CinemaLatestMain PostSouth cinema
ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು

Advertisements
ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಜಿ.ಎಂ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
1986ರಲ್ಲಿ `ಅರುವಾಡೈ ನಾಲ್’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಮೂಲಕ ತಮಿಳು ಚಿತ್ರರಂಗಕ್ಕೆ ಜಿ.ಎಂ ಕುಮಾರ್ ಪಾದಾರ್ಪಣೆ ಮಾಡಿದ್ದರು. ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡಿದ ಬಳಿಕ ನಂದಿ ಪ್ರಶಸ್ತಿಗೂ ಪಾತ್ರರಾಗಿದ್ದರು. ಇದೀಗ ಜಿ.ಎಂ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ:ಅನುರಾಗ್ ಕಶ್ಯಪ್ ನಿರ್ದೇಶನದ ಸಿನಿಮಾದಲ್ಲಿ ಸನ್ನಿ ಲಿಯೋನ್
ನಟ ಜಿ.ಎಂ ಕುಮಾರ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ನಟ ಚಿಕಿತ್ಸೆಗೆ ಸ್ಪಂದಿಸುವವರೆಗೂ ಕಾದುನೋಡಬೇಕಿದೆ.
Live Tv