ಮೈಸೂರು: ಮದ್ಯದ ನಶೆಯಲ್ಲಿದ್ದ ತಾಲೂಕು ಪಂಚಾಯ್ತಿ ಸದಸ್ಯ ಮತ್ತೊಬ್ಬ ಸದಸ್ಯನ ಮೇಲೆ ಹಲ್ಲೆ ಮಾಡಿರುವ ಘಟನೆ ಮೈಸೂರಿನ ಮಿನಿ ವಿಧಾನಸೌಧದಲ್ಲಿರುವ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದಿದೆ.
ವಾಜಮಂಗಲ ತಾಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯ ಮಂಜುನಾಥ್, ಶ್ರೀರಾಂಪುರ ತಾಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯ ಹನುಮಂತು ಮೇಲೆ ಹಲ್ಲೆ ನಡೆಸಿದ್ದಾರೆ. ಸದಸ್ಯ ಹನುಮಂತು ಮೇಲೆ ಮಂಜುನಾಥ್ ಹೆಲ್ಮೆಟ್ ನಿಂದ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತಾಲೂಕು ಪಂಚಾಯ್ತಿ ಕಚೇರಿಯ ಒಳಗೆ ಕುಳಿತಿದ್ದ ವೇಳೆಯೇ ಏಕಾಏಕಿ ಕಚೇರಿ ಒಳಗೆ ಬಂದ ಮಂಜುನಾಥ್, ಸದಸ್ಯ ಹನುಮಂತು ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಹನುಮಂತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಿಢೀರ್ ನಡೆದ ಘಟನೆಯಿಂದ ಇತರೆ ತಾಲೂಕು ಪಂಚಾಯ್ತಿ ಸದಸ್ಯರು ತಬ್ಬಿಬ್ಬಾಗಿದ್ದಾರೆ. ಈ ಬಗ್ಗೆ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv