Tag: VC Canal

  • ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ಮಂಡ್ಯ: ವಿಸಿ ನಾಲೆಗೆ (VC Canal ) ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.

    ಶ್ರೀರಂಗಪಟ್ಟಣ ತಾಲೂಕು ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು (Indica Car) ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.

    4 Women dies after car plunges into VC Canal in Srirangapatna Mandya 2

    ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ‌. ಇದನ್ನೂ ಓದಿ: ಪ್ರದೀಪ್ ಈಶ್ವರ್ Vs ಸುಧಾಕರ್ ಟಾಕ್‍ಫೈಟ್ – ಹಾಲಿ, ಮಾಜಿ ಶಾಸಕರ ಬೆಂಬಲಿಗರ ವಿರುದ್ದ ಎಫ್‌ಐಆರ್‌ ದಾಖಲು

    ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್ಪಿ ಯತೀಶ್ ಭೇಟಿ ನೀಡಿದ್ದಾರೆ.

     

    ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಂಡ್ಯ ತಾಲೂಕು ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಗುರುವಾರ ಕಾರು ಮಗುಚಿ ಬಿದ್ದು ಶಿವಳ್ಳಿ ಗ್ರಾಮದ ಲೋಕೇಶ್ ಮೃತಪಟ್ಟಿದ್ದರು. 2018ರಲ್ಲಿ ಮಂಡ್ಯ ಜಿಲ್ಲೆಯ ಕನಗನಮರಡಿ ಗ್ರಾಮದ ಕಾವೇರಿ ನದಿಯ ವಿಸಿ ನಾಲೆಗೆ ಬಸ್‌ ಉರುಳಿ 30 ಮಂದಿ ಸಾವನ್ನಪ್ಪಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ

    ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ

    ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿಸಿ ನಾಲೆ (VC Canal) ಪಲ್ಟಿಯಾಗಿದ್ದು, ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ತಿಬ್ಬನಹಳ್ಳಿಯಲ್ಲಿ ನಡೆದಿದೆ.

    VC canal

    ನಾಪತ್ತೆಯಾಗಿರುವ ಕಾರು ಚಾಲಕ (Car Driver) ಲೋಕೇಶ್‌ಗಾಗಿ ತೀವ್ರ ಶೋಧ ನಡೆದಿದೆ. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಪಲ್ಟಿ ಹೊಡೆದಿದೆ. ಮಳೆಯಿಂದ ಹೆಚ್ಚಾಗಿ ನೀರು ತುಂಬಿದ್ದ ಕಾರಣ ಕಾರು ಸಂಪೂರ್ಣ ಮುಳುಗಡೆಯಾಗಿದೆ. ಕಾರಿನಲ್ಲಿದ್ದ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ.

    VC canal 4

    ಚಾಲಕ ಲೋಕೇಶ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕಾಲುವೆಯ ನೀರು ನಿಲ್ಲಿಸುವಂತೆ ಅಧಿಕಾರಿಗಳು ಸೂಚನೆ ನಿಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾಲುವೆಗೆ ಬಿದ್ದಿರುವ ಕಾರನ್ನ ಮೇಲೆತ್ತಲು ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇನ್‍ಸ್ಪೆಕ್ಟರ್, ಮೇಲಧಿಕಾರಿಗಳಷ್ಟೇ ಡ್ರಂಕ್ & ಡ್ರೈವ್ ತಪಾಸಣೆ ಮಾಡ್ಬೇಕು – ಸುಲಿಗೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕ್ರಮ

    2017ರಲ್ಲಿ ಕಾಲುವೆಗೆ ತಡೆಗೊಡೆ ಇಲ್ಲದೇ ದೊಡ್ಡ ಬಸ್ ದುರಂತ ನಡೆದಿತ್ತು. ಈ ಘಟನೆಯ ಬಳಿಕ ಕಾಲುವೆಯ ಉದ್ದಕ್ಕೂ ತಡೆಗೊಡೆ ನಿರ್ಮಿಸುವುದಾಗಿ ಹೇಳಿದ್ದ ಸರ್ಕಾರ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದಾಗಿ ಆಗಾಗ್ಗೆ ಅಪಘಾತಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಮಂಡ್ಯ: ಕಾವೇರಿ ಕಣಿವೆ ಸುತ್ತ ಸಾಕಷ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಾಶಯ ಭರ್ತಿಯಾಗುತ್ತಿದೆ. ಈಗಾಗಲೇ 106 ಅಡಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬಂದಿದೆ. ಹೀಗಾಗಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಾವೇರಿ ನೀರನ್ನು ಅವಲಂಬಿಸಿ ಕೃಷಿ ಚಟುವಟಿಕೆ ನಡೆಸುವ ರೈತರಿಗೆ ಸಂತಸದ ಸುದ್ದಿ ಇದು. ಕೆಆರ್ ಸ್ ಅಣೆಕಟ್ಟಿನ 124 ಅಡಿಗಳ ಪೈಕಿ 106 ಅಡಿ ನೀರು ತುಂಬಿದೆ. 35 ಸಾವಿರ ಕ್ಯೂಸೆಕ್ಸ್ ಒಳ ಹರಿವಿನ ಪ್ರಮಾಣ ಇದೆ. ಕೇವಲ 24 ಗಂಟೆಯಲ್ಲಿ ಎರಡು ಅಡಿಯಷ್ಟು ನೀರು ಭರ್ತಿಯಾಗಿದೆ. 6 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ. ಈಗಾಗಲೇ ಹೇಮಾವತಿ ನಾಲೆಗೆ ನೀರು ಬಿಡಲಾಗಿದ್ದು, ಸೋಮವಾರಿಂದ ವಿಸಿ ನಾಲೆಗೆ ನೀರು ಹರಿಸುವ ಮೂಲಕ ಮುಂಗಾರು ಕೃಷಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.

    KRS 1 medium

    ಸಬ್ಸಿಡಿಯಲ್ಲಿ ಭತ್ತದ ಬೀಜ ವಿತರಣೆ ಪ್ರಾರಂಭ:
    ಸಕ್ಕರೆ ನಾಡು ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಬ್ಬಿಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 40 ಸಾವಿರ ಹೆಕ್ಟೇರ್ ನಲ್ಲಿ ಕಬ್ಬು ಬೆಳೆದರೆ 65 ಸಾವಿರ ಹೆಕ್ಟೇರ್ ನಲ್ಲಿ ಭತ್ತ ಬೆಳೆಯಲಾಗುತ್ತದೆ. ಮುಂಗಾರು ಕೃಷಿ ಆರಂಭಿಸಲು ನಾಲೆಗಳಿಗೆ ನೀರು ಬಿಡುವ ಸಮಯವನ್ನೇ ಎದುರು ನೋಡಲಾಗುತ್ತಿತ್ತು. ಕೆಆರ್ ಎಸ್ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈಗ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೃಷಿ ಇಲಾಖೆ ಸಹ ಸಬ್ಸಿಡಿಯಲ್ಲಿ ಭತ್ತದ ಬೀಜವನ್ನು ವಿತರಿಸುವ ಕಾರ್ಯ ಆರಂಭಿಸಲಿದೆ. ಮುಂದಿನ ಬುಧವಾರದಿಂದ ರೈತರಿಗೆ ಭತ್ತದ ಬೀಜ ವಿತರಣೆ ಶುರುವಾಗಲಿದೆ. ಸುಮಾರು 4 ಸಾವಿರ ಹೆಕ್ಟೇರ್ನಲ್ಲಿ ನೀರಾವರಿ ರಾಗಿ ಹಾಗೂ 500 ಹೆಕ್ಟೇರ್ ನಲ್ಲಿ ಅಲಸಂದೆ ಕೂಡ ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ಗೊಬ್ಬರ ಸಹ ದಾಸ್ತಾನು ಇದ್ದು, ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಸರಬರಾಜು ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಉಳಿಸಬೇಕಾದರೆ ಕಾಂಗ್ರೆಸ್ ಕಿತ್ತೊಗೆಯಬೇಕೆಂದ ಸಿದ್ದರಾಮಯ್ಯ- ಮತ್ತೆ ಎಡವಟ್ಟು

    KRS DAM medium

    ವರುಣನ ಕೃಪೆಯಿಂದ ರೈತರ ಬದುಕು ಹಸನಾಗಲಿ:
    ಮಂಡ್ಯ ಜಿಲ್ಲೆಯಲ್ಲಿ ವ್ಯವಸಾಯವೇ ಪ್ರಧಾನ ಕಸುಬು. ಸಂಪೂರ್ಣ ಜಿಲ್ಲೆ ಕೃಷಿಯಿಂದ ಆವೃತವಾಗಿದೆ. ರೈತನ ಬದುಕಿಗೆ ನೀರೇ ಪ್ರಧಾನ. ಕಳೆದ ಮೂರು ವರ್ಷಗಳಿಂದ ಸತತವಾಗಿ ಕೆ.ಆರ್.ಎಸ್. ಜಲಾಶಯ ಭರ್ತಿಯಾಗುತ್ತಿರುವುದು ನನಗೆ ಅತೀವ ಸಂತಸ ತಂದಿದೆ. ಕಾವೇರಿ ನದಿ ತುಂಬಿ ಹರಿದರೆ ರೈತರ ಜೀವನ ಕೂಡ ಸಂತಸದಿಂದ ತುಂಬಿರುತ್ತದೆ. ಸಾಕಷ್ಟು ಮಳೆಯಾಗಿ, ಜಲಾಶಯ ತುಂಬುತ್ತಿರುವ ಕಾರಣ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ರೈತರು ನೀರನ್ನು ಪೋಲು ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು. ರೈತರು ಅಂದುಕೊಂಡಂತೆ ಉತ್ತಮ ಬೆಳೆಯಾಗಲಿ. ವರುಣ ಕೃಪೆಯಿಂದ ನೀರಿನ ಕೊರತೆಯಾಗದೆ ಯಥೇಚ್ಚ ಫಸಲು ಬರಲಿ. ಆ ಮೂಲಕ ರೈತರ ಬದುಕು ಹಸನಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾರೈಸಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ