ದಾವಣಗೆರೆ: ಟಾಕಿಸ್ ಒಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಪೀಠೋಪಕರಣಗಳು ಭಸ್ಮವಾದ ಘಟನೆ ಹರಿಹರ (Harihara) ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.
ಕಳೆದ ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣೇಶ ಚಿತ್ರಮಂದಿರದಲ್ಲಿ ಈ ಅವಘಡ ಸಂಭವಿಸಿದೆ. ಇದರಿಂದ ಆಸನಗಳು ಸೇರಿದಂತೆ ಹಲವು ಪರಿಕರಗಳು ಸುಟ್ಟು ಭಸ್ಮವಾಗಿದೆ. ಇದರಿಂದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿದೆ. ಇದರಿಂದ ಆತಂಕಕ್ಕೊಳಗಾದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರಮಂದಿರ ಬಂದ್ ಆಗಿದ್ದರಿಂದ ಅಲ್ಲಿ ಯಾರೂ ಜನ ಇರಲಿಲ್ಲ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.