ತಾಲಿಬಾನಿಗಳ ಮುಂದಿನ ಪ್ರಧಾನಿ ಅಫ್ರಿದಿ – ನೆಟ್ಟಿಗರಿಂದ ಫುಲ್ ಟ್ರೋಲ್

Public TV
2 Min Read
SHAHID AFRIDI

ಇಸ್ಲಾಮಾಬಾದ್: ಉಗ್ರರ ಆಡಳಿತವನ್ನು ನೋಡಿ ಜನರು ಅಫ್ಘಾನಿಸ್ತಾನ ತೊರೆಯುತ್ತಿದ್ದರೆ ಇತ್ತ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ತಾಲಿಬಾನ್ ಪರ ಹೇಳಿಕೆ ನೀಡಿ ಈಗ ಫುಲ್ ಟ್ರೋಲ್ ಆಗುತ್ತಿದ್ದಾರೆ.

ಶಾಹಿದ್ ಅಫ್ರಿದಿ ಅವರು, ತಾಲಿಬಾನಿಗಳು ಅತ್ಯಂತ ಧನಾತ್ಮಕ ಮನಸ್ಸಿನಿಂದ ಬಂದಿದ್ದಾರೆ ಎಂದು ಹೇಳಿ ಉಗ್ರರನ್ನು ಹೊಗಳಿದ್ದಾರೆ.

ಪಾಕಿಸ್ತಾನದ ಪತ್ರಕರ್ತೆ ನೈಲಾ ಇನಾಯತ್ ಅವರು ಶಾಹಿದ್ ಅಫ್ರಿದಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಾಲಿಬಾನಿಗಳು ಧನಾತ್ಮಕ ಮನಸ್ಸಿನಿಂದ ಬಂದಿದ್ದಾರೆ. ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಅಫ್ರಿದಿ ಹೇಳಿದ್ದಾರೆ. ಇದನ್ನೂ ಓದಿ : ಇನ್ಮೇಲಿಂದ ಅಫ್ರಿದಿಗೂ ನನಗೂ ಸಂಬಂಧವಿಲ್ಲ, ಅವನು ಮಿತಿ ಮೀರಿದ್ದಾನೆ: ಭಜ್ಜಿ ಗರಂ 

ಅಫ್ರಿದಿ ತಾಲಿಬಾನಿಗಳ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಜನ ಈಗ ಟೀಕಿಸಿ ವ್ಯಂಗ್ಯವಾಡುತ್ತಿದ್ದಾರೆ. “ತಾಲಿಬಾನಿಗಳ ಮುಂದಿನ ಪ್ರಧಾನಿ ಅಫ್ರಿದಿ”, “ಪಾಕಿಸ್ತಾನ ಉಗ್ರರ ಸ್ವರ್ಗ ಎನ್ನುವುದಕ್ಕೆ ಇಲ್ಲಿದೆ ಉತ್ತಮ ಉದಾಹರಣೆ” ಎಂದು ಜನ ಸಾಮಾಜಿಕ ಜಾಲತಾಣದಲ್ಲಿ ಬರೆದು ಟ್ರೋಲ್ ಮಾಡುತ್ತಿದ್ದಾರೆ.

ಭಾರತದ ಬಗ್ಗೆ ಕಟುವಾಗಿ ಟೀಕೆ ಮಾಡುವ ಮನಸ್ಥಿತಿ ಹೊಂದಿರುವ ಅಫ್ರಿದಿ ಈ ಹಿಂದೆ ನಾನು ಟಿವಿಯನ್ನು ಒಡೆದು ಹಾಕಿದ್ದೆ ಎಂದು ಹೇಳಿದ್ದರು. ಇದನ್ನೂ ಓದಿ : ನನ್ನ ವೃತ್ತಿಜೀವನ ಹಾಳು ಮಾಡಿದ್ದೇ ಅಫ್ರಿದಿ- ದಾನಿಶ್ ಕನೇರಿಯಾ

ಶಾಹಿದ್ ಅಫ್ರಿದಿ ಈ ಕುರಿತು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಹಳೆಯ ವಿಡಿಯೋ ಹಿಂದೆ ವೈರಲ್ ಆಗಿತ್ತು. ಟಿವಿ ವಾಹಿನಿಯ ನಿರೂಪಕಿ ಸಂದರ್ಶನವೊಂದರಲ್ಲಿ ನೀವು ಎಷ್ಟು ಬಾರಿ ಟಿವಿ ಒಡೆದಿದ್ದೀರಿ ಎಂದು ಪ್ರಶ್ನಿಸಿದ್ದರು. ಇದಕ್ಕೆ ಅಫ್ರಿದಿ, ನಾನು ಒಂದು ಬಾರಿ ಟಿವಿಯನ್ನು ಒಡೆದಿದ್ದೇನೆ ಎಂದು ಉತ್ತರಿಸಿದ್ದರು.

https://twitter.com/RigidDemocracy/status/1210984337614635009?

ನನ್ನ ಪತ್ನಿಯ ಕಾರಣದಿಂದಾಗಿ ಒಂದು ಬಾರಿ ಟಿವಿ ಒಡೆದಿದ್ದೇನೆ. ಭಾರತೀಯ ವಾಹಿನಿಯೊಂದರ ಡ್ರಾಮಾ ಶೋ ತುಂಬಾ ಜನಪ್ರಿಯವಾಗಿತ್ತು. ಈ ಶೋವನ್ನು ನನ್ನ ಪತ್ನಿ ನೋಡುತ್ತಿದ್ದಳು, ಆಗ ನೀನೊಬ್ಬಳೆ ನೋಡು ಮಕ್ಕಳು ಇದನ್ನು ನೋಡಲು ಬಿಡಬೇಡ ಎಂದು ಹೇಳಿದ್ದೆ. ಒಂದು ಬಾರಿ ನಾನು ರೂಮಿನಿಂದ ಹೊರಗಡೆ ಬಂದಾಗ ನನ್ನ ಮಕ್ಕಳಲ್ಲಿ ಒಬ್ಬಳು ಟಿವಿ ಶೋ ನೋಡಿಕೊಂಡು ಆರತಿ ಮಾಡುವುದನ್ನು ಅನುಕರಣೆ ಮಾಡುತ್ತಿದ್ದಳು. ಇದನ್ನು ಕಂಡ ತಕ್ಷಣ ಕೋಪ ಬಂತು ಹೀಗಾಗಿ ಟಿವಿಯನ್ನೇ ಒಡೆದು ಹಾಕಿದ್ದೆ ಎಂದು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *