ಕಾಬೂಲ್: ಅಫ್ಘಾನಿಸ್ತಾನದ (Afghanistan) ಹೆರಾತ್ (Herat) ಪ್ರಾಂತ್ಯದಲ್ಲಿ ಉದ್ಯಾನವನಗಳು (Gardens) ಹಾಗೂ ರೆಸ್ಟೊರೆಂಟ್‌ಗಳಿಗೆ (Restaurant) ಕುಟುಂಬ (Family) ಹಾಗೂ ಮಹಿಳೆಯರು (Women) ಹೋಗುವುದನ್ನು ತಾಲಿಬಾನ್ (Taliban) ನಿಷೇಧಿಸಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಮುಖ್ಯವಾಗಿ ಮಹಿಳೆಯರ ಮೇಲೆ ಹಿಡಿತ ಸಾಧಿಸುವುದನ್ನು ಮುಂದುವರಿಸುತ್ತಲೇ ಇದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಿದ ತಾಲಿಬಾನ್ ಇದೀಗ ಕುಟುಂಬದೊಂದಿಗೂ ಉದ್ಯಾನವನ ಹಾಗೂ ರೆಸ್ಟೊರೆಂಟ್‌ಗಳಿಗೆ ಹೋಗುವುದನ್ನು ನಿಷೇಧಿಸಿದೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರದೇಶದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಈಗ ಪುರುಷರು ಫ್ಯಾಮಿಲಿ ರೆಸ್ಟೊರೆಂಟ್‌ಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಊಟ ಮಾಡುವಂತಿಲ್ಲ. ಮಾತ್ರವಲ್ಲದೇ ಪುರುಷರು ಹಾಗೂ ಮಹಿಳೆಯರು ಒಟ್ಟಿಗೆ ಉದ್ಯಾನವನಕ್ಕೂ ಹೋಗುವಂತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಮುಸ್ಲಿಮರು ಭಾರತದಲ್ಲಿ ಚೆನ್ನಾಗೇ ಇದ್ದಾರೆ: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಸೀತಾರಾಮನ್ ಕಿಡಿ
ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರು ಹಿಜಬ್ ಅನ್ನು ಸರಿಯಾಗಿ ಧರಿಸದ ಕಾರಣ ಹಾಗೂ ಇಂತಹ ಪ್ರದೇಶಗಳಲ್ಲಿ ಲಿಂಗ ಮಿಶ್ರಣದ ಕಾರಣದಿಂದಾಗಿ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೆಸ್ಟೊರೆಂಟ್‌ಗಳಲ್ಲಿ ಊಟಕ್ಕೆ ನಿಷೇಧ ಹೆರಾತ್ ಪ್ರದೇಶದಲ್ಲಿ ಮಾತ್ರವೇ ಅನ್ವಯಿಸುತ್ತದೆ. ಇಂತಹ ಆವರಣಗಳು ಪರುಷರಿಗೆ ತೆರೆದಿರುತ್ತದೆ ಎಂದು ವರದಿಗಳು ತಿಳಿಸಿವೆ.
ಈ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಪುರುಷರು ಹಾಗೂ ಮಹಿಳೆಯರು ವಿವಿಧ ದಿನಗಳಲ್ಲಿ ಉದ್ಯಾನವನಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿತ್ತು. ಇದರ ಪ್ರಕಾರ ಗುರುವಾರ, ಶುಕ್ರವಾರ ಮತ್ತು ಶನಿವಾರ ಉದ್ಯಾನವನಗಳಲ್ಲಿ ಮಹಿಳೆಯರಿಗೆ ಹೋಗಲು ಅವಕಾಶವಿದ್ದು, ಭಾನುವಾರ, ಸೋಮವಾರ, ಮಂಗಳವಾರ ಹಾಗೂ ಬುಧವಾರ ಪುರುಷರಿಗೆ ಮಾತ್ರವೇ ತೆರೆಯಲಾಗುತ್ತದೆ ಎಂದು ತಿಳಿಸಲಾಗಿತ್ತು. ಇದನ್ನೂ ಓದಿ: ಉದ್ಯೋಗಿಯಿಂದಲೇ ಬ್ಯಾಂಕ್‌ನಲ್ಲಿ ಗುಂಡಿನ ದಾಳಿ – 5 ಮಂದಿ ಸಾವು, 9 ಮಂದಿಗೆ ಗಾಯ