ತೈಪೆ: ತೈವಾನ್‌ನಲ್ಲಿ (Taiwan Earthquake) 6.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ತೈವಾನ್‌ನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಸುಮಾರು 80ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದೆ.
Advertisement
ಭಾರತೀಯ ಕಾಲಮಾನದ ಪ್ರಕಾರ, ರಾತ್ರಿ 12 ಗಂಟೆ ಸುಮಾರಿಗೆ ಕೆಲವು ನಿಮಿಷಗಳ ಅಂತರದಲ್ಲಿ ಎರಡು ಪ್ರಬಲ ಭೂಕಂಪನಗಳು ಸಂಭವಿಸಿವೆ. ಆಗ ತೈವಾನ್‌ನಲ್ಲಿ ರಾತ್ರಿ 2:230ರ ಆಸುಪಾಸು. ಹುವಾಲಿಯನ್‌ನ ಪೂರ್ವ ಕೌಂಟಿಯಲ್ಲಿ ಭೂಮಿಯಿಂದ 5.5 ಕಿಲೋಮೀಟರ್‌ಗಳಷ್ಟು ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಇದೆ ಎಂದು ತೈವಾನ್‌ನ ಹವಾಮಾನ ಇಲಾಖೆ ಹೇಳಿದೆ.
Advertisement
Advertisement
ಭೂಕಂಪನದಿಂದಾಗಿ ಹುವಾಲಿಯನ್ ಪ್ರದೇಶದಲ್ಲಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಈ ಪೈಕಿ ಒಂದು ಕಟ್ಟಡ ಕುಸಿದು ಬಿದ್ದಿದ್ದು, ಇನ್ನೊಂದು ರಸ್ತೆಗೆ ವಾಲಿದೆ. ತೈವಾನ್ ಜೊತೆಗೆ ಜಪಾನ್, ಚೀನಾ ಮತ್ತು ಫಿಲಿಪೈನ್ಸ್‌ನಲ್ಲಿಯೂ ಲಘು ಕಂಪನದ ಅನುಭವವಾಗಿದೆ. ಸದ್ಯಕ್ಕೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ
Advertisement
ಈ ಹಿಂದೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿತ್ತು. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿದ್ದವು. 1999 ರಲ್ಲಿ ತೈವಾನ್‌ನಲ್ಲಿ 7.7 ತೀವ್ರತೆಯ ಭೂಕಂಪನದಿಂದ ಸುಮಾರು 2,400 ಮಂದಿ ಸಾವನ್ನಪ್ಪಿದ್ದರು.