ಕಾಬೂಲ್: ಮಹಿಳಾ ಶಿಕ್ಷಣಕ್ಕೆ (Women’s Education) ನಿಷೇಧ ಹೇರಿರುವ ತಾಲಿಬಾನ್ (Taliban) ಸರ್ಕಾರ ಇದೀಗ ಅಘ್ಘಾನಿಸ್ತಾನದಲ್ಲಿ (Afghanistan) ವಿಶ್ವವಿದ್ಯಾಲಯದ (University) ಪ್ರವೇಶ ಪರೀಕ್ಷೆಗೆ (Entrance Exam) ವಿದ್ಯಾರ್ಥಿನಿಯರು (Female Students) ಹಾಜರಾಗದಂತೆ ಸೂಚಿಸಿದೆ.
Advertisement
ಫೆಬ್ರವರಿ ತಿಂಗಳಲ್ಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಈ ನಡುವೆ ಇದೀಗ ವಿದ್ಯಾರ್ಥಿನಿಯರು ಯುನಿವರ್ಸಿಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ತಾಲಿಬಾನ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಪ್ರಬಲ ಭೂಕಂಪ – 7 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ
Advertisement
Advertisement
ತಾಲಿಬಾನ್ ಶಿಕ್ಷಣ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ಸರ್ಕಾರ ಆದೇಶ ಹೊರಡಿಸುವವರೆಗೆ ಮಹಿಳಾ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಪತ್ನಿ ಕೊಲೆ – ಆರೋಪಿ ಪತಿಯಿಂದ ರೋಚಕ ರಹಸ್ಯ ಬಯಲು
Advertisement
ಡಿಸೆಂಬರ್‌ನಲ್ಲಿ ತಾಲಿಬಾನ್ ಸರ್ಕಾರ ಮುಂದಿನ ಸೂಚನೆ ಬರುವವರೆಗೆ ಎಲ್ಲಾ ಮಹಿಳೆಯರಿಗೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಹಾಜರಾಗುವುದನ್ನು ನಿಷೇಧಿಸಿತ್ತು. ಅಫ್ಘಾನಿಸ್ತಾನದಲ್ಲಿ 6ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿನಿಯರ ಮೇಲೆ ಸಂಪೂರ್ಣ ನಿಷೇಧಕ್ಕೆ ತಾಲಿಬಾನ್ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನೆಗಳು ನಡೆದಿತ್ತು. ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದರು.
Taliban sent a letter to universities that ban on the registration of girls in university entrance exam.#StandwithAfghanwonem #BanTaliban #freeafghanistan pic.twitter.com/NkXxISVvhK
— Khadija Totakhil???????? (@khadijakhanota1) January 28, 2023
ತಾಲಿಬಾನ್‍ನ ಉನ್ನತ ಶಿಕ್ಷಣ ಸಚಿವಾಲಯ ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲೆ ಇತ್ತೀಚೆಗೆ ದಬ್ಬಾಳಿಕೆಯನ್ನು ಹೆಚ್ಚಿಸುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ನಿಷೇಧವನ್ನು ಹೇರಿದೆ. ಇದು ಅಂತಾರಾಷ್ಟ್ರೀಯವಾಗಿ ಭಾರೀ ಟೀಕೆಗೆ ಕಾರಣವಾಗಿದೆ. 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ಕ್ರಮಗಳನ್ನು ವ್ಯಾಪಕವಾಗಿ ಜಾರಿಗೆ ತಂದಿದೆ. ಪ್ರಾರಂಭದಲ್ಲಿ ಮಧ್ಯಮ ಹಾಗೂ ಪ್ರೌಢಶಾಲೆಯಿಂದ ಹುಡುಗಿಯರನ್ನು ನಿಷೇಧಿಸಲಾಗಿತ್ತು. ಬಳಿಕ ಉದ್ಯೋಗದಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k