ಕಾನೂನಿನ ಮುಂದೆ ಎಲ್ಲರೂ ಒಂದೇ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಎಂತಹ ಗಣ್ಯ ವ್ಯಕ್ತಿಗಳೇ ಆಗಿರಲಿ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರೆ ಕ್ರಮ ತಗೆದುಕೊಳ್ಳಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಇಂತಹ ಪ್ರಕರಣವನ್ನು ಅರಣ್ಯ ಸಚಿವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Advertisement
ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಈ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆಯೇ ನಟರಾದ ಜಗ್ಗೇಶ್ (Jaggesh), ದರ್ಶನ್ (Darshan), ನಿಖಿಲ್ ಕುಮಾರ ಸ್ವಾಮಿ, ವಿನಯ್ ಗುರೂಜಿ ಸೇರಿದಂತೆ ಹಲವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದವು. ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡು ನೋಟಿಸ್ ನೀಡಲು ಮುಂದಾದರು. ಇದೀಗ ಬಹುತೇಕ ಎಲ್ಲರಿಗೂ ನೋಟಿಸ್ ಜಾರಿ ಮಾಡಲಾಗಿದೆ.
Advertisement
Advertisement
ಕಾಫಿನಾಡಿನಲ್ಲಿ ಅರ್ಚಕರ ಬಂಧನ
Advertisement
ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.
Web Stories