InternationalLatestLeading NewsMain Post

ಕೊಲೆ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ತಾಲಿಬಾನ್‌

ಕಾಬುಲ್: ಪಶ್ಚಿಮ ಅಫ್ಘಾನಿಸ್ತಾನದಲ್ಲಿ (Afghanistan) ಕೊಲೆ ಆರೋಪಿಯನ್ನು ತಾಲಿಬಾನ್‌ ಸಾರ್ವಜನಿಕವಾಗಿ ಗಲ್ಲಿಗೇರಿಸಿದೆ. ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೊಲೆ ಆರೋಪಿಯನ್ನು ಗಲ್ಲಿಗೇರಿಸಲಾಗಿದೆ.

ಪಶ್ಚಿಮ ಫರಾಹ್ ಪ್ರಾಂತ್ಯದಲ್ಲಿ 2017 ರಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಇರಿದು ಕೊಂದ ಆರೋಪವನ್ನು ಈತ ಹೊಂದಿದ್ದ ಎಂದು ತಾಲಿಬಾನ್ (Taliban) ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. ಇದನ್ನೂ ಓದಿ: ತೆರಿಗೆ ವಂಚನೆ ಪ್ರಕರಣದಲ್ಲಿ ಟ್ರಂಪ್ ಕುಟುಂಬದ ಸಂಸ್ಥೆಗೆ ದಂಡ

ಕೊಲೆ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ತಾಲಿಬಾನ್‌

ಈ ಪ್ರಕರಣವನ್ನು ಮೂರು ನ್ಯಾಯಾಲಯಗಳು ತನಿಖೆ ಮಾಡಿವೆ. ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ನೆಲೆಸಿರುವ ತಂಡದ ಅತ್ಯುನ್ನತ ಆಧ್ಯಾತ್ಮಿಕ ನಾಯಕರಿಂದ ಶಿಕ್ಷೆಯನ್ನು ಅಧಿಕೃತಗೊಳಿಸಲಾಗಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಆದರೆ ವ್ಯಕ್ತಿಯನ್ನು ಹೇಗೆ ಗಲ್ಲಿಗೇರಿಸಲಾಯಿತು ಎಂದು ಅವರು ಹೇಳಿಲ್ಲ.

10ಕ್ಕೂ ಹೆಚ್ಚು ಹಿರಿಯ ತಾಲಿಬಾನ್ ಅಧಿಕಾರಿಗಳು ಮರಣದಂಡನೆ ಶಿಕ್ಷೆ ಸಂದರ್ಭದಲ್ಲಿ ಹಾಜರಾಗಿದ್ದರು. ಹಂಗಾಮಿ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ, ಮತ್ತು ಹಾಲಿ ಉಪ ಪ್ರಧಾನಿ ಅಬ್ದುಲ್ ಘನಿ ಬರಾದಾರ್, ದೇಶದ ಮುಖ್ಯ ನ್ಯಾಯಮೂರ್ತಿ, ಹಂಗಾಮಿ ವಿದೇಶಾಂಗ ಮಂತ್ರಿ ಮತ್ತು ಹಾಲಿ ಶಿಕ್ಷಣ ಸಚಿವರು ಇದ್ದರು. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ವರ್ಷವಿಡೀ ಶಾಲೆಗೆ ಹೋಗಲು ನಿರ್ಬಂಧಿಸಿದ ತಾಲಿಬಾನ್ ಪರೀಕ್ಷೆ ಬರೆಯಲು ಅನುಮತಿ

ತಾಲಿಬಾನ್‌ನ ಆಧ್ಯಾತ್ಮಿಕ ನಾಯಕ, ನ್ಯಾಯಾಧೀಶರನ್ನು ಭೇಟಿಯಾಗಿ ಷರಿಯಾ ಕಾನೂನಿಗೆ ಅನುಗುಣವಾಗಿ ಶಿಕ್ಷೆಯನ್ನು ನೀಡಬೇಕು ಎಂದು ಹೇಳಿದ್ದರು. 1996-2001ರ ಸಂದರ್ಭದಲ್ಲಿ ತಾಲಿಬಾನ್ ಆಡಳಿತದಲ್ಲಿ ಕಲ್ಲೆಸೆತದ ಮೂಲಕ ಮರಣದಂಡನೆ ನೀಡಲಾಗಿತ್ತು.

Live Tv

Leave a Reply

Your email address will not be published. Required fields are marked *

Back to top button