ನವದೆಹಲಿ: ವಿಮಾನದಲ್ಲಿ (Flight) ವ್ಯಕ್ತಿಯೊಬ್ಬ ಫೋನ್‌ನಲ್ಲಿ ಬಾಂಬ್ (Bomb) ಕುರಿತು ಸಂಭಾಷಣೆ ಮಾಡಿದ್ದಕ್ಕೆ ಆತನನ್ನು ಬಂಧಿಸಿರುವ ಘಟನೆ ದೆಹಲಿಯ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ನಡೆದಿದೆ.
ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಜೀಂ ಖಾನ್ ಎಂದು ಗುರುತಿಸಲಾಗಿದ್ದು, ಆತ ವಿಸ್ತಾರ ವಿಮಾನ (Vistara Airlines) ಸಂಖ್ಯೆ ಯುಕೆ-981ರಲ್ಲಿ ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ. ಈ ವೇಳೆ ಆತ ತನ್ನ ಫೋನ್‌ನಲ್ಲಿ ಬಾಂಬ್ ಕುರಿತು ಮಾತನಾಡುತ್ತಿದ್ದ. ಇದನ್ನು ಸಹ ಪ್ರಯಾಣಿಕರೊಬ್ಬರು ಕೇಳಿಸಿಕೊಂಡಿದ್ದಾರೆ.
- Advertisement3
ಆರೋಪಿ ಬಾಂಬ್ ಕುರಿತು ವಿಮಾನದಲ್ಲಿ ಮಾತನಾಡುತ್ತಿದ್ದುದನ್ನು ಕೇಳಿಸಿಕೊಂಡ ಮಹಿಳೆ ತಕ್ಷಣ ವಿಮಾನದ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಸಿಬ್ಬಂದಿ ಆರೋಪಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (CIF) ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್ – ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರಿಗೆ?
- Advertisement
ಬಳಿಕ ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಫೋನ್‌ನಲ್ಲಿ ಆತ ಬಾಂಬ್ ಕುರಿತು ಸಂಭಾಷಣೆ ಮಾಡುತ್ತಿದ್ದುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ