ಕಾಲಿವುಡ್ ನಟ ಅಜಿತ್ ಕುಮಾರ್‌ಗೆ (Ajith Kumar) ಕಾಲಿಗೆ ಪೆಟ್ಟಾದ ಹಿನ್ನೆಲೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸುದ್ದಿ ಕೇಳಿ ನಟನ ಅಭಿಮಾನಿಗಳು ಆತಂಕದಲ್ಲಿದ್ದಾರೆ. ಇದನ್ನೂ ಓದಿ:ಸೆಟ್ಟೇರಿತು ಸೂರಿ, ಯುವ ಸಿನಿಮಾ- ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಪುತ್ರಿ ನಾಯಕಿ
ಏ.28ರಂದು ಅಜಿತ್ ಕುಮಾರ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದರು. ಬಳಿಕ ನಿನ್ನೆ (ಏ.29) ನವದೆಹಲಿಯಿಂದ ಚೆನ್ನೈಗೆ ಅಜಿತ್ ವಾಪಸ್ ಆದರು. ಈ ವೇಳೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಈ ನೂಕುನುಗ್ಗಲಿನಲ್ಲಿ ಅಜಿತ್‌ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:ಅಜಿತ್ ಕುಮಾರ್, ಬಾಲಯ್ಯಗೆ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಸಣ್ಣ ಪ್ರಮಾಣದ ಗಾಯವಾಗಿದ್ದು, ಶೀಘ್ರದಲ್ಲಿಯೇ ಅಜಿತ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಈ ವಿಚಾರ ತಿಳಿದು ನೆಚ್ಚಿನ ನಟ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇತ್ತೀಚೆಗೆ ಅಜಿತ್ ಕುಮಾರ್ ನಟಿಸಿದ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರ ಸಕ್ಸಸ್ ಕಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಚಿತ್ರ ಕೋಟಿಗಟ್ಟಲೇ ಕಲೆಕ್ಷನ್ ಮಾಡಿದೆ.