ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

Public TV
2 Min Read
Sanju Weds Geetha 2 Rachita Ram Srinagara Kitty 2

ಟಿ ರಚಿತಾ ರಾಮ್ (Rachita Ram) ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ (Film Chamber) ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಒತ್ತಾಯಿಸಿದ್ದಾರೆ.

ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

Sanju Weds Geetha 2 Rachita Ram Srinagara Kitty 1

ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.

ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್‌ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ರು. ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.

Share This Article