ಚಂಡೀಗಢ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್ ಪೊಲೀಸರು ದೆಹಲಿಯಿಂದ ಬಂಧಿಸಿ ಪಂಜಾಬ್‌ಗೆ ಕರೆತರುವಾಗ ಹರಿಯಾಣ ಪೊಲೀಸರು ಪಂಜಾಬ್ ಪೊಲೀಸರನ್ನು ತಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು, ದೆಹಲಿ ಪೊಲೀಸರಿಗೆ ಮಾತ್ರ ತಜೀಂದರ್ ಸಿಂಗ್‍ರನ್ನು ಹಸ್ತಾಂತರಿಸುತ್ತೇವೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಯಾಣ ಪೊಲೀಸರು ಯಾವುದೇ ಅಡೆತಡೆಗಳನ್ನು ಸೃಷ್ಟಿಸುವುದಿಲ್ಲ. ಬಿಜೆಪಿ ನಾಯಕನನ್ನು ಅಪಹರಿಸಲಾಗಿದೆ ಎಂಬ ಮಾಹಿತಿ ದೆಹಲಿ ಪೊಲೀಸರಿಂದ ಬಂದಿದೆ. ಇದರಿಂದಾಗಿ ಕ್ರಮ ಕೈಗೊಂಡಿದ್ದೇವೆ. ಹಾಗೂ ದೆಹಲಿ ಪೊಲೀಸರಿಗೆ ಮಾತ್ರ ತಜೀಂದರ್ ಸಿಂಗ್‍ರನ್ನು ಹಸ್ತಾಂತರಿಸುತ್ತೇವೆ ಎಂದರು.
Advertisement
Advertisement
ತಜೀಂದರ್ ಪಾಲ್ ಸಿಂಗ್ ಅವರ ಅಪಹರಣದ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿ ಸಿಕ್ಕಿದೆ. ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಡಿಯಾಗಿ ವರ್ತಿಸುತ್ತಿಲ್ಲ. ಅಪಹರಣ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ ಠಾಣೆಗೆ ಅವರನ್ನು ಹಾಜರು ಪಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ವಿದೇಶಾಂಗ ಸಚಿವನ ವಿವಾದಿತ ಹೇಳಿಕೆ – ಇಸ್ರೇಲ್ ಪ್ರಧಾನಿಗೆ ಪುಟಿನ್ ಕ್ಷಮೆ
Advertisement
Advertisement
ತಜೀಂದರ್ ಬಗ್ಗಾ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ದೆಹಲಿ ಪೊಲೀಸರು ಪಂಜಾಬ್ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಎಫ್‍ಐಆರ್‌ಗೆ ಪ್ರತಿಕ್ರಿಯೆಯಾಗಿ ಪಂಜಾಬ್ ಪೊಲೀಸರು ಹರಿಯಾಣ ಡಿಜಿಪಿಗೆ ಪತ್ರ ಬರೆದಿದ್ದಾರೆ. ಇದರಲ್ಲಿ ಬಗ್ಗಾ ಅವರ ಬಂಧನವು ಅಪಹರಣದ ಪ್ರಕರಣವಲ್ಲ ಮತ್ತು ಹರಿಯಾಣ ಪೊಲೀಸರು ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್
ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಂಜಾಬ್‍ನ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು. ದೆಹಲಿ ಮುಖ್ಯಮಂತ್ರಿ ಅವರಿಗೆ ಜೀವ ಬೆದರಿಕೆ ಹಾಕದ್ದ ಹಿನ್ನೆಲೆಯಲ್ಲಿ ಆಪ್ ನಾಯಕ ಸನ್ನಿಸಿಂಗ್ ಅವರು ತಜೀಂದರ್ ಪಾಲ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವದಂತಿಗಳನ್ನು ಹರಡುತ್ತಿದ್ದಾರೆ. ಧಾರ್ಮಿಕ ಮತ್ತು ಕೋಮು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಿಸಿ ಸೈಬರ್ ಸೆಲ್‍ನಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯನ್ನು ಬಂಧಿಸಿದ್ದರು.