ಮಡಿಕೇರಿ: ಕೊಡಗಿನ (Kodagu) ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ (Cauvery) ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರುಶನ ನೀಡಿದಳು. ಸಂಜೆ 5 ಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿತು.
Advertisement
ಮತ್ತೊಂದೆಡೆ ಕಾವೇರಿ ತೀರ್ಥೋದ್ಭವವನ್ನು (Theerthodbhava) ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿಮೀ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ ತಲಕಾವೇರಿ (Talacauvery) ತಲುಪಿದರು. ಕೊಡಗು ಅಷ್ಟೇ ಅಲ್ಲದೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು (Devotees) ತಲಕಾವೇರಿಗೆ ಆಗಮಿಸಿದ್ದರು. ಇದನ್ನೂ ಓದಿ: AICC ಅಧ್ಯಕ್ಷೀಯ ಚುನಾವಣೆಯಲ್ಲಿ 96ರಷ್ಟು ಮತದಾನ- ಕನ್ನಡಿಗ ಖರ್ಗೆ ಪಟ್ಟಕ್ಕೇರೋದು ಫಿಕ್ಸ್
Advertisement
Advertisement
ತೀರ್ಥೋದ್ಭವದ ಸಮಯ ಹತ್ತಿರವಾದಂತೆ ಭಕ್ತರ ಹರ್ಷೋದ್ಘಾರ ಹೆಚ್ಚುತ್ತಲೇ ಇತ್ತು. ಉಕ್ಕಿ ಬಾ ತಾಯೆ ಎಂದು ಕಾವೇರಿ ಮಾತೆಯನ್ನು ನೆನೆಯುತ್ತಾ ಭಜಿಸುತ್ತಿದ್ದರು. ನಿಗದಿತ ಸಮಯದಂತೆ ಕಾವೇರಿ ಮಾತೆ ಮೇಷ ಲಗ್ನದಲ್ಲಿ ಸಂಜೆ 7 ಗಂಟೆ 22 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ತೀರ್ಥೋದ್ಭವಾಗುತ್ತಿದ್ದಂತೆ ತೀರ್ಥರೂಪಿಣಿಯಾದ ಕಾವೇರಿ ಮಾತೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸ್ಥಳದಲ್ಲಿದ್ದ ಅರ್ಚಕರು ಭಕ್ತರಿಗೆ ಕಾವೇರಿ ತೀರ್ಥವನ್ನು ಪ್ರೋಕ್ಷಣೆ ಮಾಡಿದರು. ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ಭಕ್ತಿಭಾವ ಮೆರೆದು ಪುನೀತರಾದರು.
Advertisement
ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಉಸ್ತುವಾರಿ ಸಚಿವ ಬಿಸಿ ನಾಗೇಶ್, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು ಕಾವೇರಿ ತೀರ್ಥೋದ್ಭವದಲ್ಲಿ ಭಾಗವಹಿಸಿದರು. ತೀರ್ಥ ಕುಂಡಿಕೆಯ ಬಳಿ ನಿಂತು ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವ ಬಿಸಿ ನಾಗೇಶ್, ಕಾವೇರಿ ಮಾತೆ ಕೊಡಗು ಕರ್ನಾಟಕಕ್ಕೆ ಅಷ್ಟೇ ಅಲ್ಲ. ತಮಿಳುನಾಡಿಗೂ ಅನ್ನ ನೀರು ಒದಗಿಸುತ್ತಿದ್ದಾಳೆ. ಇದನ್ನೂ ಓದಿ: Rx ಬದಲಿಗೆ ಪ್ರಿಸ್ಕ್ರಿಪ್ಷನ್‍ನಲ್ಲಿ ‘ಶ್ರೀ ಹರಿ’ ಅಂತ ಹಿಂದಿಯಲ್ಲಿ ಬರೆದ ವೈದ್ಯ
ನಮ್ಮ ರಾಜ್ಯ ಮಾತ್ರವಲ್ಲದೆ ಪಕ್ಕದ ರಾಜ್ಯದ ಕೇರಳ ಹಾಗೂ ತಮಿಳುನಾಡಿಗೂ ನೀರು ಹರಿಸುತ್ತಾಳೆ. ಹತ್ತಿರದಿಂದ ಈ ಬಾರೀ ಕಾವೇರಿಯ ತೀರ್ಥೋದ್ಬವ ನೋಡಿ ಖುಷಿಯಾಗಿದೆ. ಕಳೆದ ಹಲವು ವರ್ಷಗಳ ಮಳೆಯಿಂದ ಸಾಕಷ್ಟು ಅನಾಹುತ ಅಗಿತ್ತು. ಆದರೆ ಈ ಬಾರಿ ಶಾಂತ ರೀತಿಯಲ್ಲಿ ಮಳೆ ಕಡಿಮೆ ಅಗಿರುವುದರಿಂದ ಕೊಡಗಿನಲ್ಲಿ ಯಾವುದೇ ಅನಾಹುತ ಇಲ್ಲದೇ ಮಳೆಗಾಲ ಕಳೆದಿದೆ. ಇನ್ನೂ ಮುಂದೆಯು ಇದೇ ರೀತಿ ಶಾಂತ ರೀತಿಯಲ್ಲಿ ಇರಲಿ ಎಂದು ಮಾತೆ ಕಾವೇರಿಯಲ್ಲಿ ಬೇಡಿಕೊಂಡಿರುವುದಾಗಿ ತಿಳಿಸಿದರು.
ಭಕ್ತರ ಹರ್ಷಕ್ಕೆ ಪಾರವೇ ಇರಲಿಲ್ಲ. ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ತೀರ್ಥೋದ್ಭವದಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶ ಇರಲಿಲ್ಲ. ಈ ಬಾರಿ ಜಿಲ್ಲಾಡಳಿತ ಕಾವೇರಿ ಕುಡಿಕೆ ಬಳಿ ಇರುವ ಕಲ್ಯಾಣಿಯಲ್ಲಿ ಸ್ನಾನ ಮಾಡುವುದಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು.