ಕಾಬೂಲ್: ತಿನ್ನಲಾಗದ ಕಳಪೆ ಗುಣಮಟ್ಟದ ಗೋಧಿಯನ್ನು ನೀಡಿದ ಪಾಕಿಸ್ತಾನದ ವಿರುದ್ಧ ತಾಲಿಬಾನ್ ಅಧಿಕಾರಿಯೊಬ್ಬರು ಕಿಡಿಕಾರಿದ್ದಾರೆ.
ಕಳಪೆ ಗುಣಮಟ್ಟದ ಗೋಧಿಯನ್ನು ಪಾಕಿಸ್ತಾನ ನೀಡಿದೆ. ಇದು ಸೇವಿಸಲು ಯೋಗ್ಯವಾಗಿಲ್ಲ. ಆದರೆ ಭಾರತೀಯ ಸರ್ಕಾರ ಕಳುಹಿಸಿದ 50,000 ಮೆಟ್ರಿಕ್ ಟನ್ ಗೋಧಿ ತುಂಬ ಚೆನ್ನಾಗಿದೆ ಎಂದು ಬರೆದು, ಗೋಧಿಯ ಗುಣಮಟ್ಟದ ಬಗ್ಗೆ ದೂರು ನೀಡುತ್ತಿರುವ ವೀಡಿಯೋವನ್ನು ಟ್ವೀಟ್ ಮಾಡಲಾಗಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು
Advertisement
Advertisement
ಉತ್ತಮ ಗುಣಮಟ್ಟದ ಗೋಧಿ ಕಳುಹಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಲಾಗಿದೆ. ಆಫ್ಘಾನ್ ಜನರಿಗೆ ನಿರಂತರ ಬೆಂಬಲ ನೀಡುತ್ತಿರುವುದಕ್ಕಾಗಿ ಭಾರತಕ್ಕೆ ಧನ್ಯವಾದಗಳು. ನಮ್ಮ ಸಾರ್ವಜನಿಕ ಮತ್ತು ಸಾರ್ವಜನಿಕ ಸ್ನೇಹಿ ಸಂಬಂಧ ಶಾಶ್ವತವಾಗಿರುತ್ತದೆ. `ಜೈ ಹಿಂದ್’ ಎಂದು ಹಮ್ದುಲ್ಲಾ ಅರ್ಬಾಬ್ ಟ್ವೀಟ್ ಮಾಡಿದ್ದಾರೆ. ವೈರಲ್ ವೀಡಿಯೋ ಪಾಕಿಸ್ತಾನದ ಪರವಾದ ಆಫ್ಘಾನ್ ಸರ್ಕಾರವನ್ನು ಕೆರಳಿಸಿದೆ. ಈ ಹೇಳಿಕೆ ನೀಡಿದ ತಾಲಿಬಾನ್ ಅಧಿಕಾರಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
Advertisement
#Afghanistan : #Taliban officials allege that wheat sent by @ImranKhanPTI #Pakistan Govt is rotten not fit for consumption while @narendramodi’s Indian Govt’s 50,000 MT of wheat is very good.pic.twitter.com/5NSnQBVEKo
— Arun (@arunpudur) March 4, 2022
Advertisement
ಕಳೆದ ತಿಂಗಳು, ಭಾರತವು ಆಫ್ಘಾನ್ ಜನರ ಸಹಾಯಕ್ಕಾಗಿ ಗೋಧಿಯನ್ನು ರವಾನಿಸಿತ್ತು. 2000 ಮೆಟ್ರಿಕ್ ಟನ್ ಗೋಧಿಯನ್ನು ಹೊತ್ತ ವಾಹನಗಳು ಅಮೃತಸರದ ಅಟ್ಟಾರಿಯಿಂದ ಜಲಾಲಾಬಾದ್, ಅಫ್ಘಾನಿಸ್ತಾನಕ್ಕೆ ಹೊರಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು
ಭಾರತವು ಅಫ್ಘಾನಿಸ್ತಾನದ ಜನರೊಂದಿಗೆ ತನ್ನ ವಿಶೇಷ ಸಂಬಂಧಕ್ಕೆ ಬದ್ಧವಾಗಿದೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ಭಾರತವು 50,000 ಮೆಟ್ರಿಕ್ ಟನ್ ಗೋಧಿಯನ್ನು ಪಾಕಿಸ್ತಾನದ ಮೂಲಕ ಅಫ್ಘಾನಿಸ್ತಾನಕ್ಕೆ ಕಳುಹಿಸುವುದಾಗಿ ಘೋಷಿಸಿತ್ತು.