ನಟ ವಿಜಯ್ ವರ್ಮಾ (Vijay Varma) ಜೊತೆ ಬ್ರೇಕಪ್ ಆದ್ಮೇಲೆ ಸಿನಿಮಾದತ್ತ ತಮನ್ನಾ (Tamannaah Bhatia) ಹೆಚ್ಚು ಫೋಕಸ್ ಮಾಡ್ತಿದ್ದಾರೆ. ಬಾಲಿವುಡ್‌ನಲ್ಲಿ ನಟಿಗೆ ಬಿಗ್ ಚಾನ್ಸ್‌ವೊಂದು ಸಿಕ್ಕಿದೆ. ಲವರ್ ಬಾಯ್ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಮಿಲ್ಕಿ ಬ್ಯೂಟಿ ರೊಮ್ಯಾನ್ಸ್ ಮಾಡಲಿದ್ದಾರೆ. ಇದನ್ನೂ ಓದಿ:1.12 ಕೋಟಿ ಮೌಲ್ಯದ ದುಬಾರಿ ಕಾರು ಖರೀದಿಸಿದ ಸಿದ್ಧಾರ್ಥ್ ಮಲ್ಹೋತ್ರಾ
ಪೌರಾಣಿಕ ಕುರಿತಾದ ‘ವ್ವಾನ್’ ಚಿತ್ರಕ್ಕಾಗಿ ಏಕ್ತಾ ಕಪೂರ್ ಜೊತೆ ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರವನ್ನು ದೀಪಕ್ ಮಿಶ್ರಾ ಎಂಬುವವರು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ತಮನ್ನಾರನ್ನು ಆಯ್ಕೆ ಮಾಡಲಾಗಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:‘ಜೈಲರ್ 2’ ಶೂಟಿಂಗ್ ನಡುವೆ ರಜನಿಕಾಂತ್ ಟೆಂಪಲ್ ರನ್
ಸಿದ್ಧಾರ್ಥ್ ಜೊತೆ ತಮನ್ನಾ ಈ ಹೊಸ ಜೋಡಿಯನ್ನು ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರೆ. ಈಗಾಗಲೇ ನಟಿಯೊಂದಿಗೆ ಚಿತ್ರತಂಡ ಮಾತುಕತೆ ನಡೆಸಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ತಮನ್ನಾನೇ ನಾಯಕಿನಾ? ಎಂಬುದನ್ನು ಚಿತ್ರತಂಡ ತಿಳಿಸಬೇಕಿದೆ.
ಅಂದಹಾಗೆ, ತಮನ್ನಾ ಭಾಟಿಯಾಗೆ ಬಾಲಿವುಡ್‌ನಲ್ಲಿ ಮಾತ್ರವಲ್ಲ, ತೆಲುಗು, ತಮಿಳಿನಲ್ಲೂ ಭಾರೀ ಬೇಡಿಕೆಯಿದೆ. ನಾಯಕಿಯಾಗುವುದರ ಜೊತೆಗೆ ಸ್ಪೆಷಲ್ ಹಾಡಿಗೆ ಡ್ಯಾನ್ಸ್ ಮಾಡೋದ್ದಕ್ಕೂ ಅವರಿಗೆ ಡಿಮ್ಯಾಂಡ್ ಇದೆ.