Friday, 22nd November 2019

Recent News

1 month ago

ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ – ನದಿ ಪಾತ್ರದ ಗ್ರಾಮಗಳಿಗೆ ರೆಡ್ ಅಲರ್ಟ್

– ಚಿಕ್ಕಜಂತಗಲ್ ಸೇತುವೆ ಮುಳುಗಡೆ – ಗಂಗಾವತಿ – ಕಂಪ್ಲಿ ಸಂಪರ್ಕ ಕಡಿತ – ಆನೆಗುಂದಿ ನವವೃಂದಾವನ ಜಲಾವೃತ ಕೊಪ್ಪಳ: ಒಳ ಹರಿವು ಹೆಚ್ಚಾದ ಹಿನ್ನೆಲೆ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸುಮಾರು 1 ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರನ್ನು ಹೊರಬಿಡಲಾಗಿದ್ದು, ನದಿ ಪಾತ್ರದ ಜನರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ತುಂಗಭದ್ರಾ ಜಲಾಶಯಕ್ಕೆ 96,831 ಕ್ಯೂಸೆಕ್‍ಗೂ ಹೆಚ್ಚು ನೀರು ಹರಿದು ಬರುತ್ತಿದ್ದು, ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಹೀಗಾಗಿ 1 ಲಕ್ಷ ಕ್ಯೂಸೆಕ್ ನೀರನ್ನು ಹೊರ […]

1 month ago

ಕೊನೆಗೂ ಆಣೆ ಪ್ರಮಾಣದ ಮೂಲಕ ಬಗೆಹರಿದ ಕೋಣದ ವಿವಾದ

ದಾವಣಗೆರೆ: ಕಳೆದ ನಾಲ್ಕೈದು ದಿನಗಳಿಂದ ಎರಡು ಗ್ರಾಮಗಳ ನಡುವೆ ಜಗಳಕ್ಕೆ ಕಾರಣವಾಗಿದ್ದ ದೇವರ ಕೋಣದ ವಿಚಾರ ಈಗ ಆಣೆ ಪ್ರಮಾಣದ ಮೂಲಕ ಬಗೆ ಹರಿದಿದ್ದು, ಸ್ವಗ್ರಾಮ ಬೇಲಿಮಲ್ಲೂರುಗೆ ದೇವರ ಕೋಣ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದ ಮಾರಿಕಾಂಬಾ ದೇವಿಯ ಕೋಣ ಕಾಣೆಯಾಗಿತ್ತು. ಅದೇ ಕೋಣ ಶಿವಮೊಗ್ಗದ ಹಾರ್ನಹಳ್ಳಿ ಗ್ರಾಮದಲ್ಲಿ ಕಾಣಿಸಿದ್ದು,...

ಹಳ್ಳಿಯಲ್ಲಿ ವೈದ್ಯರಾಗಲಿರುವ ವಿದ್ಯಾರ್ಥಿಗಳಿಗೆ ಶೇ.10 ಮೀಸಲಾತಿ

2 months ago

ಮುಂಬೈ: ವೈದ್ಯರಾದ ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕಾಯ್ದೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಮಸೂದೆ ಅಂಗೀಕಾರವಾಗಿ ಕಾಯ್ದೆಯಾದ ಬಳಿಕ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ, ದೀರ್ಘಾವಧಿಯ ಆಧಾರದ ಮೇಲೆ...

ಮಲಪ್ರಭೆಯ ಆರ್ಭಟ- ಪ್ರವಾಹ ಭೀತಿಯಲ್ಲಿ ಊರು ಬಿಡ್ತಿರುವ ಜನ

3 months ago

ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ ನದಿ ತೀರದ ಗ್ರಾಮಗಳಿಗೆ ಮತ್ತೆ ನೀರು ನುಗ್ಗುವ ಭೀತಿಯಿಂದ ಗ್ರಾಮಸ್ಥರು ತಾವಾಗಿಯೇ ಊರು ತೊರೆಯುತ್ತಿದ್ದಾರೆ. ಮಲಪ್ರಭಾ ನದಿ ತುಂಬಿ ಹರಿಯುತ್ತಿರುವುದರಿಂದ ರಾಮದುರ್ಗ ತಾಲೂಕಿನ...

ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

4 months ago

ರಾಯಚೂರು: ಮಳೆಯಿಂದ ಜಿಲ್ಲೆಯ ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣನದಿಯ ಅಕ್ಕಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಕಾಡುತ್ತಿದೆ. ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾದ ಕಾರಣ ಕೃಷ್ಣನದಿಗೆ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಸಂಜೆ 4 ಗಂಟೆ ವೇಳೆಗೆ ಒಂದು ಲಕ್ಷ...

ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

5 months ago

ಉಡುಪಿ: ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಂದೂಕು ಹಿಡಿದು ಸದಾ ಗಸ್ತು ತಿರುಗೋದು ಎಎನ್‍ಎಫ್ ಕರ್ತವ್ಯ. ಆ್ಯಂಟಿ ನಕ್ಸಲ್ ಫೋರ್ಸ್ ಸಿಬ್ಬಂದಿ ಕರ್ತವ್ಯಕ್ಕೆ ಹೊರತಾಗಿ ಸಾರ್ವಜನಿಕರು ಮೆಚ್ಚುವ ಕಾರ್ಯ ಮಾಡಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ನಕ್ಸಲ್ ಪೀಡಿತ ಪ್ರದೇಶದ ಜನರ ಆರೋಗ್ಯದ...

ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ಕಿತ್ತಾಟ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ

6 months ago

ಡೆಹ್ರಾಡೂನ್: ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ. ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ...

ಮಂಗನ ಕಾಯಿಲೆಗೆ ಹೆದರಿ ಊರು ತೊರೆಯುತ್ತಿದ್ದಾರೆ ಮಲೆನಾಡಿಗರು!

9 months ago

ಶಿವಮೊಗ್ಗ: ಮರಣ ಮೃದಂಗ ಭಾರಿಸುತ್ತಿರುವ ಮಾರಕ ಮಂಗನ ಕಾಯಿಲೆಗೆ ಮಲೆನಾಡಿಗರು ತತ್ತರಿಸಿ ಹೋಗಿದ್ದಾರೆ. ಅಲ್ಲದೆ ಸರ್ಕಾರ ನೀಡುತ್ತಿರುವ ಔಷಧಿಗಳು ಕೂಡ ಈ ಮಾರಣಾಂತಿಕ ಕಾಯಿಲೆಯನ್ನು ನಿಯಂತ್ರಿಸಲು ಆಗುತ್ತಿಲ್ಲ. ಆದರಿಂದ ಮಂಗನ ಕಾಯಿಲೆಗೆ ಹೆದರಿ ಮಲೆನಾಡಿನ ಕೆಲವು ಭಾಗಗಳಲ್ಲಿ ಜನರು ಊರು ಬಿಡುತ್ತಿದ್ದಾರೆ....