ದಾವಣಗೆರೆ: ಗಣೇಶ ಹಬ್ಬದ ಸಮಯದಲ್ಲಿ ದಾವಣಗೆರೆ ತಹಶೀಲ್ದಾರ್ ಮಸ್ತ್ ಮಸ್ತ್ ಸ್ಟೆಪ್ ಹಾಕಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ದಾವಣಗೆರೆಯ ತುರ್ಚಘಟ್ಟ ಬಳಿ ಇರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ತಹಶೀಲ್ದಾರ್ ಗಿರೀಶ್‍ರವರು ಗಣಪತಿ ಪ್ರತಿಷ್ಟಾಪನೆ ಮಾಡಿದ್ದರು. ಈ ಕೇಂದ್ರದಲ್ಲಿ ಭಿಕ್ಷೇ ಬೇಡುವವರನ್ನು, ಯಾರು ಇಲ್ಲದ ಅನಾಥರು ವಾಸವಾಗಿದ್ದು, ನಿರಾಶ್ರಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮನೋರಂಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟ
ಈ ವೇಳೆ ನಿರಾಶ್ರಿತರೊಂದಿಗೆ ತಹಶೀಲ್ದಾರ್ ಗಿರೀಶ್‍ರವರು ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ನೃತ್ಯ ಮಾಡಿದ್ದಾರೆ. ತಹಶೀಲ್ದಾರ್ ಜೊತೆ ನಿರಾಶ್ರಿತರು, ಸಿಬ್ಬಂದಿಗಳು ಕೂಡ ಕುಣಿದು ಕುಪ್ಪಳಿಸಿದ್ದಾರೆ. ಒಟ್ಟಾರೆ ಗಣಪತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ನಿರಾಶ್ರಿತರು, ಕೊನೆಗೆ ಮೂರು ದಿನಗಳಿಂದ ಪ್ರತಿಷ್ಟಾಪನೆ ಮಾಡಿದ್ದ ಗಣಪತಿಯನ್ನು ವಿಸರ್ಜನೆ ಮಾಡಿದ್ದಾರೆ. ಇದನ್ನೂ ಓದಿ: ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್