತರಲು ಹೋಗಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಬಂಧನ

2 years ago

ಕಾರವಾರ: ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿ ಗ್ರಾಮದಲ್ಲಿ ಹಾಲು ತರಲು ಹೋಗಿದ್ದ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯ ರೊಬೆಲ್ ಶೆಟ್ಟಿ (29) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಯುವತಿ ಸುಬ್ರಹ್ಮಣ್ಯನ ಮನೆಗೆ...