ಬೆಳಗಾವಿ: ಬೀದಿ ನಾಯಿಗಳಿಗೆ (Stray Dog) ತೊಂದರೆ ಕೊಡುವುದಲ್ಲದೇ ಅವುಗಳಿಗೆ ಉಚಿತವಾಗಿ ಆಹಾರ ಕೊಡುತ್ತಿರುವ ಕುಟುಂಬದವರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿರುವುದಾಗಿ ಬೆಳಗಾವಿ ಪೊಲೀಸರಿಗೆ ದೂರು ನೀಡಿದರೂ, ಕ್ರಮಕೈಗೊಳ್ಳದ ಹಿನ್ನೆಲೆ ಸಂತ್ರಸ್ತರು ಪ್ರಧಾನಿಗೆ (Prim Minister) ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
Advertisement
ಬೆಳಗಾವಿಯ (Belgavi) ಖಾಸಭಾಗನ ಮಾರುತಿ ಗಲ್ಲಿಯ ನಿವಾಸಿ ಅನಿತಾ ದೊಡ್ಡಮನಿ ಕುಟುಂಬಸ್ಥರ ಮೇಲೆ ವಕೀಲ ವಿನಾಯಕ್ ವಲೇಪೂರಕರ ಎಂಬುವವರು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ
Advertisement
Advertisement
ಪ್ರಕರಣ ಹಿನ್ನೆಲೆ: ಅನಿತಾ ದೊಡ್ಡಮನಿ ಕುಟುಂಬಸ್ಥರು ಕಳೆದ ಹಲವಾರು ವರ್ಷಗಳಿಂದ ಬೆಳಗಾವಿ ಅನಿಮಲ್ ವೇಲ್ಫೇರ್ ಅಸೋಸಿಯೇಷನ್ (ಎನ್‌ಜಿಓ) ತೆಗೆದುಕೊಂಡು ಸರ್ಕಾರದ ಅನುಮತಿ ಪಡೆದು ನಗರದಲ್ಲಿರುವ ಬೀದಿ ನಾಯಿಗಳಿಗೆ ಉಚಿತವಾಗಿ ಊಟ ಹಾಕುತ್ತಿದ್ದಾರೆ. ಆದರೆ, ಬೀದಿ ನಾಯಿಗಳಿಗೆ ಊಟ ನೀಡದಂತೆ ಅನಿತಾ ಕುಟುಂಬಸ್ಥರಿಗೆ ವಕೀಲ ವಿನಾಯಕ್ ದಬ್ಬಾಳಿಕೆ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಕಳೆದ ಒಂಭತ್ತು ತಿಂಗಳ ಹಿಂದೆಯೇ ಶಾಹಾಪುರ ಪೊಲೀಸ್ ಠಾಣೆಯಲ್ಲಿ ಅನಿತಾ ಅವರು ದೂರು ದಾಖಲಿಸಿದ್ದಾರೆ.
Advertisement
ಆದರೆ ನಾಯಿಗಳಿಗೆ ತೊಂದರೆ ಹಾಗೂ ನಮಗೆ ಮಾನಸಿಕ ಹಿಂಸೆ ನೀಡುತ್ತಿದ್ದರೂ ಪೊಲೀಸರು ಸೂಕ್ತಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಹೀಗಾಗಿ ನಾವು ಬೀದಿ ನಾಯಿಗಳಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ಪ್ರಧಾನಮಂತ್ರಿವರೆಗೂ ದೂರು ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ನಾಯಿಗಳಿಗೆ ಹಾಗೂ ನಮಗೆ ಕಿರುಕುಳ ನೀಡುತ್ತಿರುವ ವಿನಾಯಕ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ ಚುನಾವಣೆ – `ಕೈ’ ನಾಯಕರ ಪಟ್ಟಿ ರಿಲೀಸ್