InternationalLatestMain Post

ಬುರ್ಖಾ ಹಾಕಿಲ್ಲ ಅಂತ ಅಫ್ಘನ್ ವಿವಿ ಹೊರಗಡೆ ವಿದ್ಯಾರ್ಥಿನಿಯರ ಮೇಲೆ ತಾಲಿಬಾನ್ ದಾಳಿ

ಕಾಬೂಲ್: ವಿದ್ಯಾರ್ಥಿನಿಯರು (Students) ಬುರ್ಖಾ (Burkha) ಧರಿಸಿಲ್ಲ ಅಂತ ಅಫ್ಘಾನಿಸ್ತಾನದ (Afghanistan) ವಿಶ್ವವಿದ್ಯಾಲಯಕ್ಕೆ (University) ಪ್ರವೇಶ ನೀಡದ ತಾಲಿಬಾನ್ (Taliban) ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಈ ವೇಳೆ ತಾಲಿಬಾನ್ ಅಧಿಕಾರಿಯೊಬ್ಬರು ವಿದ್ಯಾರ್ಥಿನಿಯರಿಗೆ ಥಳಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ವರದಿಗಳ ಪ್ರಕಾರ ಈ ಘಟನೆ ಈಶಾನ್ಯ ಅಫ್ಘಾನಿಸ್ತಾನದ ಬಡಾಕ್ಷನ್ ವಿಶ್ವವಿದ್ಯಾಲಯದ ಗೇಟ್ ಹೊರಗಡೆ ಭಾನುವಾರ ನಡೆದಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಹಲವು ವಿದ್ಯಾರ್ಥಿನಿಯರು ವಿವಿ ಪ್ರವೇಶಕ್ಕಾಗಿ ಗೇಟ್ ಹೊರಗಡೆ ಕಾದು ನಿಂತಿದ್ದಾರೆ. ಈ ವೇಳೆ ತಾಲಿಬಾನ್‌ನ ಸರ್ಕಾರಿ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳನ್ನು ಸ್ಥಳದಿಂದ ಚದುರಿಸಲು ಚಾಟಿ ಬೀಸಿರುವುದು ಕಂಡುಬಂದಿದೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ!

ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಮಹಿಳೆಯರ ಚಲನೆ, ವಾಕ್, ಅಭಿವ್ಯಕ್ತಿ, ಕೆಲಸದ ಅವಕಾಶಗಳು ಹಾಗೂ ಉಡುಪಿನ ಸ್ವಾತಂತ್ರ‍್ಯದ ಮೇಲೆ ತೀವ್ರ ನಿರ್ಬಂಧಗಳನ್ನು ಹಾಕಿದೆ. 6ನೇ ತರಗತಿಯಿಂದ ಹುಡುಗಿಯರು ಶಾಲೆಗೆ ಹೋಗುವುದನ್ನು ತಡೆಹಿಡಿಯಲಾಗಿದೆ. ಇದನ್ನೂ ಓದಿ: ವೈಫೈ ಪಾಸ್‍ವರ್ಡ್ ಹಂಚಿಕೊಳ್ಳದ್ದಕ್ಕೆ ನಡೆಯಿತು ಯುವಕನ ಭೀಕರ ಕೊಲೆ

ತಾಲಿಬಾನ್ ಮಹಿಳೆಯರಿಗೆ ಸಾರ್ವಜನಿಕವಾಗಿ ಸರಿಯಾದ ಉಡುಪುಗಳನ್ನು ಧರಿಸಲು ಸೂಚಿಸಿದೆ. ನಿಖಾಬ್ (ಕಣ್ಣು ಹೊರತುಪಡಿಸಿ, ತಲೆ ಮತ್ತು ಮುಖವನ್ನು ಮುಚ್ಚುವ ಮುಸುಕು) ಅಥವಾ ಬುರ್ಖಾವನ್ನು ಮಹಿಳೆಯರು ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಧರಿಸಬೇಕಿದೆ. ಆದರೆ ಈ ಆದೇಶದ ವಿರುದ್ಧ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.

Live Tv

Leave a Reply

Your email address will not be published. Required fields are marked *

Back to top button